Thursday, September 29, 2022

ಇಂದು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಭರದ ಸಿದ್ದತೆ-ನಾಳೆ ವಿಟ್ಲ ಪಿಂಡಿ

ಉಡುಪಿ: ಕೃಷ್ಣಮಠದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಆ.20 ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಪರ್ಯಾಯ ಕೃಷ್ಣಾಪುರ ಮಠದ ನೇತೃತ್ವದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.


ಭಕ್ತರಿಗೆ ಪ್ರಸಾದವಾಗಿ ಹಂಚಲು ಚಕ್ಕುಲಿ ಹಾಗೂ ಬಗೆಬಗೆಯ ಉಂಡೆಗಳ ತಯಾರಿ ಕಾರ್ಯಕ್ಕೆ ಗುರುವಾರ ಮಠದಲ್ಲಿ ಚಾಲನೆ ನೀಡಲಾಯಿತು. ವಿಟ್ಲಪಿಂಡಿಯ ದಿನ ಭಕ್ತರಿಗೆ ಪ್ರಸಾದವಾಗಿ ಚಕ್ಕುಲಿ ಹಾಗೂ ಉಂಡೆಗಳನ್ನು ವಿತರಿಸಲಾಗುತ್ತದೆ.

ಇಂದು ಮಧ್ಯರಾತ್ರಿ ಶುಭ ಮೂಹೂರ್ತದಲ್ಲಿ ಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. 20ರಂದು ಮಧ್ಯಾಹ್ನ ರಥಬೀದಿಯಲ್ಲಿ ವಿಟ್ಲಪಿಂಡಿ ಉತ್ಸವಕ್ಕೆ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.
ಅಂದು ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಚಿನ್ನದ ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಗುತ್ತದೆ. ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ದೃಶ್ಯ ನೋಡಲು ಸಾವಿರಾರು ಭಕ್ತರು ಆಗಮಿಸುತ್ತಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಾಂತರ ರೂ. ಪಂಗನಾಮ-ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್‌ನಲ್ಲಿ ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಕ್ಕೆ ಸಂಬಂಧಿಸಿ ಭಾರ್ಗವಿ ಫೈನಾನ್ಸ್‌ ಮಾಲಕ ಅಶೋಕ್ ಭಟ್ ಮತ್ತು ಆತನ‌ ಪತ್ನಿ ವಿದ್ಯಾಭಟ್...

ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಆಡಳಿತದ ಜೊತೆ ವಿಲೀನವಾದ ಪದವಿನಂಗಡಿ ವಿಕಾಸ್ ಕಾಲೇಜು

ಮಂಗಳೂರು: ಮಂಗಳೂರು ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಇದರ ಆಡಳಿತ ಮಂಡಳಿಯಲ್ಲಿ ನಗರದ ಹೆಸರಾಂತ ಶಿಕ್ಷಣ ಸಂಸ್ಥೆಯಾಗಿರುವ ವಿಕಾಸ್ ಎಜುಕೇಶನ್ ಟ್ರಸ್ಟ್ ನಿರ್ವಹಿಸುತ್ತಿದ್ದ ಕಾಲೇಜುಗಳು ವಿಲೀನವಾಗಿದೆ.ಮುಂದಿನ ದಿನಗಳಲ್ಲಿ ವಿಕಾಸ್...

ಮುಲ್ಕಿ: ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ

ಮಂಗಳೂರು: ಮನೆಯೊಂದರಲ್ಲಿ ವ್ಯಕ್ತಿಯೋರ್ವ ನಿಗೂಢವಾಗಿ ಸಾವನ್ನಪ್ಪಿದ್ದು ನಾಲ್ಕು ದಿನಗಳ ಬಳಿಕ ಪೊಲೀಸರಿಗೆ ಮಾಹಿತಿ ತಿಳಿದು ಮೃತದೇಹವನ್ನು ತೆರವುಗೊಳಿಸಿದ ಘಟನೆ ಮುಲ್ಕಿಯ ಕಿಲ್ಪಾಡಿ ಮದಕ ಬಳಿ ನಡೆದಿದೆ.ಮೃತ ವ್ಯಕ್ತಿಯನ್ನು ಸ್ಥಳಿಯ ನಿವಾಸಿ ಸುಧೀರ್ ಶೆಟ್ಟಿ...