Connect with us

DAKSHINA KANNADA

ಐತಿಹಾಸಿಕ ಮಂಗಳೂರು ದಸರಾಕ್ಕೆ ಶ್ರೀ ಕ್ಷೇತ್ರ ಕುದ್ರೋಳಿ ಸಜ್ಜು..! ಮೊಬೈಲ್- ಸೆಲ್ಫಿಗೆ ನಿಷೇಧ..

Published

on

ಐತಿಹಾಸಿಕ ಮಂಗಳೂರು ದಸರಾಕ್ಕೆ ಶ್ರೀ ಕ್ಷೇತ್ರ ಕುದ್ರೋಳಿ ಸಜ್ಜು..! ಮೊಬೈಲ್- ಸೆಲ್ಫಿಗೆ ನಿಷೇಧ..

ಮಂಗಳೂರು: ಮಹಾಮಾರಿ ಕೊರೊನಾದ ಮಧ್ಯೆಯೂ ಐತಿಹಾಸಿಕ ಮಂಗಳೂರು ದಸರಾಕ್ಕೆ ಶ್ರೀ ಕ್ಷೇತ್ರ ಕುದ್ರೋಳಿ ಸಜ್ಜಾಗಿದೆ.

ನಗರದ ಕುದ್ರೊಳಿ ಗೋಕರ್ಣನಾಥ ದೇವಸ್ಥಾನದಲ್ಲಿ ದಸರಾ ಮಹೋತ್ಸವಕ್ಕೆ ಕೋವಿಡ್-19ವಾರಿಯರ್ ಆಗಿ ಅವಿರತ ಶ್ರಮಿಸಿದ , ಎನ್‌ಆರ್‌ಐ ಫೋರಂ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಚಾಲನೆ ನೀಡಲಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿಯವರ ಆಶಯದಂತೆ ಮಂಗಳೂರು ದಸರಾ ಮಹೋತ್ಸವವು ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ  ನಡೆಯಲಿದೆ.

ಇನ್ನು ಕೋವಿಡ್‌ ಹಿನ್ನೆಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ವಹಿಸಿಕೊಂಡು ಈ ಬಾರಿ ಕುದ್ರೋಳಿ ದಸರಾ ನಡೆಯಲಿದೆ. 6 ವರ್ಷದೊಳಗಿನ ಮಕ್ಕಳನ್ನು ಉತ್ಸವದ 10 ದಿನ ದೇವಳಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ,

ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು, ಮಾಸ್ಕ್ ಇಲ್ಲದವರಿಗೆ ಪ್ರವೇಶ ನಿಷೇಧ, ದೇವಸ್ಥಾನ ಪ್ರಾಂಗಣ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನ್‌ಗೊಳಪಡಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು,

ದೇವಸ್ಥಾನದ ವಠಾರ, ದೇವಾಲಯದೊಳಗೆ, ದರ್ಬಾರು ಮಂಟಪದಲ್ಲಿ ಮೊಬೈಲ್ ಬಳಕೆ, ಫೋಟೋ, ಸೆಲ್ಫಿ ಕಡ್ಡಾಯ ನಿಷೇಧಿಸಲಾಗಿದೆ.

ಹಿರಿಯ ನಾಗರಿಕರು ಮನೆಯಲ್ಲೇ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ನಮ್ಮ ಕುಡ್ಲ Live ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಶನಿವಾರ ಕಾರ್ಯಕ್ರಮ:

ಅ.17ರ ಶನಿವಾರ ಬೆಳಗ್ಗೆ 9.30ಕ್ಕೆ ಗುರುಪ್ರಾರ್ಥನೆ, 11.30ಕ್ಕೆ ಕಲಶ ಪ್ರತಿಷ್ಠೆ, 12.00 ದಸರಾಕ್ಕೆ ಚಾಲನೆ, 12.30ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ, 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, ಸಂಜೆ 7.00ರಿಂದ ಭಜನಾ ಕಾರ್ಯಕ್ರಮ, 9.00ರಿಂದ ದೇವಿ ಪುಷ್ಪಾಲಂಕಾರ ಪೂಜೆ ನಡೆಯಲಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending