DAKSHINA KANNADA
ಎಸ್ಎಸ್ಎಲ್ಸಿ ಪರೀಕ್ಷೆ : ಮುಡಿಪು ಜ್ಞಾನದೀಪಾ ಶಾಲೆಗೆ ಶೇ. 100 ಫಲಿತಾಂಶ
ಮಂಗಳೂರು : ಮುಡಿಪು ಕುರ್ನಾಡಿನಲ್ಲಿರುವ ಜ್ಞಾನದೀಪಾ ಸ್ಕೂಲ್ ಎಸ್ಎಸ್ಎಲ್ಸಿ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಉತ್ತಮ ಸಾಧನೆ ತೋರಿದ ಎಲ್ಲಾ ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಯ ಡಾ. ಮಂಜುನಾಥ ರೇವಣ್ಕರ್ ಅವರು ಅಭಿನಂದಿಸಿದ್ದಾರೆ.
2023-24 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಯ 30 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಮೂವರು ಡಿಸ್ಟಿಂಕ್ಷನ್ ಹಾಗೂ 15 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ನಲ್ಲಿ ಪಾಸ್ ಆಗಿದ್ದಾರೆ. 582 ಅಂಕ ಪಡೆದಿರುವ ಸಾತ್ವಿಕ್ ಆರ್. ಸಾಮಾನಿ, 537 ಅಂಕ ಪಡೆದಿರುವ ವೀಕ್ಷಿತಾ ಬಿ ಹಾಗೂ 533 ಅಂಕ ಗಳಿಸಿರುವ ಕೀರ್ತನಾ ಎಂ ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ.
ಶಾಲೆಯ ಶಿಕ್ಷಕರು ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು ಶ್ರಮ ವಹಿಸಿದ ಕಾರಣದಿಂದ ಶೇಕಡಾ ನೂರು ಫಲಿತಾಂಶ ಪಡೆಯಲು ಸಾಧ್ಯವಾಗಿದೆ ಎಂದು ಡಾ. ಮಂಜುನಾಥ ರೇವಣ್ಕರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಮೇ.10 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನೆ
ಮುಡಿಪಿನಲ್ಲಿ ವಿಶಾಲವಾದ ಪ್ರದೇಶದಲ್ಲಿ ಸೂರಜ್ ಪಿಯು ಕಾಲೇಜು ಹಾಗೂ ಜ್ಞಾನದೀಪಾ ಹೈಸ್ಕೂಲ್ ಇದ್ದು, ಸಾಕಷ್ಟು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈ ಶಿಕ್ಷಣ ಸಂಸ್ಥೆಯನ್ನು ಡಾ. ಮಂಜುನಾಥ ರೇವಣ್ಕರ್ ಅವರು ಹುಟ್ಟು ಹಾಕಿದ್ದಾರೆ.
DAKSHINA KANNADA
ಹರೇಕಳ ಹಾಜಬ್ಬ ಶಾಲೆಯ ಕಂಪೌಂಡ್ ಕುಸಿತ..! ವಿದ್ಯಾರ್ಥಿನಿ ಸಾ*ವು..!
ಮಂಗಳೂರು : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್ ವಾಲ್ ಕುಸಿತಗೊಂಡಿದೆ. ಕುಸಿತಗೊಂಡ ವಾಲ್ ಅಡಿಗೆ ಸಿಲುಕಿದ 3 ನೇ ತರಗತಿ ವಿದ್ಯಾರ್ಥಿನಿ ಅಸುನೀಗಿದ್ದಾಳೆ. ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ಮೇ 20ರ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಜೆ ವೇಳೆ ಸುರಿದ ಧಾರಕಾರ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ.
ನ್ಯೂಪಡ್ಪು ನಿವಾಸಿ ಸಿದ್ದೀಖ್ – ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತ ಬಾಲಕಿ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಭಾಗವಹಿಸಿದ್ದಳು.
ಸಂಜೆ ವೇಳೆ ಮನೆಗೆ ಹಿಂತಿರುಗುವ ಸಂದರ್ಭ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದಿದೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಧಾವಿಸಿದರೂ, ಬಾಲಕಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬೆಳಿಗ್ಗೆಯಿಂದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗ ಮಳೆಯಾಗುತ್ತಿದ್ದು, ಇದರಿಂದಾಗಿ ಕಂಪೌಂಡ್ ಶಿಥಿಲಗೊಂಡು ಬಿದ್ದಿದೆ. ಘಟನಾ ಸ್ಥಳಕ್ಕೆ ಹರೇಕಳ ಗ್ರಾ.ಪಂ ಅಧಿಕಾರಿಗಳು, ಕೊಣಾಜೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
DAKSHINA KANNADA
ಪಡೀಲ್ ಕಣ್ಣೂರು ಬಳಿ ಭೀಕರ ವಾಹನ ಅಪಘಾ*ತ; ಕೇಬಲ್ ಟೆಕ್ನಿಷಿಯನ್ ವಿಧಿವ*ಶ
ಮಂಗಳೂರು : ಪಡೀಲ್ ಕಣ್ಣೂರು ಬಳಿ ನಡೆದ ರಸ್ತೆ ಅಪಘಾ*ತದಲ್ಲಿ ನಮ್ಮ ಕುಡ್ಲ ವಾಹಿನಿಯ ಸಹಸಂಸ್ಥೆ ವಿಝಾರ್ಡ್ ಕೇಬಲ್ ನೆಟ್ ವರ್ಕ್ನ ಸಿಬಂದಿ ಹರೀಶ್ (45) ವಿಧಿವ*ಶರಾಗಿದ್ದಾರೆ. ಕರ್ತವ್ಯ ನಿಮಿತ್ತ ಫರಂಗಿಪೇಟೆಗೆ ತೆರಳಿದ್ದ ಹರೀಶ್ ಪಡೀಲ್ ಕಣ್ಣೂರು ಬಳಿ ಬೈಕ್ ನಿಲ್ಲಿಸಿದ್ದ ವೇಳೆ ವೇಗವಾಗಿ ಬಂದ ಡಸ್ಟರ್ ಕಾರೊಂದು ಬೈಕ್ಗೆ ಡಿ*ಕ್ಕಿ ಹೊಡೆದಿದೆ.
ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದು, ಬೈಕ್ಗೆ ಡಿ*ಕ್ಕಿ ಹೊಡೆದ ಬಳಿಕ ಅಲ್ಪ ದೂರ ಚಲಿಸಿದ ಕಾರಣ ಬೈಕ್ ಸಹಿತ ಹರೀಶ್ ಕಾರಿನ ಅಡಿಗೆ ಸಿಲುಕಿಕೊಂಡಿದ್ದರು. ಈ ಭೀಕರ ಅಪಘಾ*ತದಲ್ಲಿ ಗಂಭೀರ ಗಾಯಗೊಂಡಿದ್ದ ಹರೀಶ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಹರೀಶ್ ಕಲ್ಲಾಪು ಅವರು ಹಲವಾರು ವರ್ಷಗಳಿಂದ ವಿಝಾರ್ಡ್ ಕೆಬಲ್ ನೆಟ್ವರ್ಕ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿ*ಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾ*ವು
ಅಗಲಿದ ಸಿಬ್ಬಂದಿಗೆ ನಮ್ಮ ಕುಡ್ಲ ವಾಹಿನಿಯ ನಿರ್ದೇಶಕರು ಹಾಗೂ ಸಿಬಂದಿ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃ*ತ ಹರೀಶ್ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
DAKSHINA KANNADA
ಕದ್ದ ಫೋನ್ ಸ್ವಿಚ್ ಆಫ್ ಆಗಿದ್ರೂ ಸುಲಭದಲ್ಲಿ ಕಂಡುಹಿಡಿಯಬಹುದು.. ಹೇಗೆ ಗೊತ್ತಾ?
ಮಂಗಳೂರು: ನಿಮ್ಮ ಸ್ಮಾರ್ಟ್ಫೋನ್ ಕದ್ದರೆ ಮತ್ತು ಕಳ್ಳರು ಆ ಫೋನನ್ನು ಸ್ವಿಚ್ ಆಫ್ ಮಾಡಿದರೆ ಅದನ್ನು ಹುಡುಕುವುದು ದೊಡ್ಡ ಕಷ್ಟ. ಆದರೆ ಮುಂಬರುವ ಗೂಗಲ್ನ ನವೀಕರಣ, ಆಂಡ್ರಾಯ್ಡ್ ಬಳಕೆದಾರರ ಫೋನ್ ಸ್ವಿಚ್ ಆಫ್ ಆಗಿದ್ದರೂ ಅವರ ಸ್ಮಾರ್ಟ್ಫೋನ್ ನಿಖರವಾದ ಸ್ಥಳವನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ.
ಗೂಗಲ್ ಶೀಘ್ರದಲ್ಲೇ ತನ್ನ ಆಂಡ್ರಾಯ್ಡ್ 15 ಅಪ್ಡೇಟ್ ಅನ್ನು ತರಲಿದೆ. ಇದನ್ನು ಇನ್ಸ್ಟಾಲ್ ಮಾಡಿದ ನಂತರ ಆಂಡ್ರಾಯ್ಡ್ ಬಳಕೆದಾರರು ಸ್ವಿಚ್ ಆಫ್ ಮಾಡಿದ ನಂತರವೂ ತಮ್ಮ ಫೋನ್ ಅನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ. ಇಲ್ಲಿಯವರೆಗೆ ಈ ವೈಶಿಷ್ಟ್ಯವು ಆಂಡ್ರಾಯ್ಡ್ ಫೋನ್ಗಳಲ್ಲಿ ಲಭ್ಯವಿರಲಿಲ್ಲ.
ಗೂಗಲ್ ಕಂಪನಿಯು ಆಂಡ್ರಾಯ್ಡ್ 15 ಸಿಸ್ಟಮ್ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಗೂಗಲ್ನ ಮುಂಬರುವ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಆಗಿದೆ. ಆಂಡ್ರಾಯ್ಡ್ 15 ಓಎಸ್ನಲ್ಲಿ ಸ್ಮಾರ್ಟ್ಫೋನ್ ಬಳಕೆದಾರರಿಗೆ ಗೂಗಲ್ ಉತ್ತಮ ವೈಶಿಷ್ಟ್ಯವನ್ನು ನೀಡಲಿದೆ. ಇದರಲ್ಲಿ ಬಳಕೆದಾರರಿಗೆ ಫೋನ್ ಸ್ವಿಚ್ ಆಫ್ ಆಗಿದ್ದರೂ ಅದನ್ನು ಪತ್ತೆ ಮಾಡುವ ಆಯ್ಕೆ ಕೂಡ ಒಂದು.
ಗೂಗಲ್ನ ಮುಂಬರುವ OS ಆಂಡ್ರಾಯ್ಡ್ 15 ನಲ್ಲಿ ಪಾಸ್ವರ್ಡ್ ಮೂಲಕ ಹುಡುಕುವ ವೈಶಿಷ್ಟ್ಯವು ಲಭ್ಯವಿರುತ್ತದೆ. ಈ ಹೊಸ ವ್ಯವಸ್ಥೆಯು ಪೂರ್ವ ಕಂಪ್ಯೂಟೆಡ್ ಬ್ಲೂಟೂತ್ ಬೀಕನ್ ಆಗಿರುತ್ತದೆ. ಇದು ಸಾಧನದ ಮೆಮೊರಿಯಿಂದ ನಿಯಂತ್ರಿಸಲ್ಪಡುತ್ತದಂತೆ. ಇದಕ್ಕಾಗಿ ಫೋನ್ನ ಹಾರ್ಡ್ವೇರ್ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಆಂಡ್ರಾಯ್ಡ್ ತಜ್ಞ ಮಿಶಾಲ್ ರೆಹಮಾನ್ ಈ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಪಿಕ್ಸೆಲ್ 8 ಮತ್ತು ಪಿಕ್ಸೆಲ್ 8 ಪ್ರೊ ಜೊತೆಗೆ ಗೂಗಲ್ನ ಮುಂಬರುವ ಸ್ಮಾರ್ಟ್ಫೋನ್ಗಳಲ್ಲಿ ಈ ವೈಶಿಷ್ಟ್ಯವನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರಸ್ತುತ ಆಂಡ್ರಾಯ್ಡ್ 15 ಓಎಸ್ ಬಿಡುಗಡೆಗೆ ಯಾವುದೇ ನಿಖರವಾದ ದಿನಾಂಕವನ್ನು ಗೂಗಲ್ ಬಹಿರಂಗಪಡಿಸಿಲ್ಲ.
- DAKSHINA KANNADA1 day ago
ವೈರಲ್ ಆಯ್ತು ಮೆಟರ್ನಿಟಿ ಶೂಟ್..! ಮೆಚ್ಚುಗೆ ಪಡೆದ ಫೋಟೋಗ್ರಾಫರ್..!
- LATEST NEWS2 days ago
ಕೊನೆಗೂ ಮೌನ ಮುರಿದ ಎಚ್ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?
- LATEST NEWS5 days ago
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ
- FILM6 days ago
ದರ್ಶನ್ ಸಿನಿಮಾಗೆ ಸಹಿ ಹಾಕಲು ಬಂದಿದ್ದರು ಪವಿತ್ರಾ ಜಯರಾಮ್; ಅಪಘಾ*ತದಲ್ಲಿ ಮೃ*ತಪಟ್ಟಿಲ್ಲ ಅಂದ್ರು ಸಹನಟ