ಬೆಂಗಳೂರು: ಈ ವರ್ಷ ಇದೇ ಜುಲೈ 19 ಮತ್ತು ಜುಲೈ 22 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಜು.19ರಂದು ಕೋರ್ ವಿಷಯಗಳ ಪರೀಕ್ಷೆ ಮತ್ತು ಜುಲೈ 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಲಾಖೆಯ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಮಾತನಾಡಿದ ಅವರು, ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ. 73,066 ಪರೀಕ್ಷಾ ಕೇಂದ್ರಗಳಿವೆ. ಕಳೆದ ಬಾರಿ 6 ದಿನಗಳ ಪರೀಕ್ಷೆ ನಡೆಸಿದ್ದೆವು. ಈ ಬಾರಿ ಎರಡು ದಿನ ನಡೆಯಲಿದೆ ಎಂದು ಮಾಹಿತಿ ನೀಡಿದರು. ಮೂರು ವಿಷಯಗಳಿಗೆ ಒಂದು ಪರೀಕ್ಷೆ ಇರುತ್ತೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಒಂದು ದಿನ ನಡೆಯಲಿದೆ. ಈ ಪರೀಕ್ಷೆ ಜುಲೈ 19ರಂದು ನಡೆಯಲಿದೆ. ಉಳಿದ ಭಾಷಾ ವಿಷಯಗಳ ಪರೀಕ್ಷೆ ಜು.22ರಂದು ನಡೆಯಲಿದೆ ಎಂದು ತಿಳಿಸಿದರು.
ಕರಾವಳಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನದಲ್ಲಿ ಏರುಪೇರಾಗುತ್ತಿದೆ. ಮುಂಜಾನೆ ಚಳಿ, ಮಧ್ಯಾಹ್ನ ಬಿಸಿಲು ಕಾಣಿಸಿ ಕೊಂಡು ವೈರಲ್ ಕಾಯಿಲೆಗಳಿಗೆ ವೇದಿಕೆಯಾಗುತ್ತಿದೆ. ಡಿಸೆಂಬರ್, ಜನವರಿಯಲ್ಲಿ ಚಳಿಗಾಲ ಸಾಮಾನ್ಯವಾಗಿ ಆರಂಭವಾಗುತ್ತದೆ. ಆದರೆ ಈ ಬಾರಿ ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಚಳಿ ತುಸು ಹೆಚ್ಚು ಕಾಣಿಸಿಕೊಳ್ಳುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆರೋಗ್ಯ ಇಲಾಖೆ ಕೂಡ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಿಕೊಳ್ಳಿ ಎಂದು ಮಾಹಿತಿ, ಜಾಗೃತಿ ನೀಡುತ್ತಿದ್ದರೂ, ಪದೇ ಪದೆ ಚಳಿಯಿಂದಾಗಿ ಶೀತ, ಜ್ವರ, ಕೆಮ್ಮು, ಅಸ್ತಮಾದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ವೈದ್ಯರ ಬಳಿಗೆ ಹೋಗಿ ಔಷಧ ಪಡೆದುಕೊಳ್ಳುವವರ ಸಂಖ್ಯೆಯೂ ಹೆಚ್ಚಳಗೊಂಡಿದೆ.
ಪರೀಕ್ಷೆ ಜತೆಗೆ ಕಾಯಿಲೆಗಳ ಚಿಂತೆ :
ಜನವರಿ ತಿಂಗಳಲ್ಲಿ ಬಹಳಷ್ಟು ಶಾಲಾ-ಕಾಲೇಜುಗಳಲ್ಲಿ ಪರೀಕ್ಷಾ ಸಮಯ ಆದರೆ ಜ್ವರದಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಯಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಉದ್ದೇಶದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡುತ್ತಿದ್ದಾರೆ. ಮಕ್ಕಳಿಂದ ಮಕ್ಕಳಿಗೆ ಜ್ವರ ಹರಡುವ ಪ್ರಮೇಯ ಹೆಚ್ಚಾಗಿರುವುದರಿಂದ ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆಗೆ ಸೂಚನೆ ರವಾನಿಸುವ ಕೆಲಸ ಮಾಡಿದೆ.
ಕರಾವಳಿಯಲ್ಲಿ ಚಳಿ ಇಳಿಕೆ ಸಾಧ್ಯತೆ :
ಉತ್ತರ ಭಾರತದಿಂದ ಬೀಸುತ್ತಿರುವ ಗಾಳಿ ಕಡಿಮೆಯಾಗಿ ಬಂಗಾಳಕೊಲ್ಲಿ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಮಾಣ ಜಾಸ್ತಿಯಾಗುವ ಕಾರಣ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಉಂಟಾಗಲಿದೆ. ಇದರಿಂದ ಚಳಿ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಜ.13ರಂದು ಕರಾವಳಿ, ಮಲೆನಾಡು ಭಾಗದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬಳಿಕ ಚಳಿಯ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದ್ದು, ವಾತಾವರಣ ದಲ್ಲಿ ತೇವಾಂಶ ಇದ್ದರೆ ಚಳಿ ಕಡಿಮೆಯಾಗಬಹುದು. ಆದರೆ ಒಣಹವೆ ಇದ್ದರೆ ಮಾತ್ರ ಚಳಿ ಏರಿಕೆಯಾಗಲಿದೆ. ಕೆಲವು ದಿನಗಳಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮುಂಜಾನೆ ಕನಿಷ್ಠ ತಾಪಮಾನ ಇಳಿಕೆಯಾಗಿ 20-21 ಡಿ.ಸೆ. ಆಸುಪಾಸಿನಲ್ಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಇನ್ನೂ 1-2 ಡಿ.ಸೆ.ನಷ್ಟು ಇಳಿಕೆಯಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿ ಮುಂಜಾನೆ 8-9 ಗಂಟೆಯವರೆಗೂ ಚಳಿ ಅನುಭವವಾಗುತ್ತಿದೆ. ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆ ಸಹಿತ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಶೀತ ಗಾಳಿ ಬೀಸುವ ಎಚ್ಚರಿಕೆ ನೀಡಿದ್ದು, ಕನಿಷ್ಢ ತಾಪಮಾನ ವಾಡಿಕೆಗಿಂತ ಇನ್ನೂ 2-4 ಡಿ.ಸೆ. ವರೆಗೆ ಕಡಿಮೆಯಾಗುವ ಸಾಧ್ಯತೆಯಿದೆ.
ಮಂಗಳೂರು: ಅ*ಕ್ರಮವಾಗಿ ಮುಕ್ಕ ಗ್ರಾಮದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25)ನನ್ನು ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.
ಅನರುಲ್ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಮಂಗಳೂರು : ‘ಡ್ರ*ಗ್ಸ್ ಫ್ರಿ ಮಂಗಳೂರು’ ಅಭಿಯಾನದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಗೋವಾದಿಂದ ಮಂಗಳೂರಿಗೆ ಮತ್ತು ಕೇರಳಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯೋರ್ವನನ್ನು ದಸ್ತಗಿರಿ ಮಾಡಿದ್ದಾರೆ. ಆತನಿಂದ 73 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂ*ಜಾ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕೇರಳದ ಕೋಝಿಕೋಡ್ ಜಿಲ್ಲೆಯ ಕಂದಲಾಡ್ ಗ್ರಾಮದ ಕುನ್ನು ಹೌಸ್ ನಿವಾಸಿ ಶಮೀರ್ ಪಿ.ಕೆ. ಬಂಧಿತ ಆರೋಪಿ. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮೂಲ್ಕಿ ಬಪ್ಪನಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರೊಂದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ ಹೈಡ್ರೋವಿಡ್ ಗಾಂ*ಜಾ ಪತ್ತೆಯಾಗಿದೆ.
ಆರೋಪಿಯಿಂದ 73 ಲಕ್ಷ ರೂಪಾಯಿ ಮೌಲ್ಯದ 738 ಗ್ರಾಂ ಹೈಡ್ರೋವಿಡ್ ಗಾಂ*ಜಾ, ಕೇರಳ ನೋಂದಣಿಯ ಕೆಂಪು ಬಣ್ಣದ ಹುಂಡೈ ಕಂಪೆನಿಯ ಕಾರು ಮತ್ತು ಮೊಬೈಲ್ ಫೋನ್ ಸೇರಿದಂತೆ ಒಟ್ಟು 80,10,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹೈಡ್ರೋವಿಡ್ ಗಾಂ*ಜಾವನ್ನು ವಿದೇಶದಿಂದ ತಂದಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್ ಎಂ., ಪಿಎಸ್ಐ ಶರಣಪ್ಪ ಭಂಡಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.