Home ಕರ್ನಾಟಕ ವಾರ್ತೆ ಕೊರೊನಾ ಭೀತಿ ಎಸ್.ಎಸ್.ಎಲ್.ಸಿ ಹಾಗೂ ವಿವಿಧ ನೇಮಕಾತಿ ಪರೀಕ್ಷೆಗಳು ಮುಂದೂಡಿಕೆ

ಕೊರೊನಾ ಭೀತಿ ಎಸ್.ಎಸ್.ಎಲ್.ಸಿ ಹಾಗೂ ವಿವಿಧ ನೇಮಕಾತಿ ಪರೀಕ್ಷೆಗಳು ಮುಂದೂಡಿಕೆ

ಕೊರೊನಾ ಭೀತಿ ಎಸ್.ಎಸ್.ಎಲ್.ಸಿ ಹಾಗೂ ವಿವಿಧ ನೇಮಕಾತಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ಕೊರೋನ ವೈರಸ್ ಸೋಂಕು ಭೀತಿ  ಹಿನ್ನಲೆಯಲ್ಲಿ ಮಾ.27ರಿಂದ ಆರಂಭವಾಗಬೇಕಿದ್ದ ಎಸೆಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಇದರ ಜೊತೆಗೆ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಗಳನ್ನು ಮುಂದೂಡಲು ತೀರ್ಮಾನ ಮಾಡಲಾಗಿದೆ.

ಕೊರೊನ ತಡೆಯುವ ನಿಟ್ಟಿನಲ್ಲಿ ರಾಜ್ಯದ ಜನತೆ, ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ನೀಡಿದ್ದಾರೆ.

ನಗರದ ಜನತೆ ಹಳ್ಳಿಗಳಿಗೆ ಹೋಗದಂತೆ ಮನವಿ ಮಾಡಿದ ಸಿಎಂ, ಕೊರೊನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1,700 ಹಾಸಿಗೆಯ ವಿಶೇಷ ಸಮುಚ್ಚಯವನ್ನು ಮೀಸಲಿಡಲಾಗಿದೆ.

ಅಲ್ಲಿರುವ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದರು. ರಾಜ್ಯದ ಗಡಿಭಾಗವನ್ನು ಸಂಪೂರ್ಣ ಮುಚ್ಚಲಾಗಿದೆ.

ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಮಾಡಲಾಗಿದೆ. ಬಾಲಬ್ರೂಯಿ ಅತಿಥಿ ಗೃಹವನ್ನು ಕೊರೊನ ತಡೆಯ ವಾರ್ ರೂಂ ತೆರೆಯಲಾಗಿದೆ ಎಂದವರು ಮಾಹಿತಿ ನೀಡಿದರು.

ಜನತೆ ಯಾವುದೇ ರೀತಿಯಲ್ಲಿ ಗಾಬರಿಯಾಗುವ ಅಗತ್ಯವಿಲ್ಲ. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಎರಡು ತಿಂಗಳ ಪಡಿತರವನ್ನು ಒಮ್ಮೆಲೆ ವಿತರಿಸಲಾಗುವುದು ಎಂದರು ಹೇಳಿದರು.

- Advertisment -

RECENT NEWS

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...

ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸದ್ದು: ಇಂದು 24 ಮಂದಿಗೆ ಕೊರೊನಾ ಸೋಂಕು ದೃಢ…..!!

ದ.ಕ ಜಿಲ್ಲೆಯಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್… ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆ… ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ 24 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...

ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದು ಹೆಮ್ಮಾರಿಯಂತೆ ವರ್ತಿಸಿದ ಬಿಜೆಪಿ ನಾಯಕಿ ಸೊನಾಲಿ ಪೋಗಟ್..

ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ದರ್ಪ: ವಿಡಿಯೋ ವೈರಲ್... ನವದೆಹಲಿ: ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...