Connect with us

    DAKSHINA KANNADA

    ಮುಂದಿನ ವರ್ಷದಿಂದ ಎಸ್.ಎಸ್.ಎಲ್‌.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್‌- ಮಧು ಬಂಗಾರಪ್ಪ

    Published

    on

    ಮಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್.ಎಸ್.ಎಲ್‌.ಸಿ. ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಮಂಡಳಿ ವತಿಯಿಂದ ಮೂರು ಫೈನಲ್‌ ಎಕ್ಸಾಮ್‌ ನಡೆಸಲಾಗುವುದು.

    ವಿದ್ಯಾರ್ಥಿಗಳು ಅದೇ ವರ್ಷ ಉತ್ತೀರ್ಣರಾಗಿ ಉನ್ನತ ಶಿಕ್ಷಣ ಪಡೆಯಲು ಈ ಕ್ರಮ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

    ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮೊದಲ ಫೈನಲ್‌ ಎಕ್ಸಾಮ್‌ ನಲ್ಲಿ ಅನುತ್ತೀರ್ಣರಾದವರು ಮತ್ತು ಕಡಿಮೆ ಅಂಕ ಗಳಿಸಿದವರು ಅಧಿಕ ಅಂಕ ಪಡೆಯಲು ಬಯಸಿದರೆ 2 ನೇ ಪರೀಕ್ಷೆಗೆ ಹಾಜರಾಗ ಬಹುದು.

    ಹಾಗೆಯೇ ಎರಡನೇ ಫೈನಲ್‌ ಎಕ್ಸಾಮ್‌ ನಲ್ಲಿ ಅನುತ್ತೀರ್ಣರಾದವರು ಮತ್ತು ಕಡಿಮೆ ಅಂಕ ಗಳಿಸಿದವರು ಅಧಿಕ ಅಂಕ ಪಡೆಯಲು ಬಯಸಿದರೆ 3 ನೇ ಫೈನಲ್‌ ಪರೀಕ್ಷೆಗೆ ಹಾಜರಾಗ ಬಹುದು ಎಂದು ತಿಳಿಸಿದರು.

    ವಿದ್ಯಾರ್ಥಿಗಳು ಅದೇ ವರ್ಷ ಉತ್ತೀರ್ಣರಾಗಿ ಕಾಲೇಜು ಶಿಕ್ಷಣ ಪಡೆಯಲು ಇದರಿಂದ ಅನುಕೂಲವಾಗುವುದು.

    ಎರಡನೇ ಮತ್ತು ಮೂರನೇ ಪರೀಕ್ಷೆಗಳು ಸುಮಾರು 15 ದಿನಗಳ ಅಂತರದಲ್ಲಿ ನಡೆಯಲಿವೆ.

    ಮೂರನೇ ಫೈನಲ್‌ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಕಾಲೇಜು ಸೇರುವಾಗ 26 ದಿನಗಳ ವಿಳಂಬ ಆಗಬಹುದು.

    ಈ ಅವಧಿಯ ಕಲಿಕೆಯನ್ನು ಸರಿದೂಗಿಸಲು ಅಂತಹ ವಿದ್ಯಾರ್ಥಿಗಳಿಗೆ ಬ್ರಿಜ್‌ ಕೋರ್ಸ್‌ ನಡೆಸಲಾಗುವುದು ಎಂದರು.

    ಮಕ್ಕಳಿಗೆ ಪುಸ್ತಕದ ಹೊರೆ ಕಡಿಮೆ ಮಾಡುವ ಬಗ್ಗೆ ಅಧ್ಯಯನ ನಡೆಸಲಾಗುತ್ತಿದ್ದು, ಮುಂದಿನ ವರ್ಷದಿಂದ ಇದು ಅನುಷ್ಠಾನಕ್ಕೆ ಬರಲಿದೆ.

    ಶಿಕ್ಷಕರ ಕೊರತೆ ನಿವಾರಿಸಲು ಶಿಕ್ಷಕರ ನೇಮಕ ಮಾಡಲಾಗುವುದು ಎಂದು ವಿವರಿಸಿದರು.

    ಬಡವರು ಸೇರಿದಂತೆ ಎಲ್ಲಾ ವರ್ಗಗಳ ಜನರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಕಾಂಗ್ರೆಸ್‌ ನೀಡಿದೆ.

    ಪ್ರತಿಪಕ್ಷಗಳ ಟೀಕೆಗಳಿಗೆ ಉತ್ತರ ಕೊಡಲು ಹೋಗುವುದಿಲ್ಲ.

    ನಮ್ಮ ಕಾರ್ಯಕ್ರಮಗಳೇ ಅವರಿಗೆ ಉತ್ತರ ನೀಡುತ್ತವೆ.

    ಸರಕಾರ ಅಧಿಕಾರಕ್ಕೆ ಬಂದು 130 ದಿನ ಮಾತ್ರ ಆಗಿದ್ದು, ಐದು ಗ್ಯಾರೆಂಟಿಗಳ ಪೈಕಿ ನಾಲ್ಕು ಗ್ಯಾರೆಂಟಿ ಯೋಜನೆಗಳು ಈಗಾಗಲೇ ಅನುಷ್ಠಾನಕ್ಕೆ ಬಂದಿವೆ ಎಂದು ಮಧು ಬಂಗಾರಪ್ಪ ತಿಳಿಸಿದರು.

    1 Comment

    1 Comment

    1. Anand

      26/09/2023 at 2:16 PM

      MADHU BANGRAPPA SIR WHERE IS QUALITY EDUCATION BETTER KEEP 6 TIMES FOR 6 SUBJECTS EVERYONE 100 OUTOFF 100 JUST U WANT SHOW PASSING PERCENTAGE BUT THIS VERY USELESS DECISION BETTER DON’T PLAY POLITICS WITH EDUCATION.

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending