Connect with us

    BANTWAL

    SSLC ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಚೋದನೆ ವಿಚಾರ: ಕಠಿಣ ಕ್ರಮಕ್ಕೆ ಆಗ್ರಹಿಸಿ ನಾಳೆ ಕನ್ಯಾನ ಬಂದ್‌

    Published

    on

    ಬಂಟ್ವಾಳ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸಾಹುಲ್ ಹಮೀದ್ ಎಂಬಾತನ ಕಿರುಕುಳದಿಂದ ಬಾಲಕಿ ಆತ್ಮಹತ್ಯೆ ಖಂಡಿಸಿ ಮತ್ತು ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ನಾಳೆ ಕನ್ಯಾನದಲ್ಲಿ ಬಂದ್ ಆಚರಿಸುವಂತೆ ಮತ್ತು ನಾಲ್ಕು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.


    ವಿಟ್ಲದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬಜರಂಗದಳ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್, ‘ಆರೋಪಿಯು ಬಾಲಕಿಗೆ ವಾಮಾಚಾರ ಮಾಡಿ ವಶೀಕರಣ ಮೂಲಕ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾನೆ.

    ಆಕೆಯ ಸಾವಿನ ಬಗ್ಗೆ ಹಲವು ಅನುಮಾನಗಳಿವೆ. ಆಕೆಯ ಕುಟುಂಬಕ್ಕೆ ನ್ಯಾಯ ಸಿಗಬೇಕು. ಸರ್ಕಾರಕ್ಕೆ ನಮ್ಮ ಧ್ವನಿ ಮುಟ್ಟಿಸುವ ಉದ್ದೇಶದಿಂದ ಸೋಮವಾರ ಕನ್ಯಾನದಲ್ಲಿ ಎಲ್ಲ ಹಿಂದೂಗಳು ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಬೇಕು.

    ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮತ್ತು ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದ ಅವರು ತಿಳಿಸಿದರು.
    ‘ಸಾವಿರಾರು ಮುಸ್ಲಿಂ ಯುವಕರು ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣು ಮಕ್ಕಳ ಜೀವನ ಹಾಳು ಮಾಡುತ್ತಿದ್ದಾರೆ.

    ಈ ಬಂದ್ ಮತ್ತು ಪ್ರತಿಭಟನೆ ನಮ್ಮ ವಿರೋಧಿಗಳಿಗೆ ಎಚ್ಚರಿಕೆಯ ಕರೆಗಂಟೆ ಆಗಬೇಕು. ಈ ಘಟನೆ ಬಗ್ಗೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಸಾಹುಲ್ ಹಮೀದ್ ಕುಟುಂಬವನ್ನು ತನಿಖೆಗೊಳಪಡಿಸಬೇಕು.

    ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ತರಬೇಕು. ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತದೆ’ ಎಂದು ಹೇಳಿದರು.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending