Connect with us

LATEST NEWS

ಮಹಿಳಾ ಸಬ್‌ಇನ್ಸ್‌ಪೆಕ್ಟರ್‌ ಮೇಲೆ ಚೂರಿ ಇರಿದ ಆರುಮುಗಂ: ಹಳೇ ದ್ವೇಷ

Published

on

ತಿರುನಲ್ವೇಲಿ: ಹಳೆ ದ್ವೇಷದ ಹಿನ್ನೆಲೆ ಮಹಿಳಾ ಸಬ್‌ಇನ್ಸ್‌ಪೆಕ್ಟರ್‌ ಮೇಲೆ ವ್ಯಕ್ತಿಯೋರ್ವ ಚೂರಿ ಇರಿದ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಜವೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಸಬ್‌ಇನ್ಸ್‌ಪೆಕ್ಟರ್‌ ಗಾಯಗೊಂಡಿದ್ದಾರೆ.


ಪಜಗೂರು ಗ್ರಾಮದಲ್ಲಿ ಧಾರ್ಮಿಕ ಉತ್ಸವ ನಡೆಯುತ್ತಿದ್ದ ವೇಳೆ ಮಹಿಳಾ ಸಬ್‌ಇನ್ಸ್‌ಪೆಕ್ಟರ್‌ ಭದ್ರತಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಈ ವೇಳೆ ವ್ಯಕ್ತಿಯೋರ್ವ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಗಾಯಗೊಂಡ ಮಹಿಳಾ ಪೊಲೀಸ್ ಇನ್ಸ್​ಪೆಕ್ಟರ್‌ನ್ನು ​ ಮಾರ್ಗರೇಟ್​ ಥೆರೇಸಾ ಎಂದು ಗುರುತಿಸಲಾಗಿದೆ.
ಮಾರ್ಗರೇಟ್​ ಥೆರೇಸಾ ಅವರ ಕುತ್ತಿಗೆಯ ಭಾಗಕ್ಕೆ ಆರೋಪಿ ಆರುಮುಗಂ ಚಾಕುವಿನಿಂದ ಇರಿದಿದ್ದು, ತಕ್ಷಣ ತೀವ್ರವಾಗಿ ಗಾಯಗೊಂಡು ಅವರು ನೆಲಕ್ಕೆ ಬಿದ್ದಿದ್ದರು. ಕೂಡಲೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದ್ದಾರೆ. ಹಳೇ ದ್ವೇಷದ ಕಾರಣ ಈ ಕೃತ್ಯವೆಸಗಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ.


ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವೇಳೆ ಆತನ ಬಂಧನ ಮಾಡಲಾಗಿತ್ತು. ಈ ವೇಳೆ ಎಸ್​​ಐ ಮಾರ್ಗರೇಟ್​​ ಈತನ ಮೇಲೆ ಪ್ರಕರಣ ದಾಖಲು ಮಾಡಿದ್ದರು. ಇದೇ ಕೋಪದಲ್ಲಿ ಇದೀಗ ಕೃತ್ಯವೆಸಗಿದ್ದಾನೆ.

ಗಾಯಗೊಂಡಿರುವ ಎಸ್​​ಐ ಅವರನ್ನು ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಮಾರ್ಗರೇಟ್​ ಅವರಿಗೆ ಉನ್ನತ ಮಟ್ಟದ ಚಿಕಿತ್ಸೆ ನೀಡುವಂತೆ ಆದೇಶ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಚೈತ್ರಾ ಹೆಬ್ಬಾರ್ ನಾಪತ್ತೆ ಹಿಂದೆ ಅನ್ಯಕೋಮಿನ ಯುವಕನ ಕೈವಾಡ ಶಂಕೆ- ಆರೋಪಿಯ ಬಂಧಿಸಲು ಹಿಂದೂ‌ ಸಂಘಟನೆ ಒತ್ತಾಯ

Published

on

ಪುತ್ತೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ‌ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ ಇದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಪುತ್ತೂರಿನ ಕೂರ್ನಡ್ಕದಲ್ಲಿ ವಾಸವಿದ್ದ ಶಾರೂಕ್ ಶೇಖ್ ಮೂಲತಃ ಬಂಟ್ವಾಳದ ನೇರಳಕಟ್ಟೆಯ ನಿವಾಸಿಯಾಗಿದ್ದಾನೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಶಂಕಿತ ಬರುತ್ತಿದ್ದ. ಚೈತ್ರಾ ಪೋಷಕರಿಗೆ ಮಾಡೂರು ಬಜರಂಗದಳ ಮುಖಂಡರು ಮಾಹಿತಿಯನ್ನೂ ನೀಡಿದ್ದರು. ಇದೀಗ ಮಾಹಿತಿ ನೀಡಿದ ಬಳಿಕ ನಾಪತ್ತೆಯಾದ ಚೈತ್ರಾ ಹೆಬ್ಬಾರ್‌ ಹಿಂದೆ ಈ ಆರೋಪಿ ಇರುವುದು ದೃಢಪಡುತ್ತಿರುವುದರಿಂದ ಎರಡು ದಿನದಲ್ಲಿ ಚೈತ್ರಾಳನ್ನು ಪೊಲೀಸರು ಕರೆ ತರಬೇಕು. ಇಲ್ಲದೇ ಇದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರಾಂತ ಸಂಚಾಲಕ ಮುರಳಿ ಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.

Continue Reading

DAKSHINA KANNADA

Ullala: ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಸ್ಕೂಟರ್ ಪತ್ತೆ..!

Published

on

ಮಂಗಳೂರು: ಉಳ್ಳಾಲದ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.

ಮಾಡೂರಿನ ಪಿಜಿ ಯಿಂದ ಫೆ.17 ರಂದು ಮುಂಜಾನೆ 9 ಗಂಟೆಗೆ ಚೈತ್ರಾ ಇದೇ ಸ್ಕೂಟರ್‌ನಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದ ಚೈತ್ರಾ ಸುಳಿವು ಸಿಗದೆ ಹಿನ್ನೆಲಯಲ್ಲಿ ಚೈತ್ರಾ ದೊಡ್ಡಪ್ಪ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಹಿಂದೂ ಸಂಘಟನೆಗಳೂ ಇದೊಂದು ಲವ್‌ ಜಿಹಾದ್ ಪ್ರಕರಣವೆಂದು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ತನಿಕೆ ಚುರುಕುಗೊಳಿಸಿ ಪೊಲೀಸರಿಗೆ ಇದೀಗ ಚೈತ್ರಾಳ ಸ್ಕೂಟರ್ ಪತ್ತೆಯಾಗಿದೆ. ಚೈತ್ರ ಪಿಜಿಯಿಂದ ಹೊರಟ ಬಳಿಕ ಪಂಪ್‌ವೆಲ್ ಬಳಿ ಮೊಬೈಲ್ ಆಫ್ ಮಾಡಿಕೊಂಡಿದ್ದು ಬಳಿಕ ಸುರತ್ಕಲ್‌ಗೆ ಬಂದು ಅಲ್ಲಿ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದರು, ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಿಸಿರುವ ಪೊಲೀಸರು ಶಂಕಿತ ಯುವಕನ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಆದರೆ ಆತನ ಮೊಬೈಲ್ ಕೂಡಾ ಸ್ವಿಚ್‌ ಆಫ್ ಆಗಿರುವ ಕಾರಣ ಚೈತ್ರಾ ಆತನ ಜೊತೆಯಲ್ಲಿ ಹೋಗಿರುವ ಬಲವಾದ ಅನುಮಾನ ಮೂಡಿದೆ. ಕೇರಳ ಅಥವಾ ಬೆಂಗಳೂರಿಗೆ ಹೋಗಿರುವ ಸಾದ್ಯತೆ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

LATEST NEWS

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಘಾತಕ್ಕೆ ಬಲಿ..!

Published

on

ಯಾದಗಿರಿ: ಸುರಪುರ ಕಾಂಗ್ರೆಸ್ ಶಾಸಕರ ರಾಜಾ ವೆಂಕಟಪ್ಪ ನಾಯಕ ಅವರು ಫೆ.25 ರಂದು ಹೃದಯಘಾತದಿಂದ ನಿಧನ ಹೊಂದಿದರು.


ರಾಜಾ ವೆಂಕಟಪ್ಪ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಘಾತಕ್ಕೆ ಬಲಿಯಾದ ರಾಜಾ ವೆಂಕಟಪ್ಪ ಅವರ ಸಾವು ಕಾಂಗ್ರೆಸ್ ಗರಿಗೆ ಶಾಕ್ ನೀಡಿದಂತಾಗಿದೆ. ಇವರ ಸಾವಿಗೆ ಹಲವು ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

LATEST NEWS

Trending