ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.
ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.
ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವಂತಹ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್‌ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ.
ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂರು ವರ್ಷದ ಕಡವೆ ಇದಾಗಿದ್ದು, ಚಾರ್ಮಾಡಿ ಘಾಟ್ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ ಮೃತದೇಹವನ್ನು ಕಂಡು ಕೊಟ್ಟಿಗೆಹಾರ ಅರಣ್ಯ ಚೆಕ್‌ಪೋಸ್ಟ್ ಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.