ಮಂಗಳೂರು/ಮುಂಬೈ: ಟೀಂ ಇಂಡಿಯಾದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾಗೆ ಇಂದು ಜನುಮದಿನದ ಸಂಭ್ರಮ. ಬುಮ್ರಾ 2016ರಲ್ಲಿ ಆಸ್ಟ್ರೇಲಿಯಾ ವಿರುದ್ದ ಟಿ-20 ಹಾಗೂ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು.
ಜಸ್ಪ್ರೀತ್ ಬುಮ್ರಾ 1993ರ ಡಿಸೆಂಬರ್ 6 ರಂದು ಅಹಮದಾಬಾದ್ ನಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡ ಬುಮ್ರಾ ಕ್ರಿಕೆಟಿಗನಾಗುವ ಕನಸನ್ನು ನನಸಾಗಿಸುವುದು ಅಷ್ಟು ಸುಲಭವಾಗಿರಲಿಲ್ಲ. ಇದನ್ನು ಸಾಕಾರಗೊಳಿಸುವಲ್ಲಿ ಅವರ ತಾಯಿ ದಿಲ್ಜಿತ್ ಬುಮ್ರಾ ಅವರ ದೊಡ್ಡ ಪರಿಶ್ರಮ ಇದೆ.
ಬುಮ್ರಾ ಮತ್ತು ಅವರ ಅಕ್ಕನನ್ನು ಬೆಳೆಸಿದ್ದು ತಾಯಿ. ಅಹಮದಾಬಾದ್‌ನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಕ್ರಿಕೆಟಿಗನಾಗುವ ಬುಮ್ರಾ ಕನಸನ್ನು ನನಸು ಮಾಡುವಷ್ಟು ಆದಾಯವಿರಲಿಲ್ಲ.
ಆದರೆ ಇಂದು ಕೋಟಿಗಟ್ಟಲೇ ಸಂಬಳ ಪಡೆಯುವ ಬುಮ್ರಾ ಆರಂಭದಲ್ಲಿ ಕೇವಲ ಟೀ-ಶರ್ಟ್, ಬೂಟುಗಳಲ್ಲೇ ಜೀವನ ಸಾಗಿಸಿದ್ದಾರೆ. ಬುಮ್ರಾ 2013ರಲ್ಲಿ ತಮ್ಮ 20ನೇ ವಯಸ್ಸಿನಲ್ಲಿ ಪ್ರಥಮ ದರ್ಜೆ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ನಂತರ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತದ ಪ್ರಮುಖ ಬೌಲರ್ ಆದರು. ಕೆಲವು ವರದಿಗಳ ಪ್ರಕಾರ, ಈ ವರ್ಷ ಅವರ ನಿವ್ವಳ ಮೌಲ್ಯ ಸುಮಾರು 70 ಕೋಟಿ. ಅವರ ಗಳಿಕೆಯ ಪ್ರಮುಖ ಭಾಗವು ಪಂದ್ಯದ ಶುಲ್ಕ, ಬಿಸಿಸಿಐ ಕೇಂದ್ರ ಒಪ್ಪಂದಗಳು ಮತ್ತು ಐಪಿಎಲ್ ಶುಲ್ಕದಿಂದ ಬರುತ್ತದೆ. ಇದಲ್ಲದೇ ಬ್ರಾಂಡ್ ಎಂಡಾರ್ಸ್ ಮೆಂಟ್ ನಿಂದ ಆದಾಯವೂ ಇದೆ.
ಇನ್ನೂ ಜಸ್ಪ್ರೀತ್ ಬುಮ್ರಾ ಈವರೆಗೆ 72 ಏಕದಿನ ಪಂದ್ಯಗಳನ್ನು ಆಡಿದ್ದು 4.63 ಎಕಾನಮಿಯಲ್ಲಿ 121 ವಿಕೆಟ್ ಪಡೆದಿದ್ದಾರೆ. ಟೆಸ್ಟ್ ನಲ್ಲಿ 60 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 2.69 ಎಕಾನಮಿಯಲ್ಲಿ 128 ವಿಕೆಟ್ ಗಳನ್ನು ತಮ್ಮ ಖಾತೆಗೆ ಪಡೆದಿದ್ದಾರೆ. ಇದಲ್ಲದೆ ಟಿ20ಐ ನಲ್ಲಿ 60 ಪಂದ್ಯಗಳಲ್ಲಿ 70 ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಐಪಿಎಲ್ ನಲ್ಲಿ ಮುಂಬೈ ಪರ ಆಡುತ್ತಿದ್ದಾರೆ.
ಮಂಗಳೂರು/ಬೀಜಿಂಗ್ : ಸಾಮಾನ್ಯವಾಗಿ ಭಾರತೀಯ ಸೇನೆ ಮತ್ತು ಚೀನಾ ಸೇನೆಯ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ವಿಷಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುತ್ತವೆ. ಆದರೆ ಚೀನಾದ ಸೈನಿಕರ ತರಬೇತಿಯಲ್ಲಿ, ಯೋಧರ ಕೊರಳಪಟ್ಟಿಗಳ ಮೇಲೆ ಗುಂಡು ಪಿನ್ ಗಳನ್ನು ಅಂಟಿಸಿರುವುದು, ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗುತ್ತಿವೆ.
ಮಿಲಿಟರಿ ಸೇವೆಯಲ್ಲಿ ಸೈನಿಕರು ನಡೆಯುವ ರೀತಿ, ಚಲಿಸುವ ಅಥವಾ ನಿಂತಿರುವ ರೀತಿಯಲ್ಲಿ ವಿಶೇಷ ಗಮನ ಹರಿಸುತ್ತಾರೆ. ಸೈನಿಕರು ತಮ್ಮ ಎದೆಯನ್ನು ಮೇಲಕ್ಕೆತ್ತಿ, ಕುತ್ತಿಗೆಯನ್ನು ನೇರವಾಗಿ ಮತ್ತು ಕೈಗಳನ್ನು ನೇರವಾಗಿ ನಿಲ್ಲಬೇಕು ಎಂಬ ನಿಯಮ ಇದೆ. ಈ ನಿಯಮ ಚೀನಾದ ಸೇನೆಯಲ್ಲೂ ಇದೆ.
ಚೀನಾದ ಸೈನಿಕರ ಸಮವಸ್ತ್ರದ ಕೊರಳಪಟ್ಟಿಗಳ ಮೇಲೆ ಗುಂಡುಪಿನ್ ಗಳನ್ನು ಅಂಟಿಕೊಂಡಿರುವ ರೀತಿಯಲ್ಲಿ ಇರಿಸಲಾಗುತ್ತದೆ. ಇದಕ್ಕೆ ಒಂದು ಕಾರಣವೂ ಇದೆ. 2009ರಲ್ಲಿ ನ್ಯೂಯಾರ್ಕ್ ಟೈಮ್ಸ್ ಈ ಬಗ್ಗೆ ವರದಿ ಮಾಡಿತ್ತು. ಸೈನಿಕರು ತಮ್ಮ ಕುತ್ತಿಗೆಯನ್ನು ಸದಾ ಗಟ್ಟಿಯಾಗಿರಿಸಲು ಈ ರೀತಿಯಾಗಿ ಪಿನ್ ಗಳನ್ನು ಧರಿಸುತ್ತಾರೆ ಎಂದು ಹೇಳಲಾಗಿದೆ.
ಕುತ್ತಿಗೆಯನ್ನು ಬಾಗಿಸಿದಾಗ ಪಿನ್ ಗಳು ಕುತ್ತಿಗೆಗೆ ಚುಚ್ಚುವ ರೀತಿಯಲ್ಲಿ ಕಾಲರ್ ನಲ್ಲಿ ಇರಿಸಲಾಗಿದೆ. ಸೈನಿಕರು ತಮ್ಮ ಕುತ್ತಿಗೆಯನ್ನು ಸದಾ ನೇರವಾಗಿರಿಸಲು ಈ ರೀತಿ ಮಾಡಲಾಗುತ್ತದೆ. ಅಲ್ಲದೆ, ಸದಾ ಅಲರ್ಟ್ ಆಗಿರಲು ಈ ರೀತಿ ಮಾಡಲಾಗುತ್ತದೆ. ಇದನ್ನು ಹೆಚ್ಚಾಗಿ ಪರೇಡ್ ಸಂದರ್ಭಗಳಲ್ಲಿ ಅನುಸರಿಸಲಾಗುತ್ತದೆ.
ಪ್ರತಿಯೊಬ್ಬ ಸೈನಿಕನಿಗೂ ಈ ವಿಧಾನ ಅನ್ವಹಿಸುವುದಿಲ್ಲ. ಬದಲಾಗಿ ಕುತ್ತಿಗೆ ನೇರವಾಗಿರಿಸದ ಸೈನಿಕರಿಗೆ ಇದನ್ನು ಬಳಸುತ್ತಾರೆ ಮತ್ತು ಇದರಿಂದ ಅವರ ಭಂಗಿಯನ್ನು ಸರಿಪಡಿಸಲಾಗುತ್ತದೆ.
ಮಂಗಳೂರು/ಕೀನ್ಯಾ : 2025ರಲ್ಲಿ ಭೂಮಿಯ ಮೇಲೆ ಭಾಹ್ಯಾಶದಿಂದ ಉಲ್ಕೆಗಳು ಅಥವಾ ಏಲಿಯನ್ ದಾಳಿ ಆಗಬಹುದು ಅಂತ ಕಾಲಜ್ಞಾನಿ ನಾಸ್ಟ್ರಾಡಾಮಸ್ ಭವಿಷ್ಯ ನುಡಿದಿದ್ದಾನೆ. ಇದಕ್ಕೆ ಪೂರಕ ಎಂಬಂತೆ ಒಂದು ಘಟನೆ ನಡೆದಿದ್ದು, ಆಕಾಶದಿಂದ 500 ಕೆಜಿ ತೂಕದ ಉಂಗುರವೊಂದು ಭೂಮಿಗೆ ಅಪ್ಪಳಿಸಿದೆ. ಹಾಗಂತ ಇದು ಏಲಿಯನ್ ಅಥವಾ ಕ್ಷುದ್ರಗ್ರಹಗಳಿಂದ ಸಿಡಿದ ಉಂಗುರ ಅಲ್ಲ ಅಂತ ವಿಜ್ಞಾನಿಗಳು ಸ್ಪಷ್ಟ ಪಡಿಸಿದ್ದಾರೆ.
ಈ ಬೃಹದಾಕಾರದ ಉಂಗುರ ಕೀನ್ಯಾ ದೇಶದ ಉತ್ತರದಲ್ಲಿರುವ ಮುಕುನಿ ಕೌಂಟಿಯ ಮುಕುಕು ಗ್ರಾಮದ ಮೇಲೆ ಬಂದು ಬಿದ್ದಿದೆ. ಇದು ಅಂದಾಜು 500 ಕೆ.ಜಿ ಭಾರ ಇರಬಹುದು ಅಂತ ಊಹಿಸಲಾಗಿದ್ದು, ಸದ್ಯಕ್ಕೆ ಈ ಉಂಗುರ ಬಿದ್ದ ಜಾಗವನ್ನು ಕೀನ್ಯಾ ಬಾಹ್ಯಾಕಾಶ ಸಂಸ್ಥೆ(KSA) ತಮ್ಮ ಸ್ವಾಧೀನಕ್ಕೆ ಪಡೆದುಕೊಂಡಿದೆ. ಸುಮಾರು ಎಂಟು ಅಡಿ ವ್ಯಾಸದ ಬೃಹತ್ ಲೋಹದ ಉಂಗುರ ಇದಾಗಿದ್ದು, ಪ್ರಾಥಮಿಕ ಪರೀಕ್ಷೆಯಲ್ಲಿ ಇದು ಭೂಮಿಯಿಂದ ಅಂತರಿಕ್ಷಕ್ಕೆ ಉಡಾವಣೆಯಾದ ಉಡಾವಣಾ ವಾಹನದ ಭಾಗ ಎಂದು ಅಂದಾಜಿಸಲಾಗಿದೆ. ಆಕಾಶಕ್ಕೆ ನೆಗೆಯುವ ಉಡಾವಣಾ ವಾಹನಗಳು ಹಂತ ಹಂತವಾಗಿ ಕಳಚುವ ಸಮಯದಲ್ಲಿ ಬೇರ್ಪಟ್ಟ ಭಾಗ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ.
ಕೀನ್ಯಾದಲ್ಲಿ ಈ ಘಟನೆ ಮೊದಲ ಬಾರಿಗೆ ನಡೆದಿದೆಯಾದ್ರೂ ಕಳೆದ ಕೆಲವು ವರ್ಷಗಳಲ್ಲಿ ಇಂತಹ ಘಟನೆಗಳು ಭೂಮಿಯ ಅಲ್ಲಲ್ಲಿ ನಡಿತಾ ಇದೆ. ಬಾಹ್ಯಾಕಾಶದಲ್ಲಿ ಅಸಂಖ್ಯಾತ ಪ್ರಮಾಣದಲ್ಲಿ ರಾಕೇಟ್ ಲಾಂಚರ್ಗಳ ಅವಶೇಷಗಳು ಭೂಮಿಗೆ ಅ*ಪಾಯ ತಂದೊಡ್ಡುತ್ತಿದೆ. ಕಳೆದ ವರ್ಷ ಇಂತಹದೇ ಒಂದು ಘಟನೆ ಫ್ಲೋರಿಡಾದಲ್ಲಿ ನಡೆದಿದ್ದು, ಆಕಾಶದಿಂದ ಬಿದ್ದ ಲೋಹದ ತುಂಡು ಮನೆಯೊಂದಕ್ಕೆ ಹಾನಿ ಮಾಡಿತ್ತು. ಇದಕ್ಕೆ ಮನೆಯವರು ನಾಸಾದ ವಿರುದ್ಧ ಕೇಸು ದಾಖಲಿಸಿದ್ದರು. ಇದಲ್ಲದೆ, 2024 ರ ಫೆಬ್ರವರಿಯಲ್ಲಿ ಯೂರೋಪಿಯನ್ ಬಾಹ್ಯಾಕಾಶ ಸಂಸ್ಥೆಯು ಇಂತಹ ಒಂದು ಬೃಹತ್ ವಸ್ತು ಉತ್ತರ ಪೆಸಿಫಿಕ್ ಮಹಾಸಾಗರದ ಮೇಲೆ ಬಿದ್ದಿರುವುದಾಗಿ ಹೇಳಿತ್ತು.
ಬಾಹ್ಯಾಕಾಶದಲ್ಲಿ ಲೋ ಅರ್ಥ್ ಆರ್ಬಿಟ್ ( LEO ) ವಿಶ್ವದ ಅತೀ ದೊಡ್ಡ ಕಸದ ಡಂಪ್ ಎಂದು ಪರಿಗಣಿಸಲಾಗಿದೆ. ನಾಸಾ ಪ್ರಕಾರ, ಭೂಮಿಯ ಕಕ್ಷೆಯಲ್ಲಿ ಸುಮಾರು ಆರು ಸಾವಿರ ಟನ್ ಇಂತಹ ತ್ಯಾಜ್ಯಗಳು ಸುತ್ತುತ್ತಿವೆ. ಇದು ಸಾಮಾನ್ಯವಾಗಿ ಉಂಟಾಗುವ ಘರ್ಷಣೆಯಿಂದ ಭೂಮಿಗೆ ಅಪ್ಪಳಿಸುತ್ತಿವೆ ಎಂದು ಹೇಳಿದೆ.
ಮಂಗಳೂರು/ಬೀಜಿಂಗ್ : ಚೀನಾದಲ್ಲಿ ಕೊರೊನಾ ವೈರಸ್ ಮಾದರಿಯ ಹೂಮನ್ ಮೆಟಾಪ್ ನ್ಯುಮೋ (HMPV) ಸೋಂಕು ಹರಡಿ ಭಾರೀ ಆತಂಕ ಸೃಷ್ಟಿಸಿದೆ.
ಈ ಹಿಂದೆ ಚೀನಾದಲ್ಲಿ ಜನ್ಮ ತಾಳಿದ್ದ ಕೊರೊನಾ ವೈರಸ್ ಮಹಾಮಾರಿ ಇಡೀ ಜಗತ್ತನ್ನು ಆವರಿಸಿ, ಲಾಕ್ ಡೌನ್ ಪರಿಸ್ಥಿತಿಗೆ ದೂಡಿತ್ತು. ವೈರಲ್ ಸೋಂಕಿಗೆ ಲೆಕ್ಕವಿಲ್ಲದಷ್ಟು ಜನ ಜೀವವನ್ನು ಕಳೆದುಕೊಂಡರು. ಅಂದು ಜನರನ್ನು ಕಾಡಿದ್ದ ಕೋವಿಡ್ ಈಗ ಐದು ವರ್ಷಗಳ ನಂತರ ಮತ್ತೊಂದು ರೂಪದಲ್ಲಿ ಚೀನಾದಲ್ಲಿ ಪತ್ತೆಯಾಗಿರುವುದು ಸದ್ಯ ಜಗತ್ತನ್ನು ಭಾರೀ ಆತಂಕಕ್ಕೆ ದೂಡಿದೆ.
ಭಾರತೀಯ ಆರೋಗ್ಯ ಸಂಸ್ಥೆ ಮಾಹಿತಿ
ಕೋವಿಡ್ ನ ರೀತಿಯಲ್ಲಿ ಪತ್ತೆಯಾಗಿರುವ ಈ ವೈರಸ್ ನ ಹೆಸರು ಹ್ಯೂಮನ್ ಮೆಟಾಪ್ ನ್ಯುಮೋ ವೈರಸ್ (HMPV) ಎಂದು ಹೇಳಲಾಗಿದೆ. ಈ ಖಾಯಿಲೆ ಕೋವಿಡ್ ನಷ್ಟೇ ಮಾರಕ ಎನ್ನಲಾಗಿದ್ದು, ಈಗಾಗಲೇ ಹಲವರು ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ ಹಾಗೂ ಚೀನಾದ ಆಸ್ಪತ್ರೆಗಳಲ್ಲಿ ಹಾಸಿಗೆಯು ಸಿಗದಷ್ಟು ರೋಗಿಗಳು ಆವರಿಸಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಕುರಿತು ಭಾರತೀಯ ಆರೋಗ್ಯ ಸಂಸ್ಥೆ ಮಾಹಿತಿ ಹಂಚಿಕೊಂಡಿದ್ದು, ಯಾರೂ ಸಹ ಆತಂಕ, ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಈ ಬಗ್ಗೆ ಮಾತನಾಡಿದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ (DGHS) ಡಾ. ಅತುಲ್ ಗೋಯೆಲ್, ‘ಎಚ್ಚರಿಕೆಯ ಅಗತ್ಯವಿಲ್ಲ, ಅಲಾರಂ ಬೇಕಿಲ್ಲ. ಚೀನಾದಲ್ಲಿ HMPV ನಿಗೂಢ ವೈರಸ್ ಶೀತವನ್ನು ಉಂಟುಮಾಡುವ ಇತರೆ ಉಸಿರಾಟದ ವೈರಸ್ ನಂತೆ. ಇದು ಶೀತ-ಕೆಮ್ಮು ರೋಗ ಲಕ್ಷಣಗಳನ್ನು ತೋರಿಸುತ್ತದೆ. ಇದಕ್ಕೆ ತೀರ ಭಯ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC), ಅಂತರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ. ನಾವು ಇಲ್ಲಿನ ಪರಿಸ್ಥಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ. ಮಾಹಿತಿಯನ್ನು ಆಗಾಗ್ಗೆ ಅಪ್ಡೇಟ್ ಮಾಡುತ್ತಿರುತ್ತೇವೆ ಮತ್ತು ಅದಕ್ಕೆ ಅನುಗುಣವಾಗಿ ನವೀಕರಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
HMPV ವೈರಸ್ ಲಕ್ಷಣಗಳು ಏನು ?
ಕೆಮ್ಮು, ಜ್ವರ, ಮೂಗು ಕಟ್ಟುವುದು, ಶೀತ ಈ ವೈರಸ್ ನ ಸಾಮಾನ್ಯ ಲಕ್ಷಣಗಳಾಗಿವೆ. HMPV ವೈರಸ್ ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ. ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಆಗಾಗ್ಗೆ ಕೈ ತೊಳೆಯುವುದಾಗಿದೆ. ಜೊತೆಗೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದಾಗಿದೆ.