Connect with us

ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Published

on

ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ: ಸಚಿವ ಕೋಟ ಶ್ರೀನಿವಾಸ ಪೂಜಾರಿ 

ಮಂಗಳೂರು: ಕರಾವಳಿ ಭಾಗದಲ್ಲಿ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಮಾ.7 ಮತ್ತು 8ರಂದು ನಡೆಯುವ ರಾಜ್ಯ ಪತ್ರಕರ್ತರ ಸಮ್ಮೇಳನದ ಯಶಸ್ವಿಗೆ ಸಂಪೂರ್ಣ ಸಹಕಾರ ನೀಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದ.ಕ. ಜಿಲ್ಲಾಾಡಳಿತಕ್ಕೆ ಸೂಚನೆ ನೀಡಿದ್ದಾರೆ.

 

ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವ ಶ್ರೀನಿವಾಸ ಪೂಜಾರಿ ‘ಆಹಾರ, ವಸತಿ ಹಾಗೂ ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು. ಈ ಹಿನ್ನಲೆಯಲ್ಲಿ ಫೆ.28ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ‘ರಾಜ್ಯ ಸಂಘದಲ್ಲಿ ನೋಂದಣಿಯಾಗಿರುವ 7 ಸಾವಿರ ಪತ್ರಕರ್ತರ ಪೈಕಿ ಮೂರು ಸಾವಿರ ಮಂದಿ ಸಮ್ಮೇಳನಕ್ಕೆ ಹಾಜರಾಗುವ ಸಾಧ್ಯತೆ ಇದೆ. ಈ ಮೊದಲಿನ ಎಲ್ಲ ಸಮ್ಮೇಳನಗಳನ್ನು ಆಯಾ ಜಿಲ್ಲಾಡಳಿತಗಳ ನೆರವಿನಲ್ಲಿ ನಡೆಸಲಾಗಿದೆ. ಇಲ್ಲಿ ಕೂಡ ಜಿಲ್ಲಾಡಳಿತದ ನೆರವಿನಲ್ಲಿ ಸಮ್ಮೇಳನವನ್ನು ಯಶಸ್ಸುಗೊಳಿಸುವ ವಿಶ್ವಾಸವಿದೆ. ಈ ಸಮ್ಮೇಳನ ವಿಭಿನ್ನವಾಗಿ ನಡೆಯಲಿದ್ದು, ರಾಜ್ಯ ಮಾತ್ರವಲ್ಲದೆ, ನೇಪಾಳ, ಶ್ರೀಲಂಕಾ, ಬಾಂಗ್ಲಾದೇಶ, ಮುಂಬೈ ಹಾಗೂ ದೆಹಲಿಗಳಿಂದಲೂ ಪ್ರತಿನಿಧಿಗಳು ಆಗಮಿಸಲಿದ್ದಾರೆ. ಸಮ್ಮೇಳನದಲ್ಲಿ ಸುಮಾರು 50 ಮಂದಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.ಪ್ರವಾಸೋದ್ಯಮ ಸೇರಿದಂತೆ ಕರಾವಳಿಯ ಅಭಿವೃದ್ಧಿ ಕುರಿತು ಸಮ್ಮೇಳನದಲ್ಲಿ ವಿಚಾರ ಗೋಷ್ಠಿ ನಡೆಯಲಿದ್ದು ವಿವಿಧ ಕ್ಷೇತ್ರದ ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ದ.‌ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಪತ್ರಕರ್ತರ ಸಮ್ಮೇಳನ ಯಶಸ್ವಿ ಆಗಿ ನಡೆಸಲು ವಿವಿಧ ಸಮಿತಿ ಗಳನ್ನು ರಚಿಸಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಕರಾವಳಿಯ ಪ್ರವಾಸಿ ತಾಣಗಳಿಗೆ ಒಂದು ದಿನದ ಪ್ರವಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ರಾಜೇಶ್, ವಾರ್ತಾಧಿಕಾರಿ ಖಾದರ್ ಶಾ, ಸಮ್ಮೇಳನದ ಸಂಚಾಲಕ ಜಗನಾಥ್ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಪದಾಧಿಕಾರಿಗಳು, ಪತ್ರಕರ್ತರು ಭಾಗವಹಿಸಿದ್ದರು. ಬಳಿಕ ವಿವಿಧ ಉಪ ಸಮಿತಿಗಳ ಸಭೆ ಪತ್ರಿಕಾ ಭವನದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ನಡೆಯಿತು.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending