Thursday, August 11, 2022

2022-23ನೇ ಸಾಲಿನ ರಾಜ್ಯ ಬಜೆಟ್​ ಮಂಡನೆ: ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್‌ ಮಂಡಿಸುತ್ತಿದ್ದಾರೆ. ರಾಜ್ಯ ಬಜೆಟ್ ನಲ್ಲಿ ನಗರಗಳಿಗೆ ಅದರಲ್ಲೂ ಬೆಂಗಳೂರಿಗೆ ಯಾವ್ಯಾವ ಯೋಜನೆಗಳನ್ನು ಸರ್ಕಾರ ಘೋಷಣೆ ಮಾಡಲಿದೆ ಎಂಬ ನಿರೀಕ್ಷೆ, ಕುತೂಹಲದಲ್ಲಿ ನಗರ ಯೋಜಕರು ಮತ್ತು ತಜ್ಞರು ಲೆಕ್ಕಾಚಾರ ಹಾಕುತ್ತಿದ್ದಾರೆ.


ಹಳೆ ಯೋಜನೆಗಳ ಸೇರ್ಪಡೆಯಾಗಬಹುದಷ್ಟೆ ಇಂದಿನ ಬಜೆಟ್ ನಲ್ಲಿ ಎಂದು ಕೆಲವರು ಹೇಳಿದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬೊಮ್ಮಾಯಿಯವರು ಕೆಲವು ಹೊಸ ಯೋಜನೆಗಳನ್ನು ಘೋಷಿಸಬಹುದು ಎಂದು ಕೆಲವರು ಅಂದಾಜಿಸುತ್ತಿದ್ದಾರೆ.

ಇನ್ನು ಕೆಲವರು ಮಂಗಳೂರು ಮಹಾನಗರ ಪಾಲಿಕೆಯನ್ನೂ ಕೇಂದ್ರೀಕರಿಸಿಕೊಂಡು ಬಜೆಟ್‌ನಲ್ಲಿ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಹೇಳುತ್ತಿದ್ದಾರೆ.

ಸಿಎಂ ಅವರು ಆರ್ಥಿಕ ಸಂಕಷ್ಟದ ಮಧ್ಯೆ ಇಂದು 22-23ನೇ ಸಾಲಿನ ಚೊಚ್ಚಲ ಬಜೆಟ್‌ ಮಂಡನೆಯಲ್ಲಿ ಪ್ರಮುಖ ನಾಲ್ಕು ವಿಭಾಗಗಳನ್ನಾಗಿ ಮಾಡಲಾಗಿದ್ದು, ಮಹಿಳೆಯರಿಗೆ ಪ್ರತ್ಯೇಕ ಬಜೆಟ್‌, ಚಿಣ್ಣರಿಗಾಗಿ ವಿಶೇಷ ಪುಟಾಣಿ ರೈಲು, ಬಜೆಟ್‌ ಗಾತ್ರ 2 ಲಕ್ಷದ 60 ಸಾವಿರ ಕೋಟಿ ಗಾತ್ರದ ಬಜೆಟನ್ನು ಸಿಎಂ ಮಂಡಿಸುತ್ತಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿ ಪಂಚ ಸೂತ್ರಗಳನ್ನು ಕೈಗೆತ್ತಿಕೊಂಡಿದ್ದಾರೆ. ರೈತ ಶಕ್ತಿ ಹೊಸ ಯೋಜನೆ ಘೋಷಣೆ, ಮಹಿಳಾ ಸಬಲೀಕರಣಕ್ಕೆ 43,188 ಕೋಟಿ ಮೀಸಲು ಅದೇ ರೀತಿ ಆಡಳಿತ ಸುಧಾರಣೆಗೆ 56,710 ಕೋಟಿ ಮೀಸಲು ನೀಡಿದ್ದಾರೆ.

ಕೆರೆಗಳ ಅಭಿವೃದ್ಧಿಗೆ 500 ಕೋಟಿ ಮೀಸಲು, ಹಿಂದುಳಿದ ತಾಲೂಕು ಅಭಿವೃದ್ಧಿಗೆ 3 ಸಾಲ ಕೋಟಿ ಅನುದಾನ, ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ, ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ,

ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ, ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ, ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ , ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ. ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ,

ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡುತ್ತಿದ್ದಾರೆ.

ಬಜೆಟ್ ಮಂಡನೆಯ ವಿವರ ಹೀಗಿದೆ:-

1. ಮೇಕೆದಾಟು ಯೋಜನೆಗೆ 1000 ಕೋಟಿ ಮೀಸಲು.

2. ಎತ್ತಿನ ಹೊಳೆ ಯೋಜನೆಗ 3000 ಕೋಟಿ, ಭದ್ರಮೇಲ್​ದಂಡೆ 3000 ಕೋಟಿ, ಕಳಸಾಬಂಡೂರಿ ನಾಲ ತೀರುವುದು ಯೋಜನೆ 1000 ಕೋಟಿ, ಕೃಷ್ಣ ಮೇಲ್ ದಂಡೆ 3 ನೇ ಹಂತ 5000 ಕೋಟಿ ರೂ ಮೀಸಲಿಡಲು ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ.

3. ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 15,267 ರೂ ಅನುದಾನ

4. 2026ರ ವೇಳೆಗೆ 148 ಕಿ.ಮೀ. ಮಾರ್ಗ ಪೂರ್ಣ ಭರವಸೆ ನೀಡಿದ್ದಾರೆ. ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ನಿರ್ಮಾಣ. ಬೆಂಗಳೂರಿನ ನಾಲ್ಕು ಭಾಗಗಳಲ್ಲೂ 5೦೦ ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ,

5. ಶಿಕ್ಷಣಕ್ಕೆ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದು, ಆಯ್ದ ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ರಾಜ್ಯಾದ್ಯಂತ ಡಿಜಿಟಲ್​ ಗ್ರಂಥಾಲಯ ಸ್ಥಾಪನೆ, ಪ್ರತೀ ವರ್ಷ ಶಿಕ್ಷಕರಿಗೆ ಪುಲೆ ಪ್ರಶಸ್ತಿ ಘೋಷಣೆ, 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ.

6. ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ
ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಗಳಿಗೆ ಪ್ಯಾಕೇಜ್ ಟ್ರಿಪ್.
30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ. ಪುಣ್ಯ ಕ್ಷೇತ್ರಗಳಿಗೆ ಕೆಎಸ್ ಟಿಡಿಸಿ ವತಿಯಿಂದ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗುವುದು. ಶ್ರೀ ಶೈಲದಲ್ಲಿ 85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲಾಗುವುದು,

7. ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ 1,880 ಕೋಟಿ ರೂ. ಮೀಸಲು
ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ 1,880 ಕೋಟಿ ಮೀಸಲಿಡಲಾಗುವುದು. 250 ಕೋಟಿರೂ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿರ್ಮಾಣ, ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಬಂದರು ನಿರ್ಮಾಣ, 350 ಕೋಟಿ ವೆಚ್ಚದಲ್ಲಿ ಮಂಗಳೂರು ಬಂದರು ವಿಸ್ತರಣೆ, ಕಾರವಾರದಲ್ಲಿ ಜಲಸಾರಿಗೆ, ಮೀನುಗಾರಿಕಾ ಸಂಸ್ಥೆ ಸ್ಥಾಪನೆ, ತದಡಿ-ಅಘನಾಶಿನಿ ಮಧ್ಯೆ ದೋಣಿ ಮಾರ್ಗ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

8. ನೋಡಿ ಕಲಿ, ಮಾಡಿ ಕಲಿ ಕಲ್ಪನೆಯಡಿ ಕಿಟ್ ವಿತರಣೆ ಮಾಡಲಾಗುವುದು, 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಕಿಟ್

9. ಲ್ಯಾಬ್ ಇನ್ ಎ ಕಿಟ್ ವಿತರಣೆ ಮಾಡಲಾಗುವುದು, ರಾಜ್ಯದ ಹೆಣ್ಣು ಮಕ್ಕಳಿಗೆ ಮಾಸಿಕ ದಿನಗಳಿಗೆ ನ್ಯಾಪ್ಕಿನ್​ ನೀಡಲಾಗುವುದು ಎಂದು ಘೋಷಿಸಿದ್ದಾರೆ.

10. ಮೈಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ ನಿರ್ಧಾರ
ಮೈಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ ನಿರ್ಧಾರ ಮಾಡಲಾಗಿದೆ. 50 ಕೋಟಿ ರೂ. ವೆಚ್ಚದಲ್ಲಿ ಯಂತ್ರಗಳ ದುರಸ್ತಿ, ಕಲಬುರಗಿ, ವಿಜಯಪುರದಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ, ಬಳ್ಳಾರಿಯಲ್ಲಿ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ, ನವಲಗುಂದ, ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್ ನಿರ್ಮಿಸಲಾಗುವುದು, ಇದರಿಂದ 5 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.

11. ಬೆಂಗಳೂರಿನಲ್ಲಿ ನ.2ರಿಂದ 4ರವರೆಗೆ ಇನ್ವೆಸ್ಟ್ ಕರ್ನಾಟಕ ಆರಂಭ
ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ ಮಾಡಲಾಗುವುದು, ಇದರಿಂದ 10 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಹೂಡಿಕೆದಾರರನ್ನು ಆಕರ್ಷಿಸಲು ‘ಇನ್ವೆಸ್ಟ್ ಕರ್ನಾಟಕ’ ಕಾರ್ಯಕ್ರಮ ಆರಂಭಿಸಲಾಗುವುದು. ಬೆಂಗಳೂರಿನಲ್ಲಿ ನ.2ರಿಂದ 4ರವರೆಗೆ ‘ಇನ್ವೆಸ್ಟ್ ಕರ್ನಾಟಕ’ ಆರಂಭ ಮಾಡಲಾಗುವುದು.

12. ಸಾರಿಗೆ ಇಲಾಖೆಗೆ 8,007 ಕೋಟಿ ರಾಜಸ್ವ ಸಂಗ್ರಹಣೆ ಗುರಿ, ಅಬಕಾರಿ ಇಲಾಖೆಗೆ 29,000 ಕೋಟಿ ರಾಜಸ್ವ ಸಂಗ್ರಹ ಗುರಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ ರಾಜಸ್ವ ಗುರಿ, ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ತೆರಿಗೆ ಸಂಗ್ರಹ ಗುರಿ, 287 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ ಕೃಷಿ ಜಮೀನು ಮತ್ತು ಇತರೆ ಸ್ವತ್ತು ಡ್ರೋಣ್ ಸರ್ವೇ, 406 ಕೋಟಿ ವೆಚ್ಚದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಉನ್ನತೀಕರಣ, ಎಲ್ಲಾ ಪಾರಂಪರಿಕ ನೊಂದಾಯಿತ ಶಾಶ್ವತ ದಾಖಲೆಗಳ ಸ್ಕ್ಯಾನಿಂಗ್

13. ಮೊದಲ ಹಂತದಲ್ಲಿ ಬಿಬಿಎಂಪಿ ಮತ್ತು ೧೦ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಕ್ಯಾನಿಂಗ್ ಗೆ 15 ಕೋಟಿ ಮೀಸಲು.

14. ಸರ್ವರಿಗೂ ಸೂರು ಯೋಜನೆ ಅಡಿ 5 ಲಕ್ಷ ಹೊಸ ಮನೆ ನಿರ್ಮಾಣ

ಸರ್ವರಿಗೂ ಸೂರು ಯೋಜನೆ ಅಡಿ 5 ಲಕ್ಷ ಹೊಸ ಮನೆಗಳು. 6,612 ಕೋಟಿ ರೂಪಾಯಿ ವೆಚ್ಚದಲ್ಲಿ 5 ಲಕ್ಷ ಹೊಸ ಮನೆಗಳು, ಮನೆಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ, ಪ.ಪಂಗಡಕ್ಕೆ ಆದ್ಯತೆ, ಪ.ಜಾತಿ, ಪ.ಪಂಗಡದ ಅಲೆಮಾರಿ, ಅರೆ ಅಲೆಮಾರಿ ಜನಾಂಗ ಹಾಗೂ ಮೀನುಗಾರರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೂ ಆದ್ಯತೆ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

15. ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ
ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ ನೀಡಲಾಗುವುದು, ಬೆಳಕು ಕಾರ್ಯಕ್ರಮದಡಿ 98 ಸಾವಿರ ಮನೆಗೆ ವಿದ್ಯುತ್, ವಿದ್ಯುತ್ ಸರಬರಾಜು ನಿಗಮಗಳ ಪುನರ್ ರಚನೆ, ಆಸ್ತಿ ಹಣ ಗಳಿಕೆ, ಆರ್ಥಿಕ ಸ್ವಾವಲಂಬನೆ ಹಾಗೂ ಸಂಪನ್ಮೂಲ ಕ್ರೋಡೀಕರಣಕ್ಕೆ ತಜ್ಞರ ಸಮಿತಿ ರಜನೆ, ನಿರಂತರವಾಗಿ ವಿದ್ಯುತ್ ಸರಬರಾಜಿಗೆ ಉಪಕೇಂದ್ರ,, ಕೆಪಿಟಿಸಿಎಲ್ ವತಿಯಿಂದ 64 ಹೊಸ ಉಪಕೇಂದ್ರ, 10 ಸಾವಿರ ಸೌರಶಕ್ತಿ ನೀರಾವರಿ ಪಂಪ್‌ಸೆಟ್ ಹಾಗೂ 227 ಕೋಟಿ ರೂಪಾಯಿ ವೆಚ್ಚದಲ್ಲಿ ಸೌರಶಕ್ತಿ ಪಂಪ್‌ಸೆಟ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

16. ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ
ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವ ಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳಕ್ಕೆ ಸ್ಕೀಮ್ ರೂಪಿಸಲಾಗಿದ್ದು, ಸೇವಾನುಭವ ಆಧಾರದಲ್ಲಿ ಸಾವಿರದಿಂದ 1500 ರೂಗಳ ಹೆಚ್ಚಳ ಹಾಗೂ ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

17. 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು. ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ 1,600 ಕೋಟಿ ನೀಡಲಾಗುತ್ತಿದೆ. ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ 300 ಕೋಟಿ, ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ 188 ಕೋಟಿ, 750 ಗ್ರಾ.ಪಂ.ಗಳಿಗೆ ತಲಾ 25 ಲಕ್ಷ ರೂಪಾಯಿ, ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

18. ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂ. ಅನುದಾನ, ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ

19. ಕೃಷಿ ಜಮೀನು ಡ್ರೋನ್ ಸರ್ವೆಗೆ 287 ಕೋಟಿ ರೂ. ಅನುದಾನ

20. 10 ಮಹಾನಗರ ಪಾಲಿಕೆ ವ್ಯಾಪ್ತಿಯ ದಾಖಲೆ ಸ್ಕ್ಯಾನಿಂಗ್​ಗಾಗಿ 15 ಕೋಟಿ ರೂಪಾಯಿ ಮೀಸಲು. ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗಲಗಳ ಸ್ವಾಯತ್ತತೆ ಹಾಗೂ ದೇಗುಲಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿ ಘೋಷಣೆ ಮಾಡಿದ ಸಿಎಂ.

21. ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು

22. ಆಹಾರ ಇಲಾಖೆ – 2,288 ಕೋಟಿ ರೂಪಾಯಿ ಅನುದಾನ, ವಸತಿ ಇಲಾಖೆ – 3,594 ಕೋಟಿ ರೂಪಾಯಿ ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ಅನುದಾನ ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ, ,ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ, ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ, ಒಳಾಡಳಿತ ಮತ್ತು ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ , ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ

23. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ. ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ, ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ .

ಸುದೀರ್ಘ ಆಡಳಿತ ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಕೃಷಿ, ಪೂರಕ ಚಟುವಟಿಕೆಗೆ 33,700 ಕೋಟಿ ರೂ, ಘೋಷಣೆ ಮಾಡಿದ್ದಾರೆ.

ಮುಂತಾದ ಅಂಶಗಳಿಗೆ ಪ್ರಾಮುಖ್ಯತೆ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದಾರೆ.

 

 

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂ ಮೌಲ್ಯದ ಚಿನ್ನ ವಶ

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಂದಿಳಿದ ಕೇರಳ ಮೂಲದ ಪ್ರಯಾಣಿಕನೊಬ್ಬ ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಆ.10 ರಂದು ದುಬೈನಿಂದ ಮಂಗಳೂರಿಗೆ ಬಂದಿಳಿದ ಸ್ಪೈಸ್‌ ಜೆಟ್‌...

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...

ಕಾಲು ಜಾರಿ ಹೊಳೆಗೆ ಬಿದ್ದ ಸನ್ನಿಧಿಯ ಅಂತ್ಯಕ್ರಿಯೆ: ಮುಗಿಲು ಮುಟ್ಟಿದ ಕುಟುಂಬಸ್ಥರು-ಸ್ನೇಹಿತರ ಆಕ್ರಂದನ

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಬಾಲಕಿ ಸನ್ನಿಧಿ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದ್ದು, ಈಕೆ ಅಂತ್ಯ ಕ್ರಿಯೆಯನ್ನು ಮನೆ ಸಮೀಪದಲ್ಲೇ ನಿನ್ನೆ ನೆರವೇರಿಸಲಾಗಿದೆ. ಸರ್ಕಾರಿ‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ...