ಉಡುಪಿ: ಜಿಲ್ಲೆಯ ಜನತೆಯ ಬಹು ಬೇಡಿಕೆಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ಸರ್ಕಾರಕ್ಕೆ ಹಸ್ತಾಂತರ ಮಾಡಿ ಸಚಿವ ಸಂಪುಟವು ಅನುಮೋದನೆ ನೀಡಿದೆ.
200 ಬೆಡ್ ಗಳ ಈ ಆಸ್ಪತ್ರೆಯಲ್ಲಿ ಪ್ರಸ್ತುತ ಇರುವ ಎಲ್ಲಾ ಸಿಬ್ಬಂದಿ ಸಹಿತ 103 ಮಂದಿ ಹೆಚ್ಚುವರಿ ಸಿಬ್ಬಂದಿ ಹಾಗೂ ವಾರ್ಷಿಕ ಅನುದಾನ ರೂ. 9.83 ಕೋಟಿಗೆ ಅನುಮೋದನೆ ನೀಡಲಾಗಿದೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಶಾಸಕ ರಘುಪತಿ ಭಟ್ ಮಾತನಾಡಿ ” ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಕಟ್ಟಡ ಶಿಲಾನ್ಯಾಸಕ್ಕೆ ಬಂದಿದ್ದ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಯನ್ನು ಸರ್ಕಾರದ ವಶಕ್ಕೆ ಪಡೆಯುವ ಬಗ್ಗೆ ಆಶ್ವಾಸನೆ ನೀಡಿದ್ದರು.
ಆದರೆ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ ಡಾ ಸುಧಾಕರ್ ಹಾಗೂ ಸಿಎಂ ಬೊಮ್ಮಾಯಿ ಅವರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದು ಹೇಳಿದರು.