Connect with us

    DAKSHINA KANNADA

    ಶಿವಮೊಗ್ಗ ಗಲಾಟೆಯ ಮತಾಂಧ ಶಕ್ತಿಗಳಿಗೆ ಕಡಿವಾಣ ಹಾಕದ ರಾಜ್ಯ ಸರ್ಕಾರ – ಸಂಸದ ನಳಿನ್‌

    Published

    on

    ಮಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಸಂಘರ್ಷ ನಡೆದಿರುವುದನ್ನು ಭಾರತೀಯ ಜನತಾ ಪಕ್ಷ ಖಂಡಿಸುತ್ತದೆ ಎಂದು ಸಂಸದ ನಳಿನ್‌ ಕುಮಾರ್ ಕಟೀಲು ಹೇಳಿದ್ದಾರೆ.

    ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾರದ ಹಿಂದೆಯಷ್ಟೇ ಹಿಂದೂಗಳ ಪವಿತ್ರ ಹಬ್ಬ ಗಣೇಶ ಚತುರ್ಥಿ ನಡೆದಿದ್ದು, ಎಲ್ಲವೂ ಶಾಂತಿಯುತವಾಗಿ ನಡೆದಿದೆ.

    ಆದರೆ ಶಿವಮೊಗ್ಗದಲ್ಲಿ ನಡೆದಿರುವ ಸಂಘರ್ಷ ಕಂಡರೆ ಇದರ ಹಿಂದೆ ಮತಾಂಧ ಶಕ್ತಿಗಳು ಕೆಲಸ ಮಾಡಿವೆ ಎನ್ನುವುದು ಸ್ಪಷ್ಟವಾಗಿದೆ.

    ಈ ಬಗ್ಗೆ ಗೃಹ ಇಲಾಖೆ ಕ್ರಮ ವಹಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇಂತಹ ಕೃತ್ಯಗಳು ನಡೆಯುತ್ತಿದೆ.

    ಮತಾಂಧ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವ ಕಾರಣ ಇವೆಲ್ಲವೂ ಇಂದು ಮತ್ತೆ ಎದ್ದು ನಿಂತಿವೆ ಎಂದರು.

    ಶಿವಮೊಗ್ಗದಲ್ಲಿ ಭಯೋತ್ಪಾದಕ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ.

    ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದ್ದ ಭಯೋತ್ಪಾದನಾ ಕೃತ್ಯ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್‌ ಸೇರಿದಂತೆ ಇದೀಘ ತೀರ್ಥ ಹಳ್ಳಿ ಬ್ರದರ್ಸ್ ಹೆಸರಿನಲ್ಲಿ ಮತ್ತೆ ಭಯೋತ್ಪಾದನಾ ಕೃತ್ಯ ಹೆಚ್ಚುತ್ತಿರುವುದು ನನಗೆ ತಿಳಿದು ಬಂದಿದೆ.

    ಸರಕಾರ ಕಠಿಣ ಕ್ರಮ ವಹಿಸದೇ ಇರುವ ಕಾರಣದಿಂದಲೇ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಮಾಜ ಘಾತುಕ ಕೃತಗಳಲ್ಲಿ ಯಾರ್ಯಾರು ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧ ಕಠಿಣ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

    ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ಬಗ್ಗೆ ಕಠಿಣ ಕ್ರಮ ಇನ್ನಾದರೂ ವಹಿಸಬೇಕು.

    ಪ್ರವೀಣ್‌ ನೆಟ್ಟಾರು ಹತ್ಯೆ ಸಂದರ್ಭದಲ್ಲಿ ಎನ್‌ಐಎ ಕಠಿಣ ಕ್ರಮ ವಹಿಸಿದ್ದರಿಂದ ಬಳಿಕ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲಸಿತ್ತು.

    ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಇಂತಹ ಕೃತ್ಯಗಳು ಮತ್ತೆ ಹೆಚ್ಚಾಗಿದೆ.

    ಇವುಗಳಿಗೆಲ್ಲಾ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಸರಕಾರ ಸಣ್ಣ ಮಟ್ಟಿನ ರಾಜಕಾರಣ ಮಾಡುತ್ತಿದೆ.

    ಶಿವಮೊಗ್ಗ, ಕೋಲಾರದಲ್ಲಿನ ಘಟನೆಗಳನ್ನು ನೋಡಿದರೆ ಇದು ದೃಢವಾಗುತ್ತಿದೆ ಎಂದರು. ಸನಾತನ ಧರ್ಮವನ್ನು ಟೀಕಿಸುವ, ಕೀಳಾಗಿ ಮಾತನಾಡುವ ಕೃತ್ಯವನ್ನು ಬಿಜೆಪಿ ಸಹಿಸುವುದಿಲ್ಲ.

    ಐಎನ್‌ಡಿಎ ಕೂಟ ಹಾಗೂ ಕರ್ನಾಟಕದ ಕಾಂಗ್ರೆಸ್ ಕೂಟವೂ ಹಿಂದೂ ಸಮಾಜಕ್ಕೆ ವಿರೋಧವಾಗಿ ಮಾತನಾಡುತ್ತಿದೆ. ಮತಾಂಧ ಶಕ್ತಿಗಳಿಗೆ ಇನ್ನಷ್ಟು ಕುಮ್ಮಕ್ಕು ನೀಡುತ್ತಿದೆ.

    ರಾಜ್ಯದಲ್ಲಿ ಹಿಂದೂ ವಿರೋಧಿ ಆಗಿರುವ ಕಾಂಗ್ರೆಸ್ ಸರಕಾರವಿದೆ ಎಂದರು.

    DAKSHINA KANNADA

    ಕಟೀಲು, ಕುದ್ರೋಳಿ ಕ್ಷೇತ್ರಕ್ಕೆ ನಟ ಸಂಜಯ್ ದತ್ ಭೇಟಿ

    Published

    on

    ಮಂಗಳೂರು : ಮಂಗಳೂರು ದಸರಾ ಬಲು ಸುಂದರ. ಪ್ರತೀ ವರ್ಷ ಅಬ್ಬರದಿಂದ ನಡೆವ ಮಂಗಳೂರು ದಸರಾಗೆ ಮನಸೋಲದವರಿಲ್ಲ. ವೈಭವದ ಸಂಭ್ರಮಕ್ಕೆ ಪ್ರತಿ ವರ್ಷ ಸಿನಿತಾರೆಯರು ಮೆರುಗು ನೀಡುತ್ತಾರೆ. ಈ ಬಾರಿ ಬಾಲಿವುಡ್ ನಟ ಸಂಜಯ್ ದತ್ ಬಂದಿದ್ದರು.  ಮೊದಲು ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿಯ ದರ್ಶನ ಪಡೆದ ಅವರು, ಬಳಿಕ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ದರ್ಬಾರ್ ಹಾಲ್ ಗೆ ತೆರಳಿ ದೇವಿಯರ ವಿಗ್ರಹ ಕಣ್ತುಂಬಿಕೊಂಡರು. ಶಾರದೆ ಮಾತೆಗೆ ನಮಿಸಿದರು.

    ಎರಡೂ ದೇವಸ್ಥಾನದಲ್ಲಿ ಸಂಜಯ್ ದತ್ ರಿಗೆ ದೇವರ ಶೇಷ ವಸ್ತ್ರ ಮತ್ತು ಪ್ರಸಾದ ನೀಡಿ ಗೌರವಿಸಲಾಯಿತು.

    ಬಳಿಕ ಅವರು ಹುಲಿ ಕುಣಿತದ ಊದು ಪೂಜೆಯಲ್ಲಿ ಭಾಗಿಯಾದರು.  ಪಿಲಿ ನಲಿಕೆ ನೋಡಿ ಆನಂದಿಸಿದರು. ಬಳ್ಳಾಲಭಾಗ್‌ ನಲ್ಲಿ ನಡೆದಿದ್ದ ಈ ಊದು ಪೂಜೆ ಕಾರ್ಯಕ್ರಮಕ್ಕೆ ನಟ ಸಂಜಯತ್ ದತ್ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡರು. ತಮ್ಮ ಮೊಬೈಲ್‌ ನಲ್ಲಿ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದ್ದರು.

     

     

    Continue Reading

    DAKSHINA KANNADA

    ‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ….!!

    Published

    on

    ಮಂಗಳೂರು; ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಚರಿಸಲಾಗುತ್ತಿರುವ ‘ಮಂಗಳೂರು ದಸರಾ’ ಸಂಭ್ರಮದ ಬೃಹತ್ ಶೋಭಾಯಾತ್ರೆ ಇಂದು (ಅ.13) ಸಂಜೆ 4 ಗಂಟೆಗೆ ಆರಂಭವಾಗಿ ನಾಳೆ (ಅ.14) ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪನಗೊಳ್ಳಲಿದೆ.


    ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ಧನ ಪೂಜಾರಿ ನೇತೃತ್ವದಲ್ಲಿ ನಡೆಯುವ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಶ್ರೀ ಮಹಾಗಣಪತಿ, ನವದುರ್ಗೆಯರ ಹಾಗೂ ಶಾರದಾ ಮಾತೆಯ ವರ್ಣರಂಜಿತ ಬೃಹತ್ ದಸರಾ ಶೋಭಾಯಾತ್ರೆ, ಅತ್ಯಾಕರ್ಷಕ ವಿದ್ಯುತ್ ದೀಪದ ಅಲಂಕೃತ ಮಂಟಪದೊಂದಿಗೆ ಹೊರಡಲಿದೆ.


    ಶೋಭಾಯಾತ್ರೆಗೆ ಹಲವು ಸ್ತಬ್ಧಚಿತ್ರಗಳು, ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ಕಲಾತಂಡಗಳು ಹುಲಿ ವೇಷ ಸಹಿತ ಇತರ ವೇಷಗಳು, ಚೆಂಡೆ ತಂಡಗಳು ಮೆರುಗು ನೀಡಲಿದೆ.

    ಊದು ಪೂಜೆ ಸಹಿತ ಭಾರೀ ವೈಭವದಿಂದ ಜರುಗುವ ಶಾಭಾಯಾತ್ರೆಯನ್ನು ಕಣ್ತುಂಬಿಕೊಳ್ಳಲು ಉರು ಮಾತ್ರವಲ್ಲದೆ ಪರವೂರಿನಿಂದಲೂ ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ಗಣ್ಯಾತಿಗಣ್ಯರು ಹಾಜರಾಗಲಿದ್ದು, ಸಂಭ್ರಮ ದುಪ್ಪಟ್ಟಾಗುವ ನಿರೀಕ್ಷೆಯಿದ್ದು, ಇನ್ನೇನು ಕೆಲವೇ ಕ್ಷಣಗಳಷ್ಟೇ ಉಳಿದಿದೆ.

    Continue Reading

    BELTHANGADY

    ಗುರುವಾಯನಕೆರೆ – ಹೊಂಡ ತಪ್ಪಿಸಲು ಹೋಗಿ ಕಾರುಗಳು ಜ*ಖಂ

    Published

    on

    ಗುರುವಾಯನಕೆರೆ: ಇಂದು (ಅ.12) ಮುಂಜಾನೆ ಎರಡು ಕಾರುಗಳ ನಡೆವೆ ಭೀಕರ ಅ*ಪಘಾತವು ಗುರುವಾಯನಕೆರೆ ಶಕ್ತಿನಗರದಲ್ಲಿ ಸಂಭವಿಸಿದೆ.


    ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡೆವೆ ಅ*ಪಘಾತ ಸಂಭವಿಸಿದೆ.


    ಐ 20 ಕಾರು ಚಾಲಕ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎಂಬುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

     

     

    ಇದನ್ನೂ ಓದಿ:  ಉಪ್ಪಿನಂಗಡಿ| ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್:‌ ಚಾಲಕ ಮೃ*ತ್ಯು

     

    ಎರಡೂ ಕಾರು ಉಲ್ಟಾ ಬಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿಲ್ಲ ಎಂಬುವುದು ತಿಳಿದು ಬಂದಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Continue Reading

    LATEST NEWS

    Trending