LATEST NEWS
ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಗಣೇಶ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಆಯೋಜಕರಿಗೆ ಪರವಾನಿಗೆ ನೀಡುವ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಯನ್ನು ಹೊರಡಿಸಿದೆ.
ಕಾರ್ಯಕ್ರಮದ ಆಯೋಜಕರು ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ಮೂರು ದಿನಗಳೊಳಗಾಗಿ ನಿಯಮಾನುಸಾರ ಪರವಾನಿಗೆಯನ್ನು ನೀಡಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.
ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಕಾಲಕಾಲಕ್ಕೆ ನ್ಯಾಯಾಲಯದ ನಿರ್ದೇಶನಗಳನ್ನು ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಿರುವ ಸೂಚನೆಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆಯನ್ನು ಪಡೆಯಬೇಕು.
ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಆಯೋಜಕರಿಂದ ಖಾತರಿಪಡಿಸಿಕೊಳ್ಳಬೇಕು.
ಅಗತ್ಯವಿರುವ ಕಡೆ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸಬೇಕು.
ವಿಶೇಷವಾಗಿ ಹೈ-ಟೆನ್ಶನ್ ತಂತಿ ಹಾದು ಹೋಗಿರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನಿರ್ಬಂಧಿಸಬೇಕು.
ಉತ್ಸವಕ್ಕೆ ಮುಂಚಿತವಾಗಿ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸಬೇಕು.
bangalore
ಈ ಬಾರಿ ಬಿಗ್ ಬಾಸ್ ಗೆಲ್ಲೋದು ನಾನೆ…ಎಂದು ಪಟ್ಟು ಹಿಡಿದ ಸ್ಪರ್ಧಿ ಯಾರು ಗೊತ್ತಾ..?
Bigboss: ಬಿಗ್ ಬಾಸ್ ಮುಕ್ತಾಯಕ್ಕೆ ಇನ್ನು ಅರ್ಧ ಜರ್ನಿ ಬಾಕಿ ಇದೆ. ಆದರೆ ಇದೀಗ ಬಿಗ್ ಬಾಸ್ ಸ್ಪರ್ಧಿಗಳ ಫೈಟ್ ಜೋರಾಗಿದ್ದು, ಈ ಬಾರಿ ಬಿಗ್ ಬಾಸ್ ಗೆಲ್ಲೋದು ನಾವೇ ಎಂದು ಪಟ್ಟು ಹಿಡಿದ ಸ್ಫರ್ಧಿಗಳು ಗೆಲ್ಲುತ್ತಾರೋ ಅನ್ನೋದು ಕಾದು ನೋಡಬೇಕಿದೆ.
ಈ ವಾರ ದೊಡ್ಮನೆಯಲ್ಲಿ ವಿನಯ್ ಆರ್ಭಟ ಜೋರಾಗಿತ್ತು. ಜೊತೆಗೆ ಟೀಮ್ ನಲ್ಲಿ ಕಿತ್ತಾಟ ನಡೆದರೂ ವಿನಯ್ ಮಾತ್ರ ತಲೆಕೆಡಿಸದೆ ಈ ಬಾರಿ ಬಿಗ್ ಬಾಸ್ ಟೈಟಲ್ ನಾನೇ ಗೆಲ್ಲೋದು ಎಂದು ಹೇಳಿಕೊಂಡಿದ್ದಾರೆ.
ಈಗಾಗಲೇ ಬಿಗ್ ಬಾಸ್ ಜರ್ನಿ ಅರ್ಧ ಮುಗಿದಿದ್ದು, ಇನ್ನು ಅರ್ಧ ಬಾಕಿ ಇದೆ. ಹಾಗಾಗಿ ಇದರಲ್ಲಿ ಯಾರು ಗೆಲ್ಲೋತ್ತಾರೋ ಅನ್ನೊ ಪ್ರಶ್ನೆ ಮತ್ತೇ ಕಾಡಿದೆ. ವಾರದಿಂದ ವಾರಕ್ಕೆ ಎಲಿಮಿನೇಟ್ ಸ್ಪರ್ಧಿಗಳು ಎಲಿಮಿನೇಟ್ ಆಗುತ್ತಿದ್ದರೆ. ಇತ್ತ ವಿನಯ್ ಯಾರನ್ನೂ ಲೆಕ್ಕಿಸದೇ ತಾವೇ ಈ ಬಾರಿ ಫಿನಾಲೆ ಮೆಟ್ಟಿಲೇರಬೇಕು ಎಂದಾಗ ಸ್ನೇಹಿತ್ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಹಾಗಗಿ ವಿನಯ್ ಗೆ ಮತ್ತಷ್ಟು ಧೈರ್ಯ ಬಂದಿದೆ. ಬಿಗ್ ಬಾಸ್ ಮನೆಯಲ್ಲಿ ನಮ್ರತಾ, ಸ್ನೇಹಿತ್ ಮತ್ತು ವಿನಯ್ ಅವರದ್ದು ಒಂದು ಗುಂಪು. ಈ ಮೂವರು ಒಬ್ಬರನ್ನೊಬ್ಬರು ಬಿಟ್ಟು ಕೊಡದೇ ಆಟವಾಡುತ್ತಾ ಬಂದಿದ್ದಾರೆ. ಆದರೆ ಕ್ಯಾಪ್ಟನ್ಸಿ ಟಾಸ್ಕ್ ನಲ್ಲಿ ವಿನಯ್ ವಿರುದ್ಧ ನಮ್ರತಾ ಮತ ಚಲಾಯಿಸಿದ್ದಾರೆ. ಹಾಗಾಗಿ ನಮ್ರತಾ ಇವರ ಗುಂಪಿನಿಂದ ಹೊರ ನಡೆದಿದ್ದಾರೆ.
ಆ ಬಳಿಕ ವಿನಯ್ ಹಾಗೂ ಸ್ನೇಹಿತ್ ಬಿಗ್ ಬಾಸ್ ಗೆಲುವಿನ ಬಗ್ಗೆ ಮಾತನಾಡಿಕೊಂಡಿದ್ದಾರೆ. ಈ ಬಾರಿ ಫಿನಾಲೆ ವೇದಿಕೆಯ ಮೇಲೆ ನಾವೇ ಇರಬೇಕು ಅಂತಾರೆ ಸ್ನೇಹಿತ್. ನಾವೇ ಇರಬೇಕು. ಆದರೆ, ನಾನೇ ವಿನ್ ಆಗಬೇಕು ಎಂದು ವಿನಯ್ ನುಡಿಯುತ್ತಾರೆ. ಅದಕ್ಕೆ ಸ್ನೇಹಿತ್ ಖುಷಿಯಿಂದಲೇ, ನಿಜಕ್ಕೂ ಇದಕ್ಕಿಂತ ಸಂತೋಷ ಏನಿದೆ ಎನ್ನುತ್ತಾರೆ.
ಈ ಮಾತು ಕೇಳಿಸಿಕೊಂಡ ಬಿಗ್ ಬಾಸ್ ನೋಡುಗರು, ನಮ್ರತಾಗಿಂತಾನೂ ಸ್ನೇಹಿತ್ ಸಖತ್ ಚಮಚಾ ಎಂದು ಕಾಮೆಂಟ್ ಮಾಡಿದ್ದಾರೆ. ಇದೀಗ ವಿನಯ್ ನ ಕನಸು ಈಡೇರುತ್ತಾ..? ಅವರೇ ಬಿಗ ಬಾಸ್ ವಿನ್ನರ್ ಆಗುತ್ತಾರ ಎಂದು ಕಾದು ನೋಡಬೇಕಿದೆ.
LATEST NEWS
ಪ್ರಧಾನಿ ಮೋದಿ ಜೊತೆ ಸೆಲ್ಫೀ ಕ್ಲಿಕ್ಕಿಸಿದ ಇಟಲಿಯ ಲೇಡಿ ಪಿಎಂ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಕ್ಲಿಕ್ಕಿಸಿಕೊಂಡ ಸೆಲ್ಫಿ ಪೊಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ.
ಸಿಓಪಿ 28 ಶೃಂಗಸಭೆಯ ನಿಮಿತ್ತ ದುಬೈಗೆ ತೆರಳಿದ್ದ ಪ್ರಧಾನಿ ನರೇಂದ ಮೋದಿ ಅವರ ಜೊತೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮಾತುಕತೆ ನಡೆಸಿ ಸೆಲ್ಫೀ ಪೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಮೋದಿ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಮೆಲೋನಿ ಅವರು, ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿ “ಗುಡ್ ಫ್ರೆಂಡ್ಸ್ ಎಟ್ ಸಿಓಪಿ28 #ಮೆಲೋಡಿ” ಎಂಬ ಶೀರ್ಷಿಕೆ ನೀಡಿದ್ದಾರೆ. ಈ ಪೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Good friends at COP28.#Melodi pic.twitter.com/g0W6R0RJJo
— Giorgia Meloni (@GiorgiaMeloni) December 1, 2023
ಮೆಲೋನಿ ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟೆಲಿ ಪ್ರಧಾನಿ ನಿಯೋಗದಿಂದ ಮಾತುಕತೆ ನಡೆದಿತ್ತು. ದುಬೈಗೆ ತೆರಳಿದ್ದ ಮೋದಿಯವರು ಸಿಓಪಿ 28 ಶೃಂಗಸಭೆಯಾಗಿ ಇಂದು ದೆಹಲಿಗೆ ಮರಳಿದ್ದಾರೆ. ದುಬೈ ಭೇಟಿ ಸಂದರ್ಭದಲ್ಲಿ ಮೋದಿಯವರು, ವಿವಿಧ ರಾಷ್ಟ್ರಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದ್ದಾರೆ.
Met PM @GiorgiaMeloni of Italy on the sidelines of the #COP28 Summit.
Looking forward to collaborative efforts between India and Italy for a sustainable and prosperous future. pic.twitter.com/IbiYLzqS4t
— Narendra Modi (@narendramodi) December 1, 2023
ಮೋದಿಯವರು ಮೆಲೋನಿ ಅವರಲ್ಲದೆ, ಪ್ರಧಾನಿ ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್, ಬ್ರೆಜಿಲ್ ಪ್ರಧಾನಿ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ಬ್ರಿಟಿಷ್ ವಿದೇಶಾಂಗ ಸಚಿವ ಡೇವಿಡ್ ಕ್ಯಾಮರೂನ್, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್ ಅವರನ್ನು ಭೇಟಿಯಾದರು.
FILM
ರಶ್ಮಿಕಾ ಮಂದಣ್ಣ ಪರಭಾಷೆ ನಟರಿಗೆ ಲಕ್ಕಿ ಚಾರ್ಮ್
Rashmika mandanna : ಕನ್ನಡ ಬೆಡಗಿ ರಶ್ಮಿಕಾ ಮಂದಣ್ಣ ಅಂದ್ರೆ ಕೆಲವರಿಗೆ ಇಷ್ಟ, ಇನ್ನೂ ಕೆಲವರಿಗೆ ಅಷ್ಟಕಷ್ಟೆ.ಆದ್ರೆ ಬೇರೆ ಭಾಷೆಯ ನಟರಿಗೆ ರಶ್ಮಿಕಾ ಅಂದ್ರೆ ತುಂಬಾನೆ ಇಷ್ಟ ಅಂತೆ.
ಎಲ್ಲಾ ಇಂಡಸ್ಟ್ರಿಗಳಲ್ಲಿಯೂ ರಶ್ಮಿಕಾ ಸದ್ಯ ಬೇಡಿಕೆಯ ನಟಿ.ಸೌತ್ ಟು ನಾರ್ತ್ ರಶ್ಮಿಕಾ ಅವರಿಗೆ ಸಿನಿಮಾರಂಗದಲ್ಲಿ ಭಾರೀ ಬೇಡಿಕೆ ಇದೆ.
ರಶ್ಮಿಕಾ ಅವರ ಮೊದಲ ಸಿನಿಮಾ ಕಿರಿಕ್ ಪಾರ್ಟಿ ಬ್ಲಾಕ್ ಬಸ್ಟರ್ ಹಿಟ್. ಕನ್ನಡದಲ್ಲಿ ಆ ಬಳಿಕ ಮಾಡಿದ ಚಮಕ್, ಅಂಜನಿಪುತ್ರ, ಪೊಗರು ಸಿನೆಮಾ ಬ್ಲಾಕ್ ಬಸ್ಟರ್ ಚಿತ್ರಗಳು ಎನಿಸಿಕೊಂಡಿವೆ.
ತಮಿಳು, ತೆಲುಗು ಬಾಷೆಯಲ್ಲಿ ಸತತ ಫ್ಲಾಪ್ ಕೊಡುತ್ತಿದ್ದ ಸ್ಟಾರ್ ಹೀರೋಗಳ ಜೊತೆ ಒಂದೊಂದು ಸಿನಿಮಾ ಮಾಡಿ ಅವರಿಗೆ ಬಿಗ್ ಸಕ್ಸಸ್ ಕೊಟ್ಟಿದ್ದಾರೆ.
ವಿಜಯ್, ಅಲ್ಲು ಅರ್ಜುನ್, ರಣಬೀರ್ ಕಪೂರ್ನಂತ ಸ್ಟಾರ್ ಹೀರೋಗಳು ಸತತವಾಗಿ ಎವರೇಜ್ ಮಟ್ಟದಲ್ಲಿ ಸಿನಿಮಾ ಮಾಡುತ್ತಿದ್ದರು.ಆದ್ರೆ ರಶ್ಮಿಕಾ ಅವರ ಜೊತೆ ನಟಿಸಿ ಅವರಿಗೆ ಗೆಲುವು ತಂದುಕೊಟ್ಟಿದ್ದಾರೆ.