Wednesday, October 5, 2022

ರಾಜ್ಯಸರ್ಕಾರದಿಂದ ಗುಡ್ ನ್ಯೂಸ್: ನಿರಾಳರಾದ ಸಾರ್ವಜನಿಕರು

ಬೆಂಗಳೂರು: ಕೊರೊನಾ ಏರಿಕೆ ಹಿನ್ನಲೆ ಜಾರಿಯಲ್ಲಿದ್ದ ಹಲವು ನಿರ್ಬಂಧಗಳನ್ನು ಸಡಿಲಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು. ರಾಜ್ಯಾದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂವನ್ನು ಜನವರಿ 31 ರಿಂದ ತೆಗೆದುಹಾಕಿದೆ.

ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಗ್ಗೆ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದ ಕಂದಾಯ ಸಚಿವ ಆರ್ ಅಶೋಕ್ “ಹೋಟೆಲ್, ರೆಸ್ಟೋರೆಂಟ್, ಪಬ್ ಬಾರ್‌ಗಳಿಗೆ ಸಂಪೂರ್ಣವಾಗಿ ತೆರೆಯಲು ಅನುಮತಿ ನೀಡಲಾಗಿದೆ ಎಂದರು.

ರಾಜ್ಯ ಸರಕಾರ ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಅವಕಾಶವನ್ನು ನೀಡಿದೆ.

ನಿರ್ಬಂಧವಿದ್ದ ಎಲ್ಲಾ ಕಚೇರಿಗಳು ತೆರೆಯಲು ಅನುಮತಿ ನೀಡಿದ್ದು. ದೇವಾಲಯಗಳಲ್ಲಿ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ 50ರ ಸಾಮರ್ಥ್ಯದಲ್ಲಿ ಅವಕಾಶ ನೀಡಲಾಗಿದೆ.

ಇನ್ನು ಜಾತ್ರೆ, ಧರಣಿ, ರಾಲಿ, ಪ್ರತಿಭಟನೆಗಳಿಗೆ ನಿರ್ಬಂಧ ಮುಂದುವರೆದಿದ್ದು, ಜಿಮ್, ಈಜುಕೊಳ, ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇಕಡ 5೦ರ ನಿಯಮ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಶಾಲೆಗಳು ಪುನಾರರಂಭವಾಗಲಿದೆ.

ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್ ಗಳು, ರಂಗಮಂದಿರಗಳು, ಆಡಿಟೋರಿಯಂ ಗಳು ಮತ್ತು ಇತರ ಸ್ಥಳಗಳಲ್ಲಿ ಶೇಕಡ 50ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ.

 

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...