Sunday, December 4, 2022

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ ವ್ಯಕ್ತಪಡಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಸ್.ಜಿ ಪಂಡಿತ್ ಮತ್ತು ನ್ಯಾ. ಎಂ.ಜಿ ಉಮಾ ಅವರಿದ್ದ ವಿಭಾಗೀಯ ಪೀಠ. ತಾ.ಪಂ ಮತ್ತು ಜಿ.ಪಂ ಚುನಾವಣೆಗಳನ್ನು ತಕ್ಷಣವೇ ನಡೆಸುವಂತೆ ಕಳೆದ ವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಅದರಂತೆ ಆಯೋಗ ಚುನಾವಣೆಗಳನ್ನು ನಡೆಸಲು ಬದಲು ಬಾಕಿ ಇರುವ ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಆಯೋಗ ಮನವಿ (ಮೆಮೋ) ಸಲ್ಲಿಸಿರುವುದೇಕೆ ಎಂದು ಪ್ರಶ್ನಿಸಿತು.

ಚುನಾವಣಾ ಆಯೋಗದ ಪರ ವಕೀಲರು ವಿವರಣೆ ನೀಡಿ, ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿಯನ್ನು ರಚಿಸುವ ಚುನಾವಣಾ ಆಯೋಗದ ಅಧಿಕಾರವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಇವುಗಳಿಲ್ಲದೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ವಾದ ಆಲಿಸಿದ ಪೀಠ, ಈ ಕುರಿತಂತೆ ವಿವರವಾಹಿ ಪರಿಶೀಲಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ವಿಚಾರಣೆಯನ್ನು ಮೇ.23ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ
ರಾಜ್ಯದ ಹಲವು ತಾ.ಪಂ ಮತ್ತು ಜಿ.ಪಂ ಗಳ ಅವಧಿ 2021ರ ಏಪ್ರಿಲ್, ಮೇ, ಹಾಗೂ ಜೂನ್ ತಿಂಗಳಲ್ಲೇ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅವಧಿ ಮುಗಿದ ಜಿ.ಪಂ ಮತ್ತು ತಾ.ಪಂ ಗಳಿಗೆ ಚುನಾವಣೆ ನಡೆಸಲು ಎಲ್ಲ ಸಿದ್ದತೆ ಮಾಡಿಕೊಂಡಿತ್ತು.

ಕ್ಷೇತ್ರ ಪುನರ್ ವಿಂಗಡಣೆ ಮಾಡಿ, ಮತದಾರರ ಅಂತಿಮ ಪಟ್ಟಿ ಹಾಗೂ ಮೀಸಲಾತಿ ಕರಡು ಸಹ ಪ್ರಕಟಿಸಿತ್ತು. ಇನ್ನೇನು ಚುನಾವಣಾ ದಿನಾಂಕ ನಿಗದಿ ಮಾಡುವಷ್ಟರಲ್ಲಿ ರಾಜ್ಯ

ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಈ ಕಾರ್ಯಕ್ಕೆ ‘ಸೀಮಾ’ ನಿರ್ಣಯ ಆಯೋಗ ರಚಿಸಿತ್ತು.

ಇದರಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗದ ರಾಜ್ಯ ಚುನಾವಣಾ ಆಯೋಗ ತನ್ನ ಸಂವಿಧಾನ ಬದ್ಧ ಕರ್ತವ್ಯವನ್ನು ನಿರ್ವಹಿಸಲು ರಾಜ್ಯ ಸರ್ಕಾರ ಅಡ್ಡಿ ಮಾಡಿರುವುದನ್ನು ಆಕ್ಷೇಪಿಸಿ ಹೈಕೋರ್ಟ್ ಮೆಟ್ಟಿಲೇರಿದೆ.

LEAVE A REPLY

Please enter your comment!
Please enter your name here

Hot Topics