LATEST NEWS
ಅನುದಾನಗಳಿಗೆ ತಡೆ ಹಿಡಿದ ರಾಜ್ಯ ಸರಕಾರ: ಶಾಸಕ ಕಾಮತ್ ಖಂಡನೆ
ಮಂಗಳೂರು: ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಮೋದನೆಗೊಂಡ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿ ಮುಂದಿನ ಹಣ ಬಿಡುಗಡೆ, ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರಕಾರ ತಡೆ ನೀಡಿ ಆದೇಶ ಹೊರಡಿಸಿದ್ದು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಅನುಷ್ಠಾನದ ಹಂತದಲ್ಲಿರುವ ನೂರಾರು ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಮಸ್ಯೆ ಆಗಲಿದೆ.
ರಾಜಕೀಯ ಕಾರಣಕ್ಕಾಗಿ ಸರಕಾರ ಹೊರಡಿಸಿದ ಈ ಆದೇಶದಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಅನುಭವಿಸಬೇಕಾಗುತ್ತದೆ. ಸರಕಾರದ ಈ ನಡೆ ಖಂಡನೀಯ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಈಗಾಗಲೇ ಮಳೆಗಾಲ ಆರಂಭ ಆಗಿರುವುದರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಹತ್ತಾರು ಕಾಮಗಾರಿಗಳು ತುರ್ತಾಗಿ ಆಗಬೇಕಿದೆ. ಮಂಗಳೂರು ನಗರದಲ್ಲಿ ವಿಪರೀತ ಮಳೆ ಸುರಿಯುವುದರಿಂದ ಅಲ್ಲಲ್ಲಿ ನೆರೆ ಸಮಸ್ಯೆಗಳು ಉಂಟಾಗುತ್ತವೆ. ಕಾಮಗಾರಿಗಳು ನಿಂತು ಹೋದರೆ ಜನರ ಬದುಕು ನರಕಯಾತನೆ ಆಗಲಿದೆ. ಅನೇಕ ಕಡೆಗಳಲ್ಲಿ ರಸ್ತೆಯಲ್ಲಿ ನಡೆದಾಡಲೂ ಸಮಸ್ಯೆ ಆಗಲಿದೆ.
ಕುಡಿಯುವ ನೀರಿನ ಕಾಮಗಾರಿ, ರಾಜಕಾಲುವೆಗಳಿಗೆ ತಡೆಗೋಡೆ ಕಾಮಗಾರಿಗಳು, ಚರಂಡಿ ನಿರ್ಮಾಣ, ಸ್ಮಾರ್ಟ್ ಸಿಟಿ ಯೋಜನೆಗಳು ಸೇರಿದಂತೆ ಹಲವು ಕಾಮಗಾರಿಗಳು ತುರ್ತಾಗಿ ನಡೆಯಬೇಕಿವೆ. ಆದರೆ ಈಗ ರಾಜ್ಯ ಸರಕಾರದ ಆದೇಶದಿಂದ ಎಲ್ಲದಕ್ಕೂ ತಡೆ ಬಿದ್ದಿದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಆಡಳಿತ ನಡೆಸುವುದು ಸರಕಾರದ ಜನವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಯಾವುದೇ ಸರಕಾರ ಅಧಿಕಾರ ನಡೆಸುವಾಗ ರಾಜಕೀಯ ದ್ವೇಷದ ಅಡಿಯಲ್ಲಿ ನಿರ್ಧಾರ ಕೈಗೊಳ್ಳಬಾರದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರಾಜಕೀಯ ಹಗೆತನ ಸಾಧಿಸುವ ಸಲುವಾಗಿ ಈ ಕೆಟ್ಟ ನಿರ್ಧಾರ ಕೈಗೊಂಡಿದೆ. ಸರಕಾರದ ಈ ನಡೆಯಿಂದಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಆಗಲಿದೆ. ತಕ್ಷಣ ಸರಕಾರ ಈ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಅವರು ಆಗ್ರಹಿಸಿದ್ದಾರೆ.
ಯಾವುದೇ ಸ್ಪಷ್ಟ ಕಾರಣ ಇಲ್ಲದೆ ಸರಕಾರ ಈ ನಿರ್ಧಾರ ಕೈಗೊಂಡಿದೆ. ಅನುದಾನ ತಡೆದು ಟೆಂಡರ್ ಆಗಿರುವ ಕಾಮಗಾರಿಗಳ ಗುತ್ತಿಗೆದಾರರನ್ನು ಬ್ಯ್ಲಾಕ್ ಮೇಲ್ ಮಾಡಿ ಕಮಿಷನ್ ಹೊಡೆಯುವ ದಂಧೆಯ ಭಾಗವಾಗಿ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ.
ಅಭಿವೃದ್ಧಿ ವಿಚಾರದಲ್ಲಿ ಮುಂದೆ ಆಗುವ ಎಲ್ಲ ಸಮಸ್ಯೆಗಳಿಗೆ ಕಾಂಗ್ರೆಸ್ ನೇತೃತ್ವದ ಸರಕಾರವೇ ನೇರ ಹೊಣೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
bengaluru
ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!
ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.
ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
- bengaluru7 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA7 days ago
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!