LATEST NEWS
ಉಡುಪಿ: ಶಾಲೆಯಲ್ಲಿ ಮೊಟ್ಟೆ ವಿತರಣೆ ಯೋಜನೆಗೆ ಪೇಜಾವರ ಶ್ರೀ ವಿರೋಧ
Published
3 years agoon
By
Adminಉಡುಪಿ: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಪೇಜಾವರ ಶ್ರೀ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಮಕ್ಕಳಿಗೆ ತಿಳುವಳಿಕೆ ಇರುವುದಿಲ್ಲ. ತಮ್ಮ ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಬದಲಿಸಬಾರದು.
ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ.
ಮಕ್ಕಳೊಳಗೆ ಮತಬೇಧ ಉಂಟು ಮಾಡಬಾರದು. ಯಾರು ಏನು ಸೇವಿಸುತ್ತಾರೋ ಅದರ ಖರ್ಚು ನೀಡಲಿ. ಶಾಲೆ ಇರುವುದು ಶಿಕ್ಷಣಕ್ಕೋಸರ. ಹೀಗಾಗಿ ಅಲ್ಲಿ ಜೀವನ ಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
LATEST NEWS
ಮೊಹಾಲಿ ಕಟ್ಟಡ ಕು*ಸಿತ ಪ್ರಕರಣ; ಎರಡು ಸಾ*ವು, ಹಲವರು ಕಟ್ಟಡದಡಿ ಇರುವ ಶಂಕೆ !!
Published
14 minutes agoon
22/12/2024ಮಂಗಳೂರು/ಪಂಜಾಬ್: ಕಟ್ಟಡ ಕು*ಸಿತದಿಂದ ಹಿಮಾಚಲ ಪ್ರದೇಶದ 20 ವರ್ಷದ ಯುವತಿ ಸೇರಿದಂತೆ ಇಬ್ಬರು ಮೃ*ತಪಟ್ಟ ಘಟನೆ ಶನಿವಾರ (ಡಿ.21) ಸಂಜೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದ್ದು, ಹಲವರು ಇನ್ನೂ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂಬ ಶಂ*ಕೆ ವ್ಯಕ್ತವಾಗಿ ತೀ*ವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಥಿಯೋಗ್‌ನ ದೃಷ್ಟಿ ವರ್ಮ (20) ಓರ್ವ ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕಳೆದ ರಾತ್ರಿ ಅವಶೇಷಗಳಡಿ ಸಿಲುಕಿಕೊಂಡು ಗಂ*ಭೀರ ಸ್ಥಿತಿಯಲ್ಲಿದ್ದವರನ್ನು ರಕ್ಷಿಸಿ, ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದರು. ಇಂದು(ಡಿ।22) ಬೆಳಗ್ಗೆ ಮತ್ತೊಬ್ಬ ವ್ಯಕ್ತಿಯ ಮೃ*ತದೇಹ ಪ*ತ್ತೆಯಾಗಿದ್ದು, ಅವರನ್ನು ಹರಿಯಾಣದ ಅಂಬಾಲಾ ಜಿಲ್ಲೆಯ ಅಭಿಷೇಕ್ ಎಂದು ಗುರುತಿಸಲಾಗಿದೆ.
ಘಟನೆಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ದೀಪಕ್ ಪರೀಕ್, “ಪ್ರಾಥಮಿಕ ತನಿಖೆಯಲ್ಲಿ, ಕಟ್ಟಡದ ಮಾಲಕರು ಕಟ್ಟಡದ ಪಕ್ಕದಲ್ಲಿರುವ ನಿವೇಶನದಲ್ಲಿ ಯಾವುದೇ ಅನುಮತಿಯಿಲ್ಲದೆ ಮಣ್ಣು ತೋಡುತ್ತಿದ್ದರು” ಎಂದು ತಿಳಿಸಿದ್ದಾರೆ. ಕಳೆದ 17 ಗಂಟೆಗಳಿಂದ ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಇನ್ನೂ ಹಲವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿರುವ ಶಂ*ಕೆ ವ್ಯಕ್ತವಾಗಿದೆ. ಶೇ. 60ರಷ್ಟು ಕಟ್ಟಡದ ಅ*ವಶೇಷಗಳನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಟ್ಟಡದ ಮಾಲಕರಾದ ಪರ್ವಿಂದರ್ ಸಿಂಗ್ ಹಾಗೂ ಗಗನ್ ದೀಪ್ ಸಿಂಗ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಸ್ಥಳದಲ್ಲಿನ ಪರಿಸ್ಥಿತಿಯ ಮೇಲೆ ಫೋನ್ ಮೂಲಕ ನಿಗಾ ವಹಿಸಿದ್ದಾರೆ.
LATEST NEWS
ಮೆಲ್ಬೋರ್ನ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುಗಳ ಬರೆ !
Published
34 minutes agoon
22/12/2024By
NEWS DESK3ಮಂಗಳೂರು/ಮೆಲ್ಬೋರ್ನ್: ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಮೆಲ್ಬೋರ್ನ್ ನ ಎಂಸಿಜಿಯಲ್ಲಿ ಡಿ.26ರಂದು ಆರಂಭವಾಗಲಿದೆ. ಈಗಾಗಲೇ ಸರಣಿ 1-1ರಿಂದ ಸಮಬಲವಾಗಿದ್ದು, ಮುನ್ನಡೆಗಾಗಿ ಉಭಯ ತಂಡಗಳು ಸಿದ್ದತೆಯಲ್ಲಿದೆ.
ಆದರೆ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಅದುವೇ ಗಾಯಾಳುಗಳ ಸಮಸ್ಯೆ. ಭಾನುವಾರ ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಅಭ್ಯಾಸದ ವೇಳೆ ಹಿಟ್ ಮ್ಯಾನ್ ಗಾಯಗೊಂಡಿದ್ದು, ಹೀಗಾಗಿ ಅರ್ಧದಲ್ಲೇ ಪ್ರಾಕ್ಟೀಸ್ ನಿಲ್ಲಿಸಿದ್ದಾರೆ.
ಇದನ್ನೂ ಓದಿ: ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !
ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಥ್ರೋಡೌನ್ ಸ್ಪೆಷಲಿಸ್ಟ್ ದಯಾ ಅವರು ರೋಹಿತ್ ಶರ್ಮಾಗೆ ಚೆಂಡೆಸೆಯುತ್ತಿದ್ದರು. ಇದೇ ವೇಳೆ ಚೆಂಡು ಅವರ ಎಡ ಮೊಣಕಾಲಿಗೆ ತಾಗಿದೆ. ಇದರಿಂದ ನೋವಿಗೆ ಒಳಗಾದ ರೋಹಿತ್ ಶರ್ಮಾ ತಕ್ಷಣವೇ ಅಭ್ಯಾಸವನ್ನು ನಿಲ್ಲಿಸಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಫಿಸಿಯೋ ಆರೈಕೆ ಮಾಡಿದ್ದಾರೆ.
ಈ ಆರೈಕೆಯ ಹೊರತಾಗಿಯೂ ನೋವಿನ ಕಾರಣ ರೋಹಿತ್ ಶರ್ಮಾ ಅಭ್ಯಾಸವನ್ನು ಮುಂದುವರೆಸಲಿಲ್ಲ. ಅಲ್ಲದೆ ನಿಲ್ಲಲು ಕೂಡ ತಡಕಾಡಿದರು. ಹೀಗಾಗಿ ಭಾನುವಾರದ 2ನೇ ಅವಧಿಯ ಅಭ್ಯಾಸದಿಂದ ರೋಹಿತ್ ಶರ್ಮಾ ಹೊರಗುಳಿದರು. ಇದೀಗ ಹಿಟ್ ಮ್ಯಾನ್ ಗಾಯಗೊಂಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.
ಕೆ.ಎಲ್.ರಾಹುಲ್ ಗೆ ಗಾಯ
ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸದ ವೇಳೆ ಕೆ.ಎಲ್.ರಾಹುಲ್ ಅವರ ಕೈ ಬೆರಳಿಗೆ ಏಟು ಬಿದ್ದ ಘಟನೆ ಸಂಭವಿಸಿದೆ. ಕೂಡಲೇ ಚಿಕಿತ್ಸೆ ನೀಡಲಾಯಿತು.
ಇದೇನೂ ಗಂಭೀರ ಸ್ವರೂಪದ ಗಾಯವಲ್ಲ ಎನ್ನಲಾಗಿದೆಯಾದರೂ, ಮುಂದಿನ ನಿರ್ಣಾಯಕ ಪಂದ್ಯಕ್ಕೂ ಮುನ್ನ ಭಾರತೀಯ ತಂಡದಲ್ಲಿ ಗಾಯದ ಭೀತಿ ಎದುರಾಗಿದೆ.
LATEST NEWS
ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?
Published
1 hour agoon
22/12/2024By
NEWS DESK3ಮಂಗಳೂರು/ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸಂಪುಟದ ಸಚಿವರಿಗೆ ಶನಿವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಗೃಹ ಖಾತೆಯ ಜೊತೆಗೆ ಇಂಧನ, ಕಾನೂನು ಮತ್ತು ನ್ಯಾಯಾಂಗ, ಸಿಬ್ಬಂದಿ ಆಡಳಿತ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಖಾತೆಗಳನ್ನು ಸಿಎಂ ದೇವೇಂದ್ರ ಫಡ್ನವೀಸ್ ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.
ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ನಗರಾಭಿವೃದ್ದಿ, ವಸತಿ ಮತ್ತು ಲೋಕೋಪಯೋಗಿ ಖಾತೆಗಳು ಹಂಚಿಕೆಯಾಗಿದ್ದರೆ, ಮತ್ತೋರ್ವ ಉಪ ಮುಖ್ಯಮಂತ್ರಿ ಅಜಿತ್ ಪವರ್ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಅಬಕಾರಿ ಖಾತೆ ಹಂಚಿಕೆಯಾಗಿವೆ.
ಇದನ್ನೂ ಓದಿ: ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!
ಉಳಿದಂತೆ ಉದಯ್ ಸಾಮಂತ್ ಅವರಿಗೆ ಕೈಗಾರಿಕೆ, ಪಂಕಜಾ ಮುಂಡೆ ಅವರಿಗೆ ಪರಿಸರ, ಮಾಣಿಕ್ರಾವ್ ಕೊಕಾಟೆ ಅವರಿಗೆ ಕೃಷಿ ಖಾತೆಗಳನ್ನು ನೀಡಲಾಗಿದೆ. ಧನಂಜಯ್ ಮುಂಡೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಅಶೋಕ್ ಅವರಿಗೆ ಬುಡಕಟ್ಟು ಅಭಿವೃದ್ದಿ, ಆಶಿಶ್ ಶೆಲಾರ್ ಅವರಿಗೆ ಐಟಿ ಮತ್ತು ಸಂಸ್ಕೃತಿ ಇಲಾಖೆಯ ಉಸ್ತುವಾರಿ ವಹಿಸಲಾಗಿದೆ.
ಇನ್ನೂ ಬಿಜೆಪಿಯ ಚಂದ್ರಶೇಖರ್ ಬಾವಂಕುಲೆಗೆ ಕಂದಾಯ, ಶಿವಸೇನೆಯ ದಾದಾಜಿ ಭುಸೆಗೆ ಶಾಲಾ ಶಿಕ್ಷಣ ಖಾತೆ ನೀಡಲಾಗಿದೆ. ಜಲಸಂಪನ್ಮೂಲ ಖಾತೆಯನ್ನು ಬಿಜೆಪಿಯ ಇಬ್ಬರು ಸಚಿವರುಗಳಾದ ರಾಧಾಕೃಷ್ಣ ವಿಖೆ ಪಾಟೇಲ್ ಮತ್ತು ಗಿರೀಶ್ ಮಹಾಜನ್ ನಡುವೆ ಹಂಚಿಕೆ ಮಾಡಲಾಗಿದೆ.
ಡಿಸೆಂಬರ್ 5ರಂದು ಫಡ್ನವೀಸ್, ಏಕನಾಥ ಶಿಂಧೆ, ಅಜಿತ್ ಪವರ್ ಸಿಎಂ, ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಡಿಸೆಂಬರ್ 15 ರಂದು 39 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
LATEST NEWS
ಬಾಂಗ್ಲಾ ಹಿಂದೂಗಳ ಮೇಲೆ ದಾ*ಳಿ ; ಭಾರತೀಯರ ಮುಗಿಸಲು ಉ*ಗ್ರರ ಸಂಚು!
ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ
ಅರೆಸ್ಟ್ ವಾರೆಂಟ್ ಬೆನ್ನಲ್ಲೇ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ ಸ್ಪಷ್ಟನೆ !
ಬಾರತೀಯ ಕಾರ್ಮಿಕರೊಂದಿಗೆ ಕುವೈತ್ನಲ್ಲಿ ಮೋದಿ ಸಂವಾದ
ತೆಲಂಗಾಣ ಸರ್ಕಾರದಿಂದ ಟಾಲಿವುಡ್‌ಗೆ ಭಾರೀ ದೊಡ್ಡ ಹೊಡೆತ !!
ಕ್ರಿಸ್ಮಸ್ ಸ್ಪೆಷಲ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ
Trending
- BIG BOSS6 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
- DAKSHINA KANNADA7 days ago
ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ಅವಿರೋಧವಾಗಿ ಆಯ್ಕೆ
- BIG BOSS7 days ago
ದಿಢೀರ್ ನಿರ್ಧಾರ ಕೈಗೊಂಡ ಗೋಲ್ಡ್ ಸುರೇಶ್; ಕಿಚ್ಚ ಸುದೀಪ್ ಶಾಕ್ !
- LATEST NEWS4 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್