ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ನೇತೃತ್ವದ ತಂಡವನ್ನು ರಚಿಸಲಾಗಿದೆ.
ತುಳು ಭಾಷೆಯನ್ನು ರಾಜ್ಯದಲ್ಲಿ ಅಧಿಕೃತ ಭಾಷೆಯಾಗಿ ಘೋಷಿಸುವುದಕ್ಕೂ ಮುನ್ನ ತಜ್ಞರ ಸಮಿತಿ ರಚಿಸಿ ವರದಿ ನೀಡುವಂತೆ ಸರಕಾರವು ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.
ತಂಡವು ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಲಿದೆ.
ಅಧ್ಯಕ್ಷರು: ಡಾ. ಎಂ. ಮೋಹನ್ ಆಳ್ವ, ಸದಸ್ಯರು: ಕೇಶವ ಬಂಗೇರ, ಡಾ. ಮಾಧವ ಕೊಣಾಜೆ, ಗಣೇಶ್ ಅಮೀನ್ ಸಂಕಮಾರ್, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಶುಭವಾಗಲಿ
We hope for the best