Connect with us

    LATEST NEWS

    ಗಲಭೆಕೋರರಿಂದ ನಷ್ಟ ವಸೂಲಿಗೆ ನಿರ್ಧಾರಕ್ಕೆ ತಿಲಾಂಜಲಿ…!!

    Published

    on

    ಬೆಂಗಳೂರು : ಮಂಗಳವಾರ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿ 146 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿರುವ ಇರುವ ಮಾರ್ಗಸೂಚಿಯಂತೆ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ಆಯೋಗ ತಿಳಿಸಿದೆ. ಅದರಂತೆ ಮುಂದುವರಿಯುತ್ತೇವೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.ಹಾಗೆಯೇ, ಗಲಭೆಕೋರರಿಂದ ನಷ್ಟಭರಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುತ್ತದೆಂಬ ಸುದ್ದಿಗೂ ತೆರೆಬಿದ್ದಿದೆ.

    ಉತ್ತರ ಪ್ರದೇಶದಲ್ಲಿ ಸಂಭವಿಸಿದ್ದ ಗಲಭೆಗಳಿಂದ ಆದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗಿತ್ತು. ಅದರಂತೆಯೇ ರಾಜ್ಯದಲ್ಲೂ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದರು. ಆದರೆ, ಮುಖ್ಯಮಂತ್ರಿಗಳನ್ನ ಭೇಟಿಯಾದ ಬಳಿಕ ಆ ನಿರ್ಧಾರಕ್ಕೆ ತಿಲಾಂಜಲಿ ಹೇಳಲಾಗಿದೆ. ಮಾನವ ಹಕ್ಕು ಆಯೋಗದ ಮಾರ್ಗಸೂಚಿಯಂತೆ ಮಾತ್ರ ನಡೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ.

    ಕಳೆದ ರಾತ್ರಿ ನಡೆದ ಹಿಂಸಾಚಾರಕ್ಕೆ ಕಾರಣವಾದ ‘ಅವಹೇಳನಕಾರಿ’ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯನನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಅವಹೇಳನಕಾರಿ ಪೋಸ್ಟ್ ಹಂಚಿಕೊಂಡದ್ದಕ್ಕಾಗಿ ಆರೋಪಿ ನವೀನ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಸಕರ ಸೋದರಳಿಯ ನವೀನ್ ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿದ ನಂತರ ಮೂರ್ತಿ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ಬಾಲಕಿಯರಿಬ್ಬರ ಮೇಲೆ ಅ*ತ್ಯಾಚಾ*ರವೆಸಗಿ ಬ್ಲ್ಯಾ*ಕ್‌ಮೇಲ್ ಮಾಡಿದ ಗ್ಯಾಂಗ್ ಅರೆಸ್ಟ್

    Published

    on

    ಮಂಗಳೂರು/ಬೆಳಗಾವಿ: ಮೂವರು ಸೇರಿಕೊಂಡು ಬಾಲಕಿಯರಿಬ್ಬರ ಮೇಲೆ ಗ್ಯಾಂ*ಗ್ ರೇ*ಪ್ ಮಾಡಿದ ಘಟನೆ ಬೆಳಗಾವಿಯ ರಾಯಭಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ನಡೆದಿದೆ.

    ಆರೋಪಿಗಳಾದ ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಎಂಬುವವರನ್ನು ಬಂಧಿಸಲಾಗಿದೆ.

    ಪ್ರಕರಣ ಸಂಬಂಧ ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, “ಆರೋಪಿ ಅಭಿಷೇಕ್ ಇನ್‌ಸ್ಟಾಗ್ರಾಂ ಮೂಲಕ ಓರ್ವ ಬಾಲಕಿಗೆ ಪರಿಚಯವಾಗಿದ್ದಾನೆ. ಸವದತ್ತಿಗೆ ಹೋಗುತ್ತಿದ್ದೇನೆ ನೀನು ಬಾ ಎಂದು ಬಾಲಕಿಗೆ ಪುಸಲಾಯಿಸಿದ್ದಾನೆ. ಈತನ ಮಾತು ನಂಬಿ, ನೊಂದ ಬಾಲಕಿ ತನ್ನ ಸ್ನೇಹಿತೆಯನ್ನ ಕರೆದುಕೊಂಡು, ಇಬ್ಬರೂ ಒಟ್ಟಾಗಿ ಹಾರೂಗೇರಿ ಬಸ್ ನಿಲ್ದಾಣದಕ್ಕೆ ಹೋಗಿದ್ದಾರೆ. ಅಲ್ಲಿಂದ ಅಭಿಷೇಕ್ ಬಾಲಕಿಯರನ್ನು ಎರ್ಟಿಗಾ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಎರ್ಟಿಗಾ ಕಾರಿನಲ್ಲಿ ಮೂರೂ ಜನ ಆರೋಪಿಗಳಿದ್ದರು. ಸಂತ್ರಸ್ತ ಬಾಲಕಿಯರನ್ನು ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಜನವರಿ 3ರಂದು ಮಧ್ಯಾಹ್ನದ ವೇಳೆಗೆ ಗುಡ್ಡದಲ್ಲಿ ಬಾಲಕಿಯರ ಮೇಲೆ ಅ*ತ್ಯಾಚಾರವೆಸಗಿದ್ದಾರೆ” ಎಂದು ತಿಳಿಸಿದರು.

    ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಆರೋಪಿಗಳು ‘ಮುಂದಿನ ವಾರ ಗೋವಾಕ್ಕೆ ಬರಬೇಕು. ಇಲ್ಲವಾದಲ್ಲಿ ವಿಡಿಯೋ ಪಬ್ಲಿಶ್ ಮಾಡುತ್ತೇವೆ. ದೂರು ಕೊಟ್ಟರೆ ಕೊ*ಲೆ ಮಾಡುತ್ತೇವೆ’ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಬಾಲಕಿಯರು ಮನೆಯಲ್ಲಿ ಈ ವಿಚಾರ ತಿಳಿಸಿದ್ದಾರೆ. ಬಳಿಕ, ಸಂತ್ರಸ್ತ ಬಾಲಕಿ ತಮ್ಮ ಸೋದರ ಸಂಬಂಧಿ ಜೊತೆಗೆ ಬಂದು ಜನವರಿ 13ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಕೊಟ್ಟ 24 ಗಂಟೆಯೊಳಗೆ ಇಬ್ಬರು ಆರೋಪಿಯನ್ನ ಬಂಧಿಸಲಾಗಿದೆ. ನಂತರ, ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. “ಆರೋಪಿಗಳ ಹಿನ್ನಲೆಯನ್ನು ಪರಿಶೀಲನೆ ಮಾಡುತ್ತೇವೆ. ಇನ್‌ಸ್ಟಾಗ್ರಾಂನಲ್ಲಿ ಹುಡಗಿ ಹಾಕಿದ್ದ ರೀಲ್ಸ್ ಪಾಲೋ ಮಾಡುತ್ತಿದ್ದ. ಅವರ ಮೊಬೈಲ್​ಗಳನ್ನು ಜಪ್ತಿ ಮಾಡಿದ್ದು ಅದರಲ್ಲಿ ವಿಡಿಯೋಗಳು ಸಿಕ್ಕಿವೆ. ಗ್ಯಾಂಗ್ ರೇಪ್ ಪ್ರಕರಣ ಅಂತ ಕೇಸ್​ ದಾಖಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.

    Continue Reading

    BIG BOSS

    ಫಿನಾಲೆಗೆ ಡೇಟ್‌ ಫಿಕ್ಸ್; ಈ ಸಲ ಬಿಗ್ ಬಾಸ್ ಗೆಲ್ಲುವವರು ಯಾರು ?

    Published

    on

    ಮಂಗಳೂರು/ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 11’ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಇದೇ ವೇಳೆ ಯಾರು ಫಿನಾಲೆ ತಲುಪಬಹುದು ಎನ್ನುವ ಲೆಕ್ಕಾಚಾರ ಸೋಷಿಯಲ್ ಮಿಡಿಯಾದಲ್ಲಿ ಶುರುವಾಗಿದೆ.

    ಕನ್ನಡ ಬಿಗ್ ಬಾಸ್ 11ರ ಆರಂಭದಿಂದಲೇ ಹೊಸ ಹೊಸ ಮಾದರಿಯನ್ನು ವಿಕ್ಷಕರಿಗೆ ಪರಿಚಯಿಸಿದ್ದು, ಫಿನಾಲೆ ಕೂಡ ಹೊಸತನಕ್ಕೆ ನಾಂದಿ ಆಡಲಿದೆ.

    ಮೂಲಗಳ ಪ್ರಕಾರ ಬಿಗ್ ಬಾಸ್ ಸೀಸನ್ 11 ಫಿನಾಲೆಗೆ ಭರ್ಜರಿ ಪ್ಲಾನ್ ಮಾಡಲಾಗಿದೆ. ಜನವರಿ 25 ಹಾಗೂ 26ರಂದು ಬಿಗ್ ಬಾಸ್ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ.

    ಜನವರಿ 25ರ ಶನಿವಾರ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಹೊಸ ಟ್ವಿಸ್ಟ್ ಕೊಟ್ರೆ, ಜನವರಿ 26ರ ಬಿಗ್ ಬಾಸ್ ಸೀಸನ್ ಕಪ್ ಎತ್ತುವವರು ಯಾರು ಅನ್ನೋದು ಗೊತ್ತಾಗಲಿದೆ.

    ಸದ್ಯ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ ಬಿಗ್ ಬಾಸ್ ಟಾಪ್ 5 ಸ್ಪರ್ಧಿಗಳಲ್ಲಿ ತ್ರಿವಿಕ್ರಮ್, ಧನರಾಜ್, ಹನುಮಂತ, ಮಂಜು, ಭವ್ಯ ಇರುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಇದರಿಂದ ಈ ವಾರದ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಮೋಕ್ಷಿತಾ, ಗೌತಮಿ ಇಲ್ಲವಾದರೇ ರಜತ್ ಹೊರಹೋಗಬಹುದು ಎನ್ನಲಾಗಿದೆ.

    ಇದನ್ನೂ ಓದಿ: ಧನರಾಜ್ ಗೆ ಒಲಿದ ಅದೃಷ್ಟ; ಭವ್ಯಾಗೆ ಆಘಾತ !

    ಅಂತಿಮವಾಗಿ ಈ ಶನಿವಾರ ಕಿಚ್ಚ ಸುದೀಪ್ ಅವರು ಕೊನೇ ವಾರದ ಪಂಚಾಯ್ತಿಯಲ್ಲಿ ಒಬ್ಬರಿಗೆ ಬಿಗ್ ಶಾಕ್ ಕೊಡಲಿದ್ದಾರೆ. ಉಳಿದ 6 ಸ್ಪರ್ಧಿಗಳಲ್ಲಿ ಬಿಗ್ ಬಾಸ್ ಫಿನಾಲೆ ಟಿಕೆಟ್ ಗಾಗಿ ಟಾಸ್ಕ್ ನಡೆಯಲಿದೆ. ಇದರಲ್ಲಿ ಒಬ್ಬರು ಎಲಿಮಿನೇಟ್ ಆಗುತ್ತಾರೆ. ಅಂತಿಮವಾಗಿ ಟಾಪ್ 5 ಸ್ಪರ್ಧಿಗಳು ಫಿನಾಲೆ ತಲುಪಲಿದ್ದಾರೆ.

    ಬಿಗ್ ಬಾಸ್ ವಿನ್ನರ್ ಯಾರು?
    ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಯಾರೆಂದು ಈಗಗಾಲೇ, ಬಿಗ್ ಬಾಸ್ ವೀಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಕಳೆದ ವಾರ ಬಿಗ್ ಬಾಸ್ ನೀಡಿದ ಟಿಕೆಟ್ ಟು ಫಿನಾಲೆ ಟಾಸ್ಕ್ ನಲ್ಲಿ ಹನುಮಂತ ಭರ್ಜರಿಯಾಗಿ ಆಟವಾಡಿ ಮೊದಲ ಫೈನಲಿಸ್ಟ್ ಆದರು. ಆ ಪ್ರಕಾರ ಸೋಷಿಯಲ್ ಮೀಡಿಯಾದಲ್ಲಿ ಈ ಬಾರಿ ಬಿಗ್ ಬಾಸ್ ವಿನ್ನರ್ ಹನುಮಂತ ಎಂದು ಚರ್ಚೆಯಾಗುತ್ತಿದೆ..

    ಆದರೆ, ವೈಲ್ಡ್ ಕಾರ್ಡ್ ಎಂಟ್ರಿ ಆದವರು ವಿನ್ನರ್ ಆಗುವುದಿಲ್ಲ ಎನ್ನುವುದು ಇನ್ನೂ ಕೆಲವರ ವಾದ. ಅಂತಿಮವಾಗಿ ಫೈನಲ್ ನಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎಂದು ಕಾದು ನೋಡಬೇಕಿದೆ.

    Continue Reading

    LATEST NEWS

    ಗೆಳತಿಯ ಖಾ*ಸಗಿ ಫೊಟೋ, ವಿಡಿಯೋ ಶೇರ್ ಮಾಡಿ ಆ*ತ್ಮಹ*ತ್ಯೆಗೆ ಶರಣಾದ ಯುವಕ

    Published

    on

    ಮಂಗಳೂರು/ಹುಬ್ಬಳ್ಳಿ: ಯುವಕನೋರ್ವ ಪ್ರೇಯಸಿಯ ಕಾಟದಿಂದ ಬೇಸತ್ತು ಆ*ತ್ಮಹ*ತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ.

    ಸಂದೇಶ್ ಉಣಕಲ್‌ (27) ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶನಿವಾರ ಮನೆಯಿಂದ ನಾ*ಪತ್ತೆಯಾಗಿದ್ದ ಸಂದೇಶ, ಉಣಕಲ್ ಕೆರೆಗೆ ಬಿ*ದ್ದು ಆ*ತ್ಮಹ*ತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮುನ್ನ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಮಾಡಿ ‘ನನ್ನ ಸಾ*ವಿಗೆ ಸಂಜನಾ(ಪ್ರೇಯಸಿ) ಕಾರಣ’ ಎಂದು ತಿಳಿಸಿದ್ದಾನೆ.

    ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ ಸಂದೇಶ್ ಏಕಾಏಕಿ ಶನಿವಾರ ಮನೆಯಿಂದ ನಾ*ಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು, ಆದರೆ ಇದೀಗ ಸಂದೇಶ ಶ*ವವಾಗಿ ಪ*ತ್ತೆಯಾಗಿದ್ದಾನೆ. ಆ*ತ್ಮಹ*ತ್ಯೆಗೂ ಮುನ್ನ ತನ್ನ ಪ್ರೇಯಸಿಯ ಜೊತೆಗಿನ ಖಾ*ಸಗಿ ವಿಡಿಯೋ, ವಾಟ್ಸಪ್ ಚಾಟ್, ಸಂಭಾಷಣೆ ಮತ್ತು ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ. ಇನ್ನು ಮಗನನ್ನು ಕ*ಳೆದುಕೊಂಡ ತಾಯಿಯ ಕೂಗು ಮುಗಿಲು ಮುಟ್ಟಿದೆ.

    ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಈ ಘಟನೆ ಕುರಿತು ಪ್ರಕರಣ ದಾಖಲಾಗಿದೆ, ಏಕಾಏಕಿ ಸಂದೇಶ್ ಆ*ತ್ಮಹ*ತ್ಯೆ ಮಾಡಿಕೊಂಡ ಹಿಂದಿನ ನಿಜವದ ಕಾರಣ ತಿಳಿದಿಲ್ಲ. ಈ ಕುರಿತು ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸ್‌ ತನಿಖೆಯಲ್ಲಿ ಸಾವಿಗೆ ಕಾರಣ ತಿಳಿದು ಬರಬೇಕಷ್ಟೇ.

    Continue Reading

    LATEST NEWS

    Trending