Connect with us

    DAKSHINA KANNADA

    70ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ರಾಜ್ಯ ಮಟ್ಟದ ಸಂಭ್ರಮ

    Published

    on

    ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಂಯುಕ್ತ ಆಶ್ರಯದಲ್ಲಿ ವಿವಿಧ ಸಹಕಾರಿ ಯೂನಿಯನ್‌ ಗಳ ಸಹಯೋಗದೊಂದಿಗೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮ ಇಂದು ಮಂಗಳೂರಿನ ಉರ್ವ ಕ್ರಿಕೆಟ್‌ ಮೈದಾನದಲ್ಲಿ ನಡೆಯಿತು.

    ಕೊಡಿಯಾಲ್‌ಬೈಲಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಉರ್ವ ಕ್ರಿಕೆಟ್‌ ಮೈದಾನದವರಿಗೆ ಸಹಕಾರ ಜಾಥಾ ನಡೆಯಿತು. ಅದಕ್ಕೂ ಮುನ್ನ ಸಹಕಾರಿ ಧ್ವಜಾರೋಹಣವನ್ನು ಶಾಸಕ ಜಿ. ಟಿ. ದೇವೇಗೌಡ ನೆರವೇರಿಸಿ ಸಹಕಾರ ಜಾಥಾಕ್ಕೆ ಚಾಲನೆ ನೀಡಿದರು. ಉರ್ವ ಕ್ರಿಕೆಟ್‌ ಮೈದಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು.
    ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಚ ಡಾ ಎಂ ಎನ್‌ ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ರಾಜ್ಯದ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು, ಜಾತ್ಯತೀತವಾಗಿ, ಪಕ್ಷಾತೀತವಾಗಿ, ನಾವು ಜನರ ಅಗತ್ಯತೆಗಳಿಗೆ ಸ್ಪಂದಿಸಿದರೆ ಸಹಕಾರ ಕ್ಷೇತ್ರಕ್ಕೆ ಗೌರವ ಬರುತ್ತದೆ. ಹಣ ಮತ್ತು ಜಾತಿ ನೋಡದೆ ಕೆಲಸ ಮಾಡಿದವ ನಾನು. ಸಹಕಾರಿಗಳ ಯೋಗಕ್ಷೇಮ ನೋಡಿಕೊಳ್ಳಲು ನಾವು ತಯಾರಿದ್ಧೇವೆ. ಸಹಕಾರಿ ಆಂದೋಲನವನ್ನು ನಾವು ಇನ್ನಷ್ಟು ಬಲ ಪಡಿಸ ಬೇಕಾಗಿದೆ. ಈ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸಬಹುದು ಎಂದು ಹೇಳಿದರು.

    ರಾಜ್ಯ ವಿಧಾನ ಸಭೆಯ ಅಧ್ಯಕ್ಷ ಯು ಟಿ ಖಾದರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಯಾವುದೇ ಜವಾಬ್ದಾರಿಯನ್ನು ವಹಿಸಿದಾಗ ಅದನ್ನು ಇಲ್ಲಿನವರು ಪ್ರಾಮಾಣಿಕವಾಗಿ ನಿರ್ವಹಿಸುತ್ತಾರೆ. ಗ್ರಾಮೀಣ ಮಟ್ಟದಲ್ಲಿ ಹತ್ತು ಜನ ಸಹಕಾರಿಗಳು ಸೇರಿ ಜನರಿಗೆ ಬೇಕಾದ ಕಾರ್ಯಕ್ರಮ ಹಮ್ಮಿಕೊಂಡರೆ ಸಹಕಾರಿ ಕ್ಷೇತ್ರ ಬೆಳೆಯಲು ಸಾಧ್ಯವಿದೆ. ವಾಣಿಜ್ಯ ಬ್ಯಾಂಕುಗಳು ಜನರ ಕಿಸೆ ನೋಡಿ ಸಾಲ ಕೊಡುತ್ತವೆ. ಜನರ ಮುಖ ನೋಡಿ ಸಾಲ ಕೊಡುವ ಬ್ಯಾಂಕುಗಳಿದ್ದರೆ ಅವು ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಮಾತ್ರ ಎಂದು ಹೇಳಿದರು.

    ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ ಭಾರತದಲ್ಲಿ ಸಹಕಾರಿ ಚಳವಳಿ ಆರಂಭವಾಗಿ 100 ವರ್ಷ ದಾಟಿದ್ದು, ದೇಶದ ಆರ್ಥಿಕ ಚಟುವಟಿಕೆಗೆ ಮಹತ್ವದ ಕೊಡುಗೆ ನೀಡಿದೆ. ಇಂದು ಜಗತ್ತಿನಲ್ಲಿ ಭಾರತವು ಆರ್ಥಿಕತೆಯಲ್ಲಿ 5 ರಿಂದ 3 ನೇ ಸ್ಥಾನಕ್ಕೆ ಬಂದಿದ್ದರೆ ಅದಕ್ಕೆ ಮುಖ್ಯ ಕಾರಣ ಸಹಕಾರಿ ರಂಗ. ದಕ್ಷಿಣ ಕನ್ನಡದಲ್ಲಿ ಮೊಳಹಳ್ಳಿ ಶಿವರಾವ್‌ ಅವರಿಂದ ಆರಂಭವಾದ ಸಹಕಾರಿ ಚಳವಳಿ ಪ್ರಸ್ತುತ ಎಂ ಎನ್ ರಾಜೇಂದ್ರ ಕುಮಾರ್‌ ಅವರ ಅವಧಿಯಲ್ಲಿ ಉಚ್ಛ್ರಾಯ ಸ್ಥಿತಿಗೇರಿದೆ. ಸಹಕಾರಿ ರಂಗವು ರೈತರನ್ನು ಸಬಲೀಕರಣ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದರೆ ಅದಕ್ಕೆ ಮುಖ್ಯ ಕಾರಣ ಸಹಕಾರಿ ಚಳವಳಿ ಎಂದರು.

    ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಮಾತನಾಡಿ ಸಹಕಾರಿ ಕ್ಷೇತ್ರದಿಂದ ಮಾತ್ರ ಅಭಿವೃದ್ದಿ ಸಾಧ್ಯ ಎಂದು ಮನಗಂಡು ಕೇಂದ್ರ ಸರಕಾರ ಸಹಕಾರಿ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ಅನುದಾನವನ್ನು ನೀಡಿದೆ. ಇದಕ್ಕಾಗಿ ಕೇಂದ್ರದ ಸಹಕಾರ ಸಚಿವ ಅಮಿತ್‌ ಶಾ ಅವರನ್ನು ಅಭಿನಂದಿಸುತ್ತೇನೆ. 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿಗಳನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.

    ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷ ಜಿ ಟಿ ದೇವೇಗೌಡ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂ ಎನ್ ರಾಜೇಂದ್ರ ಕುಮಾರ್‌ ನೇತೃತ್ವದಲ್ಲಿ ಸಹಕಾರಿ ಕ್ಷೇತ್ರ ಕಲ್ಪ ವೃಕ್ಷವಾಗಿ ಬೆಳೆಯುತ್ತಿದೆ. ದಕ್ಷಿಣ ಕನ್ನಡ ಸಹಕಾರಿ ರಂಗದ ಬೆಳವಣಿಗೆ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

    ಉಡುಪಿ ಶಾಸಕ ಯಶಪಾಲ್ ಎ ಸುವರ್ಣ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಸಚಿವ ಅಭಯಚಂದ್ರ ಜೈನ್, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ ಪಿ ಸುಚರಿತ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಮಹಾ ಮಂಡಲ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ನವೀನ್, ಮಾರಾಟ ಮಹಾ ಮಂಡಲದ ವ್ಯವಸ್ಥಾಪಕ ನಿರ್ದೇಶಕ ಆರ್ ಶ್ರೀಧರ್, ಅಡಿಶನಲ್‌ ರಿಜಿಸ್ಟ್ರಾರ್ ಲಿಂಗಾರಾಜು, ಸ್ಕ್ಯಾಡ್ಸ್ ನ ರವೀಂದ್ರ ಕಂಬಳಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ ಮತ್ತು ಎಲ್ಲಾ ನಿರ್ದೇಶಕರು, ಉದ್ಯನಿ ರೋಹನ್‌ ಮೊಂತೇರೊ ಮತ್ತಿತರರು ಉಪಸ್ಥಿತರಿದ್ದರು.

    ಸಮಾರಂಭದಲ್ಲಿ ನಂದಿನಿಯ ಹೊಸ ಉತ್ಪನ್ನಗಳನ್ನು ಮತ್ತು ಕರಾವಳಿ ಸಹಕಾರಿ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅತ್ಯುತ್ತಮ ಸಹಕಾರಿ ಸಂಘಗಳನ್ನು ಹಾಗೂ ನವೋದಯ ಸ್ವಸಸಾಯ ಸಂಘಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಭಯ ಜಿಲ್ಲೆಗಳ ಸಹಕಾರಿಗಳು ಭಾಗವಹಿಸಿದ್ದರು. ಸಹಕಾರ ಸಚಿವನ್ನು ಶಾಲು ಹೊದಿಸಿ, ಸ್ಮರಣಿಕೆ , ಫಲಪುಷ್ಪ , ಸ್ಮರಣಿಗೆ ನೀಡಿ ಗೌರವಿಸಲಾಯಿತು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    DAKSHINA KANNADA

    ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ

    Published

    on

    ಮಂಗಳೂರು/ಮಸ್ಕತ್  : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು  ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.

    ಈ ಸಂದರ್ಭ  ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

    ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :

    ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ  ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.

    Continue Reading

    DAKSHINA KANNADA

    ‘ಕಾಂತಾರ ಚಾಪ್ಟರ್ – 1’ ಗೆ ವಿ*ಘ್ನ; ಬಸ್ ಪ*ಲ್ಟಿಯಾಗಿ 6 ಮಂದಿ ಗಂ*ಭೀರ !

    Published

    on

    ಉಡುಪಿ : ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಪ*ಲ್ಟಿಯಾಗಿದ್ದು, ಆರು ಮಂದಿ ಗಂ*ಭೀರ ಗಾ*ಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ನಡೆದಿದೆ.

    ಕರಾವಳಿ ಭಾಗದ ಬೇರೆ ಬೇರೆ ಕಡೆಗಳಲ್ಲಿ ‘ಕಾಂತಾರ ಚಾಪ್ಟರ್​ 1’ ಸಿನಿಮಾಗೆ ಶೂಟಿಂಗ್ ಮಾಡಲಾಗುತ್ತಿದೆ. ವಿವಿಧ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕಲಾವಿದರು ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಅ*ಪಘಾತ ಸಂಭವಿಸಿದೆ. ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್​ ಆಗಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾ ಮೂಡಿಬರುತ್ತಿದೆ. ಬಸ್​ ಪ*ಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ.

    ಪಲ್ಟಿಯಾದ ಹಿನ್ನಲೆ ಚಾಲಕನ ಮೇಲೆ ಹಲ್ಲೆಗೆ ವಾಹನದಲ್ಲಿದ್ದ ಹುಡುಗರು ಮುಂದಾಗಿದ್ದಾರೆ . ಬಸ್ ನಲ್ಲಿ ಹುಡುಗರು ವಾಹನ ಚಾಲಕ ನಿರ್ಲಕ್ಷದಿಂದ ವಾಹನ ಚಲಾಯಿಸಿದ್ದಾನೆ ಎಂದು ಆರೋಪಿಸಿ ಹ*ಲ್ಲೆ ನಡೆಸಿದ್ದಾರೆ. ಲೋಕಲ್ ಚಾಲಕನ ಮೇಲೆ ಹ*ಲ್ಲೆಯಾದ ಹಿನ್ನೆಲೆ ಸ್ಥಳೀಯರ ಅಕ್ರೋಶ, ರಿಷಬ್ ಶೆಟ್ಟಿ ಮಧ್ಯವರ್ತಿಯಲ್ಲಿ ಸಂಧಾನ ನಡೆದಿದ್ದು, ಎಲ್ಲರಿಗೂ ಕರೆದು ಮಾತನಾಡುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

    ಕಾಂತಾರ ಚಿತ್ರವು ದೈವ ಹಾಗೂ ದೈವಾರಾಧನೆಗೆ ಸಂಬಂಧಿಸಿದ ಕಥಾ ಹಂದರವನ್ನುಹೊಂದಿದ್ದು, ಈ ಚಿತ್ರ ಬಿಡುಗಡೆಗೊಂಡು ಬಹಳಷ್ಟು ಮೆಚ್ಚುಗೆಯನ್ನು ಗಳಿಸಿತ್ತು. ಚಿತ್ರ ಬಿಡುಗಡೆಗೊಂಡ ಬಳಿಕ ಹಲವುಕಡೆ ದೈವದ ವೇಷವನ್ನುಅಸಭ್ಯವಾಗಿ ತೊಟ್ಟು ಅಭಿಮಾನಿಗಳು ನರ್ತಿಸಿ ದೈವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ದೈವಾರಾಧಕರು ಚಿತ್ರದ ವಿರುದ್ಧ ಅಸಮಧಾನ ಹೊಂದಿದ್ದಾರೆ.

    ಕಾಂತಾರ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ – 1’ ಮಾಡುವುದಾಗಿ ಘೋಷಿಸಿದ ಬಳಿಕ ತುಳುನಾಡಿನ್ಲಿ ತೀವ್ರ ಆಕ್ರೋಷ ಕೇಳಿ ಬಂದಿತ್ತು. ಚಿತ್ರತಂಡವು ಚಿತ್ರೀಕರಣ ನಡೆಸುವ ಈ ಸಂದರ್ಭ ಹಲವು ವಿಘ್ನಗಳು ಎದುರಾಗುತ್ತಿದ್ದು, ಇದು ದೈವದ ಕೋಪವೋ, ಇಲ್ಲ ದೈವನರ್ತಕರ ಶಾಪವಿರಬೇಕು ಎಂಬ ಗುಮನಿಗಳು ಶುರುವಾಗಿದೆ.

    ಚಿತ್ರೀಕರಣ ಮುಗಿಸಿ ತೆರಳುವಾಗ ಕೊಲ್ಲೂರು ಮಾರ್ಗದಲ್ಲಿ ಈ ದು*ರ್ಘಟನೆ ಸಂಭವಿಸಿದ್ದು, ಬಸ್‌ನಲ್ಲಿ 25 ಕಲಾವಿದರಿದ್ದರು. ಹಲವರು ಸಣ್ನ ಪುಟ್ಟ ಗಾ*ಯಗಳಿಂದ ಪಾರಾಗಿದ್ದರೆ, ಆರು ಜನರಿಗೆ ಗಂಭೀರ ಗಾ*ಯವಾಗಿದೆ. ಗಾಯಾಳುಗಳನ್ನು ಕುಂದಾಪುರ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು.  ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Continue Reading

    LATEST NEWS

    Trending