DAKSHINA KANNADA
70ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ರಾಜ್ಯ ಮಟ್ಟದ ಸಂಭ್ರಮ
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಂಯುಕ್ತ ಆಶ್ರಯದಲ್ಲಿ ವಿವಿಧ ಸಹಕಾರಿ ಯೂನಿಯನ್ ಗಳ ಸಹಯೋಗದೊಂದಿಗೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮ ಇಂದು ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ ನಡೆಯಿತು.
ಕೊಡಿಯಾಲ್‌ಬೈಲಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆವರಣದಿಂದ ಉರ್ವ ಕ್ರಿಕೆಟ್ ಮೈದಾನದವರಿಗೆ ಸಹಕಾರ ಜಾಥಾ ನಡೆಯಿತು. ಅದಕ್ಕೂ ಮುನ್ನ ಸಹಕಾರಿ ಧ್ವಜಾರೋಹಣವನ್ನು ಶಾಸಕ ಜಿ. ಟಿ. ದೇವೇಗೌಡ ನೆರವೇರಿಸಿ ಸಹಕಾರ ಜಾಥಾಕ್ಕೆ ಚಾಲನೆ ನೀಡಿದರು. ಉರ್ವ ಕ್ರಿಕೆಟ್ ಮೈದಾನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಚ ಡಾ ಎಂ ಎನ್ ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ರಾಜ್ಯದ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಜಾತ್ಯತೀತವಾಗಿ, ಪಕ್ಷಾತೀತವಾಗಿ, ನಾವು ಜನರ ಅಗತ್ಯತೆಗಳಿಗೆ ಸ್ಪಂದಿಸಿದರೆ ಸಹಕಾರ ಕ್ಷೇತ್ರಕ್ಕೆ ಗೌರವ ಬರುತ್ತದೆ. ಹಣ ಮತ್ತು ಜಾತಿ ನೋಡದೆ ಕೆಲಸ ಮಾಡಿದವ ನಾನು. ಸಹಕಾರಿಗಳ ಯೋಗಕ್ಷೇಮ ನೋಡಿಕೊಳ್ಳಲು ನಾವು ತಯಾರಿದ್ಧೇವೆ. ಸಹಕಾರಿ ಆಂದೋಲನವನ್ನು ನಾವು ಇನ್ನಷ್ಟು ಬಲ ಪಡಿಸ ಬೇಕಾಗಿದೆ. ಈ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸಬಹುದು ಎಂದು ಹೇಳಿದರು.
ರಾಜ್ಯ ವಿಧಾನ ಸಭೆಯ ಅಧ್ಯಕ್ಷ ಯು ಟಿ ಖಾದರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಯಾವುದೇ ಜವಾಬ್ದಾರಿಯನ್ನು ವಹಿಸಿದಾಗ ಅದನ್ನು ಇಲ್ಲಿನವರು ಪ್ರಾಮಾಣಿಕವಾಗಿ ನಿರ್ವಹಿಸುತ್ತಾರೆ. ಗ್ರಾಮೀಣ ಮಟ್ಟದಲ್ಲಿ ಹತ್ತು ಜನ ಸಹಕಾರಿಗಳು ಸೇರಿ ಜನರಿಗೆ ಬೇಕಾದ ಕಾರ್ಯಕ್ರಮ ಹಮ್ಮಿಕೊಂಡರೆ ಸಹಕಾರಿ ಕ್ಷೇತ್ರ ಬೆಳೆಯಲು ಸಾಧ್ಯವಿದೆ. ವಾಣಿಜ್ಯ ಬ್ಯಾಂಕುಗಳು ಜನರ ಕಿಸೆ ನೋಡಿ ಸಾಲ ಕೊಡುತ್ತವೆ. ಜನರ ಮುಖ ನೋಡಿ ಸಾಲ ಕೊಡುವ ಬ್ಯಾಂಕುಗಳಿದ್ದರೆ ಅವು ಸಹಕಾರಿ ಕ್ಷೇತ್ರದ ಬ್ಯಾಂಕುಗಳು ಮಾತ್ರ ಎಂದು ಹೇಳಿದರು.
ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಭಾರತದಲ್ಲಿ ಸಹಕಾರಿ ಚಳವಳಿ ಆರಂಭವಾಗಿ 100 ವರ್ಷ ದಾಟಿದ್ದು, ದೇಶದ ಆರ್ಥಿಕ ಚಟುವಟಿಕೆಗೆ ಮಹತ್ವದ ಕೊಡುಗೆ ನೀಡಿದೆ. ಇಂದು ಜಗತ್ತಿನಲ್ಲಿ ಭಾರತವು ಆರ್ಥಿಕತೆಯಲ್ಲಿ 5 ರಿಂದ 3 ನೇ ಸ್ಥಾನಕ್ಕೆ ಬಂದಿದ್ದರೆ ಅದಕ್ಕೆ ಮುಖ್ಯ ಕಾರಣ ಸಹಕಾರಿ ರಂಗ. ದಕ್ಷಿಣ ಕನ್ನಡದಲ್ಲಿ ಮೊಳಹಳ್ಳಿ ಶಿವರಾವ್ ಅವರಿಂದ ಆರಂಭವಾದ ಸಹಕಾರಿ ಚಳವಳಿ ಪ್ರಸ್ತುತ ಎಂ ಎನ್ ರಾಜೇಂದ್ರ ಕುಮಾರ್ ಅವರ ಅವಧಿಯಲ್ಲಿ ಉಚ್ಛ್ರಾಯ ಸ್ಥಿತಿಗೇರಿದೆ. ಸಹಕಾರಿ ರಂಗವು ರೈತರನ್ನು ಸಬಲೀಕರಣ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದರೆ ಅದಕ್ಕೆ ಮುಖ್ಯ ಕಾರಣ ಸಹಕಾರಿ ಚಳವಳಿ ಎಂದರು.
ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ ಸಹಕಾರಿ ಕ್ಷೇತ್ರದಿಂದ ಮಾತ್ರ ಅಭಿವೃದ್ದಿ ಸಾಧ್ಯ ಎಂದು ಮನಗಂಡು ಕೇಂದ್ರ ಸರಕಾರ ಸಹಕಾರಿ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ಅನುದಾನವನ್ನು ನೀಡಿದೆ. ಇದಕ್ಕಾಗಿ ಕೇಂದ್ರದ ಸಹಕಾರ ಸಚಿವ ಅಮಿತ್ ಶಾ ಅವರನ್ನು ಅಭಿನಂದಿಸುತ್ತೇನೆ. 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿಗಳನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷ ಜಿ ಟಿ ದೇವೇಗೌಡ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂ ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿ ಕ್ಷೇತ್ರ ಕಲ್ಪ ವೃಕ್ಷವಾಗಿ ಬೆಳೆಯುತ್ತಿದೆ. ದಕ್ಷಿಣ ಕನ್ನಡ ಸಹಕಾರಿ ರಂಗದ ಬೆಳವಣಿಗೆ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಉಡುಪಿ ಶಾಸಕ ಯಶಪಾಲ್ ಎ ಸುವರ್ಣ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಸಚಿವ ಅಭಯಚಂದ್ರ ಜೈನ್, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ ಪಿ ಸುಚರಿತ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಮಹಾ ಮಂಡಲ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ನವೀನ್, ಮಾರಾಟ ಮಹಾ ಮಂಡಲದ ವ್ಯವಸ್ಥಾಪಕ ನಿರ್ದೇಶಕ ಆರ್ ಶ್ರೀಧರ್, ಅಡಿಶನಲ್ ರಿಜಿಸ್ಟ್ರಾರ್ ಲಿಂಗಾರಾಜು, ಸ್ಕ್ಯಾಡ್ಸ್ ನ ರವೀಂದ್ರ ಕಂಬಳಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಮತ್ತು ಎಲ್ಲಾ ನಿರ್ದೇಶಕರು, ಉದ್ಯನಿ ರೋಹನ್ ಮೊಂತೇರೊ ಮತ್ತಿತರರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ನಂದಿನಿಯ ಹೊಸ ಉತ್ಪನ್ನಗಳನ್ನು ಮತ್ತು ಕರಾವಳಿ ಸಹಕಾರಿ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅತ್ಯುತ್ತಮ ಸಹಕಾರಿ ಸಂಘಗಳನ್ನು ಹಾಗೂ ನವೋದಯ ಸ್ವಸಸಾಯ ಸಂಘಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಭಯ ಜಿಲ್ಲೆಗಳ ಸಹಕಾರಿಗಳು ಭಾಗವಹಿಸಿದ್ದರು. ಸಹಕಾರ ಸಚಿವನ್ನು ಶಾಲು ಹೊದಿಸಿ, ಸ್ಮರಣಿಕೆ , ಫಲಪುಷ್ಪ , ಸ್ಮರಣಿಗೆ ನೀಡಿ ಗೌರವಿಸಲಾಯಿತು.
Ancient Mangaluru
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ಪ್ರೀತಮ್ ಅವರು ಬೈಕ್ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್ ಪಂಪ್ ಕಡೆಯಿಂದ ಸರ್ವಿಸ್ ರೋಡ್‌ನಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್ ಕೆಟರಿಂಗ್ ಉದ್ಯಮ ನಡೆಸುತ್ತಿದ್ದರು. ಪ್ರೀತಮ್ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
DAKSHINA KANNADA
ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ
ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.
ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
- bengaluru6 days ago
ಸಿಂಪಲ್ ಆಗಿ ಮದುವೆಯಾದ ಒಳ್ಳೆ ಹುಡುಗ ಪ್ರಥಮ್
- DAKSHINA KANNADA7 days ago
ದ.ಕ ಜಿಲ್ಲೆಯತ್ತ ಗಮನ ನೀಡ್ತೇನೆ, ಮತ್ತೆ ಆಶೀರ್ವಾದ ಮಾಡಿ ಎಂದ ಸಂಸದ ನಳಿನ್
- bangalore6 days ago
ವಿನಯ್ ತರ ದುಷ್ಮಾನ್ ಆದ್ರೂ ಓಕೆ, ಆದ್ರೆ ಸಂಗೀತಾ ತರ ಪ್ರೆಂಡ್ಸ್ ಬೇಡ..!
- bangalore3 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?