Wednesday, October 5, 2022

ರಾಜ್ಯ ಸರಕಾರದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ-ಶಾಸಕ ಕಾಮತ್..!

ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ನಾಳೆಯಿಂದ ಪ್ರಾರಂಭವಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ ಸ್ಥಳ ವೀಕ್ಷಣೆ ನಡೆಸಿ ಮಾತನಾಡಿದ ಶಾಸಕ ಕಾಮತ್, ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ,

10 ಜಿಲ್ಲಾ ಆಸ್ಪತ್ರೆಗಳಲ್ಲಿ ಪಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಅಳವಡಿಸುವ‌ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಾಳೆಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಲಿದೆ ಎಂದರು.

ಈಗಾಗಲೇ ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿಶೇಷ ಪ್ರಯತ್ನದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್‌ ಸಂಸ್ಥೆಯ ಸಿಆರ್ ಎಫ್ ನಿಧಿಯಲ್ಲಿ 2 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ.

ಹಾಗಾಗಿ ಇನ್ನು ಕೆಲವೇ ದಿನಗಳಲ್ಲಿ 2 ಆಕ್ಸಿಜನ್ ಪ್ಲಾಂಟ್`ಗಳೂ ಕೂಡ ಜನರ ಸೇವೆಗೆ ಲಭ್ಯವಾಗಲಿದೆ. ಈ ಹಿಂದೆ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತಿನಿತ್ಯ 2.5 ಕೆ.ಎಲ್ ಆಕ್ಸಿಜನ್ ಸಾಕಾಗುತಿತ್ತು.

ಆದರೆ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದ್ದು ಸರಿಸುಮಾರು 5 ಕೆ.ಎಲ್ ಆಕ್ಸಿಜನ್ ಬೇಡಿಕೆಯಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಸದ್ಯ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನೀಡುತ್ತಿರುವ ಆಮ್ಲಜನಕ ನಿರ್ಮಾಣ ಘಟಕದಿಂದ ವೆನ್ಲಾಕ್ ಆಸ್ಪತ್ರೆಗೆ ಆಕ್ಸಿಜನ್ ಸಂಪನ್ಮೂಲವನ್ನು ಒದಗಿಸಿದಂತಾಗಿದೆ.

ಈ ಪ್ಲಾಂಟ್ ನಿರ್ಮಾಣದಿಂದ ಪ್ರತಿನಿತ್ಯ 1 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸಬಹುದು. ಇದರಿಂದಾಗಿ ಮೆಡಿಕಲ್ ಆಕ್ಸಿಜನ್ ಸರಬರಾಜುದಾರರ ಮೇಲೆ ಅವಲಂಬಿತವಾಗುವುದನ್ನು ಕಡಿಮೆಗೊಳಿಸಬಹುದಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಆಕ್ಸಿಜನ್ ಉತ್ಪಾದನಾ ಘಟಕವನ್ನು ವೆನ್ಲಾಕ್ ಆಸ್ಪತ್ರೆಗೆ ನೀಡಿದ ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವರಾದ ಡಾ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಶಾಸಕ ಕಾಮತ್ ಹೇಳಿದ್ದಾರೆ.

ಈವೇಳೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್,ಮಂಗಳೂರು ಮಹಾನಗರ ಪಾಲಿಕೆ ಮುಖ್ಯ ಸಚೇತಕರಾದ‌ ಸುಧೀರ್‌ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಅಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್,ಬಿಜೆಪಿ ಜಿಲ್ಲಾ ವಕ್ತಾರರಾದ ಜಗದೀಶ್ ಶೇಣವ, ಮುಖಂಡರಾದ ಸಚಿನ್ ರಾಜ್ ರೈ, ಮೋಹನ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...