Connect with us

DAKSHINA KANNADA

ಮಹಿಳಾ ಕಾಂಗ್ರೆಸ್ ನಡಿಗೆ-ಅನ್ನದಾತರ ಬಳಿಗೆ : ಜೈನಕಾಶಿಯಲ್ಲಿ  ಕೃಷಿ ಕೂಲಿ ಕಾರ್ಮಿಕರೊಂದಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಕೃಷಿ ಚಟುವಟಿಕೆ..

Published

on

ಮಹಿಳಾ ಕಾಂಗ್ರೆಸ್ ನಡಿಗೆ-ಅನ್ನದಾತರ ಬಳಿಗೆ : ಜೈನಕಾಶಿಯಲ್ಲಿ  ಕೃಷಿ ಕೂಲಿ ಕಾರ್ಮಿಕರೊಂದಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಕೃಷಿ ಚಟುವಟಿಕೆ..

ಮಂಗಳೂರು : ಮಹಿಳಾ ಕಾಂಗ್ರೆಸ್ ನಡಿಗೆ-ಅನ್ನದಾತರ ಬಳಿಗೆ ಎಂಬ ಪರಿಕಲ್ಪನೆಯೊಂದಿಗೆ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮೂಡುಬಿದಿರೆ ಮಹಿಳಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಅನ್ನದಾತರೊಂದಿಗೆ ಶ್ರಮದಾನ ಮತ್ತು ಸನ್ಮಾನ ಕಾರ್ಯಕ್ರಮವು ಬನ್ನಡ್ಕದಲ್ಲಿರುವ ಸೋನ್ಸ್ ಫಾರ್ಮ್‍ನಲ್ಲಿ ನಡೆಯಿತು.
ರಾಜ್ಯ, ಜಿಲ್ಲಾ ಹಾಗೂ ವಿವಿಧ ಮಹಿಳಾ ಕಾಂಗ್ರೆಸ್ ಘಟಕಗಳ ಸದಸ್ಯರು ಗುರುವಾರ ಭೇಟಿ ನೀಡಿ ಫಾರ್ಮ್‍ನ ಮಹಿಳಾ ಕಾರ್ಮಿಕರೊಂದಿಗೆ ಬೆರೆತು ಕೆಲಸ ಮಾಡಿದರು. ಹಾಗೂ ಕಾರ್ಮಿಕರನ್ನು ಅಭಿನಂದಿಸಿದರು.

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಹುಣಸೂರು ಜಿ.ಪಂ. ಸದಸ್ಯೆ ಡಾ.ಪುಷ್ಪಾ ಅಮರನಾಥ್ ಮಾತನಾಡಿ, ಮಹಿಳಾ ಸಂಘಟನೆಗಳು ಗಟ್ಟಿಗೊಳ್ಳಬೇಕಾಗಿದೆ.

ರಾಜ್ಯದಲ್ಲಿರುವ ಹಳ್ಳಿಗಳ ಸಾಮಾನ್ಯ ಮಹಿಳೆಯರು, ಸ್ವಸಹಾಯ ಗುಂಪುಗಳಲ್ಲಿರುವ ಹಾಗೂ ಕೂಲಿಗಳಾಗಿ ದುಡಿಯುತ್ತಿರುವ ಮಹಿಳೆಯರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂಡು ನಮ್ಮ ಕಡೆಗೆ ಸೆಳೆದು ಸಂಘಟನೆಯನ್ನು ಬಲಿಷ್ಠಗೊಳಿಸಬೇಕಾಗಿದೆ.

ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಕೃಷಿಕರು, ವಿಶೇಷವಾಗಿ ಮಹಿಳಾ ಕಾರ್ಮಿಕರಲ್ಲಿ ಆತ್ಮ ಶಕ್ತಿ ತುಂಬಲು ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಶ್ರಮದಾನದ ಮೂಲಕ ಈ ಕಾಯ್ದೆಗಳಿಗೆ ವಿರೋಧವನ್ನು ವ್ಯಕ್ತಪಡಿಸುತ್ತಿದ್ದೇವೆ.

ಈಗಾಗಲೇ ಮೈಸೂರು, ಹುಬ್ಬಳ್ಳಿ, ಉಡುಪಿಯ ಹೆಗ್ಗುಂಜೆಗೆ ಭೇಟಿ ನೀಡಿ ಮಹಿಳೆಯರೊಂದಿಗೆ ಸಂವಹನ ನಡೆಸಲಾಗಿದೆ.

ಇದರ ಮುಂದಿನ ಹಂತದಲ್ಲಿ ಸ್ಥಳೀಯ ಘಟಕಗಳು ಈ ಕಾರ್ಯವನ್ನು ಮುಂದುವರಿಸಲಿವೆ ಎಂದು ಡಾ.ಪುಷ್ಪಾ ಅಮರನಾಥ್ ಹೇಳಿದರು.

ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಕೃಷಿ ಸುಧಾರಣೆ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಮುಷ್ಕರ 48 ದಿನ ದಾಟಿದೆ, 55 ಮಂದಿ ಪ್ರಾಣಾರ್ಪಣೆ ಮಾಡಿಯಾಗಿದೆ.

ಇನ್ನಾದರೂ ಸರ್ಕಾರ ಈ ಕಾಯ್ದೆಗಳ ಪರಿಷ್ಕರಣೆ ನಡೆಸಲೇಬೇಕಾಗಿದೆ ಎಂದು ಪುಷ್ಪಾ ಅವರು ಆಗ್ರಹಿಸಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಡಾ. ಎಲ್.ಸಿ. ಸೋನ್ಸ್ ಅವರ ಉಪಸ್ಥಿತಿಯಲ್ಲಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮೂಡುಬಿದಿರೆ ಬ್ಲಾಕ್ ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ಮಂಗಳೂರು ನಗರ ಬ್ಲಾಕ್ ಅಧ್ಯಕ್ಷೆ ಶಾಂತಲಾ ಗಟ್ಟಿ, ಸುರತ್ಕಲ್ ಬ್ಲಾಕ್ ಅಧ್ಯಕ್ಷೆ ಶಶಿಕಲಾ ಅವರು ಸೋನ್ಸ್ ಫಾರ್ಮ್‍ನ ಕಾರ್ಮಿಕರಿಗೆ ಹಸಿರು ವಸ್ತ್ರ ನೀಡಿ ಪುರಸ್ಕರಿಸಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಗಳಾದ ಅಪ್ಪಿ, ಸುರೇಖಾ ಚಂದ್ರಹಾಸ್, ವಿವಿಧ ಘಟಕಗಳ ಪದಾಧಿಕಾರಿಗಳು, ಪುರಸಭಾ ಸದಸ್ಯರು, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಮೂಲ್ಕಿ-ಮೂಡುಬಿದಿರೆ ಯುತ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ಬೆಳುವಾಯಿ ಗ್ರಾ.ಪಂ ಸದಸ್ಯ ರಾಘು ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending