Saturday, March 6, 2021

ಫೆ 22ರಿಂದ ರಾಜ್ಯದಾದ್ಯಂತ  ಪೂರ್ಣ ಪ್ರಮಾಣದ ಕಲಾಪ ಆರಂಭ-ಮುಖ್ಯ ನ್ಯಾ|ಎ.ಎಸ್ ಓಕಾ..!

ಫೆ 22ರಿಂದ ರಾಜ್ಯದಾದ್ಯಂತ  ಪೂರ್ಣ ಪ್ರಮಾಣದ ಕಲಾಪ ಆರಂಭ-ಮುಖ್ಯ ನ್ಯಾ|ಎ.ಎಸ್ ಓಕಾ..!

ಮಂಗಳೂರು: ರಾಜ್ಯದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎ.ಎಸ್ ಓಕಾ  ಹಾಗೂ ದಕ್ಷಿಣ ಕನ್ನಡ ಜಿಲ್ಲಾ  ನ್ಯಾಯಾಲಯಗಳ  ಆಡಳಿತಾತ್ಮಕ ನ್ಯಾಯಮೂರ್ತಿ ದಿನೇಶ್ ರಾವ್ ಇಂದು ಮಂಗಳೂರಿಗೆ ಭೇಟಿ ನೀಡಿ ವಕೀಲರ ಸಂಘದ ಸಭೆಯಲ್ಲಿ ಭಾಗವಹಿಸಿದರು.

ಬಳಿಕ   ಅಹವಾಲು ಸ್ವೀಕರಿಸಿದರು. ಸಭೆಯ ಬಳಿಕ ವಕೀಲರ ಸಂಘದ ನೂತನ ನಿವೇಶನ ಮತ್ತು  ಕೋರ್ಟ್ ನ ತಡೆಗೋಡೆ ಕಾಮಗಾರಿ ಹಳೇ ಕಟ್ಟಡಗಳನ್ನು  ವೀಕ್ಷಿಸಿ ಪರಿಶೀಲನೆ ನಡೆಸಿದರು .

ಈ ಸಂದರ್ಭದಲ್ಲಿ ವಕೀಲರ ಪ್ರಮುಖ ಬೇಡಿಕೆಯಾದ ಕಲರ್ ಝೆರಾಕ್ಸ್ ಯಂತ್ರವನ್ನು ಒಂದು ವಾರದೊಳಗೆ ಅನುಷ್ಠಾನಗೊಳಿಸುವ ವಾಗ್ಧಾನ ನೀಡಿದರು.

ಇದೇ ಸಂದರ್ಭದಲ್ಲಿ ಕೆಳಹಂತದ ನ್ಯಾಯಾಲಯಗಳು ನ್ಯಾಯ ಪಾಲನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿವೆ. ನಾನು ಕೂಡ ಅದೇ ನ್ಯಾಯಾಲಯದಲ್ಲಿ ವಕೀಲನಾಗಿ ಕರ್ತವ್ಯ ನಿರ್ವಹಿಸಿದ್ದೇನೆ.

ಕೋವಿಡ್ ವರ್ಷ ನ್ಯಾಯಾಲಯದ ವ್ಯವಸ್ಥೆಗೆ ದೊಡ್ಡ ಸವಾಲಾಗಿದ್ದು ಅದನ್ನು ಯಶಸ್ವಿಯಾಗಿ ಮತ್ತು ಸಮರ್ಥವಾಗಿ ನಿಭಾಯಿಸಿದ್ದೇವೆ. ರಾಜ್ಯದ ಎಲ್ಲಾ ನ್ಯಾಯಾಲಯಗಳನ್ನು ಹಂತ ಹಂತವಾಗಿ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದ್ದು, ಫೆಬ್ರವರಿ 22ರಿಂದ ಪೂರ್ಣ ಪ್ರಮಾಣದ ಕಲಾಪ ರಾಜ್ಯದಾದ್ಯಂತ ಆರಂಭವಾಗಲಿರುವುದು.

ಈ ಹಿನ್ನೆಲೆಯಲ್ಲಿ ಎಲ್ಲಾ ನ್ಯಾಯಾಲಯಗಳಿಗೆ ಮಾರ್ಗ ಸೂಚಿ ಬಿಡುಗಡೆ ಮಾಡಲಾಗುವುದು ಅದೇ ರೀತಿ ನ್ಯಾಯವಾದಿಗಳಿಗೆ ಕಿವಿ ಮಾತು ಹೇಳಿದ ಅವರು ಅನಗತ್ಯವಾಗಿ ಕಕ್ಷಿದಾರರಿಗೆ ನ್ಯಾಯಾಲಯಕ್ಕೆ ಬರುವಂತೆ ಮಾಡುವುದು ಬೇಡ , ಅಗತ್ಯವಾಗಿ ಬರಬೇಕಾದರೂ ಸಾಮಾಜಿಕ ಅಂತರ ಹಾಗೂ ಕಡ್ಡಾಯ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಿ ಎಂದು ಹೇಳಿದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...