Connect with us

    LATEST NEWS

    ಒಡಿಶಾದ ಸ್ಟೇಷನ್ ಮಾಸ್ಟರ್ ಷರೀಫ್ ನಾಪತ್ತೆ ಎಂಬುದು ಸುಳ್ಳು ಸುದ್ದಿ

    Published

    on

    ನವದೆಹಲಿ: ಜೂನ್ 2 ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದಾರೆ ಮತ್ತು 800 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

    ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ತಪ್ಪು ಮಾಹಿತಿ, ಸುಳ್ಳು ಸುದ್ದಿಗಳು ಹರಿದಾಡಿವೆ. ಬಹನಾಗಾ ಬಜಾರ್ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್, ಷರೀಫ್ ಅಪಘಾತದ ನಂತರ ತಲೆಮರೆಸಿಕೊಂಡಿದ್ದಾರೆ ಎಂದು ಪೋಸ್ಟ್ ಶೇರ್ ಮಾಡುತ್ತಿದ್ದಾರೆ.

       ವೈರಲ್‌ ಆದ ಚಿತ್ರ

    ಈ ಬಗ್ಗೆ ಆಲ್ಟ್‌ ನ್ಯೂಸ್‌ ಹಾಗೂ ಬೂಮ್‌ ಲೈವ್‌ ಫ್ಯಾಕ್ಟ್‌ ಚೆಕ್‌ ನಡೆಸಿದಾಗ ಬಹನಾಗಾ ಬಜಾರ್ ನಿಲ್ದಾಣದ ಸಮೀಪವಿರುವ ರೈಲು ಅಪಘಾತದ ಸ್ಥಳವು ಆಗ್ನೇಯ ರೈಲ್ವೆಯ ಖರಗ್‌ಪುರ ವಿಭಾಗದ ಅಡಿಯಲ್ಲಿ ಬರುತ್ತದೆ.

    ಅಲ್ಲಿನ ಸ್ಟೇಷನ್ ಮಾಸ್ಟರ್ ಹೆಸರು ಎಸ್ ಬಿ ಮೊಹಂತಿ, ಬದಲಾಗಿ ಷರೀಫ್‌ ಅಲಿ ಅಲ್ಲ ಎಂದು  ಆಗ್ನೇಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಆದಿತ್ಯ ಕುಮಾರ್ ಚೌಧರಿ ಸ್ಪಷ್ಟಪಡಿಸಿದ್ದಾರೆ.

    “ಸ್ಟೇಷನ್‌ ಮಾಸ್ಟರ್‌ ಓಡಿಹೋಗಿಲ್ಲ”

    ಅಪಘಾತದ ಸ್ಥಳದಿಂದ ಸ್ಟೇಷನ್‌ ಮಾಸ್ಟರ್‌ ಓಡಿಹೋದರು ಎಂಬ ಬಗ್ಗೆ ಚೌಧರಿ ತಳ್ಳಿಹಾಕಿದ್ದಾರೆ. ಘಟನೆ ಸಂಭವಿಸಿದ ನಂತರ ಎಸ್‌ಬಿ ಮೊಹಂತಿ ಪಲಾಯನ ಮಾಡಲಿಲ್ಲ.

    ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಅವರು ಇತರರೊಂದಿಗೆ ಸಹಕರಿಸುತ್ತಿದ್ದರು. ಯಾವುದೇ ಠಾಣಾಧಿಕಾರಿಗಳನ್ನು ಅಮಾನತು ಮಾಡಿಲ್ಲ” ಎಂದು ಚೌಧರಿ ಹೇಳಿದ್ದಾರೆ.

    ಈ ಬಗ್ಗೆ ಪೊಲೀಸರು  ಸ್ಪಷ್ಟನೆ ನೀಡಿದ್ದು, ನಿಲ್ದಾಣದ ಸಿಬ್ಬಂದಿ ಯಾರೂ ತಲೆಮರೆಸಿಕೊಂಡಿಲ್ಲ ಮತ್ತು ಪೊಲೀಸ್ ಇಲಾಖೆ ಅವರೊಂದಿಗೆ ಸಂಪರ್ಕದಲ್ಲಿದೆ. ಅಲ್ಲದೆ ನಿಲ್ದಾಣದ ಸಿಬ್ಬಂದಿಯಲ್ಲಿ ‘ಷರೀಫ್’ ಎಂಬ ಹೆಸರಿನ ಯಾವ ವ್ಯಕ್ತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸುಳ್ಳು ಸುದ್ದಿಯೊಂದಿಗೆ ಬಳಸಿದ ಚಿತ್ರದ ಸತ್ಯಾಸತ್ಯತೆ ಪರಿಶೀಲಿಸಲು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ವಿಕಾಸ್‌ ಚಂದರ್‌ ಎಂಬ ವೆಬ್‌ಸೈಟ್‌ನಲ್ಲಿ ಮಾರ್ಚ್ 2004 ರಂದು ಪ್ರಕಟವಾಗಿದೆ.

    BANTWAL

    ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

    Published

    on

    ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಮೃ*ತಪಟ್ಟ ಘಟನೆ ನ.28ರ ಗುರುವಾರ ನಡೆದಿದೆ.

    ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ.ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃ*ತಪಟ್ಟ ಯುವತಿ ಎನ್ನಲಾಗಿದೆ.

    ಮೃ*ತರು ತಾಯಿ, ಅಕ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

    Continue Reading

    LATEST NEWS

    ಕಾರ್ಕಳ: ದುರ್ಗಾ ಫಾಲ್ಸ್‌ಗೆ ಈಜುಲು ಹೋದ ಕಾಲೇಜು ವಿದ್ಯಾರ್ಥಿ ನೀರುಪಾಲು

    Published

    on

    ಕಾರ್ಕಳ: ದುರ್ಗಾ ಫಾಲ್ಸ್‌ಗೆ ಈಜುಲು ಹೋದ ವಿದ್ಯಾರ್ಥಿಯೋರ್ವ ನೀರು ಪಾಲಾದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.

    ಮೃ*ತ ವಿದ್ಯಾರ್ಥಿಯನ್ನು ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

    7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್‌ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹೇಮಂತ್ ಸೊರೆನ್

    Published

    on

    ಮಂಗಳೂರು/ರಾಂಚಿ: ಜಾರ್ಖಂಡ್ ರಾಜ್ಯದ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕರಿಸಿದರು. 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೆ ಏರಿದ್ದಾರೆ. ಈ ವೇಳೆ ಇಂಡಿಯಾ ಬಣದ ಹಲವು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


    ರಾಂಚಿಯ ಮೊರಾಬಾದಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಆದಿವಾಸಿ ನಾಯಕ 49 ವರ್ಷದ ಹೇಮಂತ್ ಸೊರೇನ್ ಅವರಿಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರತಿಜ್ಞಾವಿಧಿ ಬೋಧಿಸಿದರು.
    ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಖುರ್ತಾ, ಪೈಜಾಮಾ ಧರಿಸಿ ತಮ್ಮ ತಂದೆ, ಜೆಎಂಎಂ ಅಧ್ಯಕ್ಷ ಶಿಬು ಸೊರೇನ್ ಅವರನ್ನು ಭೇಟಿಯಾದರು.

    ಇದನ್ನೂ ಓದಿ: Watch video: ಜೈಲಿನಿಂದ ಬಿಡುಗಡೆಯಾದ ಸಂಭ್ರಮದಲ್ಲಿ ಜೈಲಾಧಿಕಾರಿಗಳ ಎದುರೇ ಯುವಕನ ಭರ್ಜರಿ ಡ್ಯಾನ್ಸ್ !
    ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಎಪಿ ನಾಯಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಜರಿದ್ದರು.

    ಇತ್ತೀಚೆಗೆ ಮುಕ್ತಾಯಗೊಂಡ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ 81 ಕ್ಷೇತ್ರಗಳ ಪೈಕಿ ಜೆಎಂಎಂ ನೇತೃತ್ವದ ಮೈತ್ರಿಕೂಟವು 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಎನ್ ಡಿಎ 24 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

    Continue Reading

    LATEST NEWS

    Trending