Tuesday, August 16, 2022

ಮಹಾರಾಷ್ಟ್ರದಲ್ಲಿ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ: ಪ್ರಕ್ಷುಬ್ದ ವಾತಾವರಣ

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರ ಹೇಳಿಕೆಯಿಂದ ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನಾ ನಡುವೆ ಕೋಲಾಹಲ ಉಂಟಾಗಿದೆ. ಶಿವಸೇನಾ ಕಾರ್ಯಕರ್ತರು ನಾಸಿಕ್​​​ನ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ದ್ವೇಷಮಯ ವಾತಾವರಣ ನಿರ್ಮಾಣವಾಗಿದೆ.


ಮೊದಲಿಗೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಘೋಷಣೆಗಳನ್ನು ಕೂಗಿದ ಶಿವಸೇನಾ ಕಾರ್ಯಕರ್ತರು, ನಾಸಿಕ್​ನ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಪರಿಣಾಮ, ಬಿಜೆಪಿ ಕಚೇರಿಗೆ ಹಾನಿಯಾಗಿದೆ.

ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ಈ ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಿಜೆಪಿ ಕಚೇರಿಗೆ ಭದ್ರತೆ ಒದಗಿಸಿದ್ದು, ಸ್ಥಳದಿಂದ ಜನರನ್ನು ಚದುರಿಸಿದ್ದಾರೆ.

ಈ ಬೆನ್ನಲ್ಲೇ ರಾಜ್ಯದ ಹಲವೆಡೆ ಶಿವಸೇನೆಯಿಂದ ಪ್ರತಿಭಟನೆ ಆರಂಭವಾಗಿದೆ.

ಮುಂಬೈ, ರತ್ನಗಿರಿಯಲ್ಲಿ ಪ್ರತಿಭಟನೆಶಿವಸೇನೆಯ ಕಾರ್ಯಕರ್ತರು ಮುಂಬೈನಲ್ಲಿರುವ ನಾರಾಯಣ ರಾಣೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಹಾಗೂ ಶಿವಸೇನಾ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ.

ಈ ವೇಳೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸಿದ್ದಾರೆ.
ಶಿವಸೇನೆ-ಬಿಜೆಪಿ ನಡುವೆ ಘರ್ಷಣೆ ರತ್ನಗಿರಿಯಲ್ಲೂ ಶಿವಸೇನಾ ಕಾರ್ಯಕರ್ತರು ಕೇಂದ್ರ ಸಚಿವ ವಿರುದ್ಧ ಪ್ರತಿಭಟನೆ ನಡೆಸಿದ್ದು,

ಬಿಜೆಪಿ ಹಾಗೂ ನಾರಾಯಣ ರಾಣೆ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಾಣೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶಿವಸೇನಾ ಸಂಸದ ವಿನಾಯಕ್ ರಾವತ್, ಪ್ರಧಾನಿ ಮೋದಿಗೆ ಪತ್ರ ಬರೆದು ಕೇಂದ್ರ ಕ್ಯಾಬಿನೆಟ್​​ನಿಂದ ರಾಣೆಯನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕನಸಿನ, ಆಕರ್ಷಣೆಯ ಹಾಗೂ ಅಭಿವೃದ್ದಿಯ ಮಂಗಳೂರಿಗೆ ಪಣ: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಮಂಗಳೂರು: ಕನಸಿನ, ಆಕರ್ಷಣೆಯ ಹಾಗೂ ಅಭಿವೃದ್ದಿಯ ಮಂಗಳೂರನ್ನು ಮಾಡಲು ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ.ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಸ್ವಾತಂತ್ರ್ಯದ...

ಉಡುಪಿ ಜಿಲ್ಲಾಡಳಿತದಿಂದ ‘ಆಜಾದಿ ಕಾ ಅಮೃತ್‌ ಮಹೋತ್ಸವ’

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಆಜಾದಿ ಕಾ ಅಮೃತ್‌ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭ ಇಂದು ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ...

ದ.ಕ.ಜಿಲ್ಲಾ ಮಡಿವಾಳರ ಸಂಘ, ರಜಕ ಯೂತ್‌ : ಸ್ವಾತಂತ್ರ್ಯ ಸಂಭ್ರಮ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ (ರಿ) ಮಂಗಳೂರು ಮತ್ತು ರಜಕ ಯೂತ್ ಮಂಗಳೂರು ಸಹಭಾಗಿತ್ವದಲ್ಲಿ ಆಝಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಸಂಘದ ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯ ಸಂಭ್ರಮದ...