Thursday, April 22, 2021

ಸುರತ್ಕಲ್ ಮಸೀದಿ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ- ವ್ಯಾಪಕ ಹಾನಿ..!

ಮಂಗಳೂರು : ಶಾಂತವಾಗಿದ್ದ ದಕ್ಷಿಣ ಕನ್ನಡ ಮತ್ತೆ ಕೋಮು ಸೂಕ್ಷ್ಮವಾಗುತ್ತಿದೆ. ನಿನ್ನೆ ಭಾನುವಾರ ಸಂಜೆ ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣವಾದ ಬೆನ್ನಲ್ಲೇ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಸೀದಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಸುರತ್ಕಲ್‌ ಸಮೀಪದ ಕೃಷ್ಣಾಪುರ ಜನತಾ ಕಾಲೊನಿಯ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಯ ಮಸೀದಿಯ ಕಿಟಕಿ ಗಾಜುಗಳು ಒಡೆದಿವೆ ಜೊತೆಗೆ ಕಲ್ಲು ತೂರಾಟದದಿಂದ ಅಪಾರ ಹಾನಿ ಕೂಡ ಸಂಭವಿಸಿದೆ.

ಕೃಷ್ಣಾಪುರದ ಸಾದುಲಿ ಜುಮಾ ಮಸೀದಿ ಹಾಗೂ ಹಯಾತುಲ್‌ ಇಸ್ಲಾಮ್‌ ಮದರಸ ಕಟ್ಟಡಕ್ಕೆ ಕಿಡಿಗೇಡಿಗಳು  ಮಧ್ಯರಾತ್ರಿ ಸುಮಾರು 2.30 ರ ಸುಮಾರಿಗೆ ಕಲ್ಲು  ತೂರಾಟ ನಡೆಸಿ ಪರಾರಿಯಾಗಿದ್ದಾರೆ.

ರಜಾದಿನವಾದ ಭಾನುವಾರ ರಾತ್ರಿ ಸುಮಾರು 1.30 ಗಂಟೆ ವರೆಗೆ ಮಸೀದಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು, ಆ ಕಾರ್ಯಕ್ರಮ ಮುಗಿದ ಬಳಿಕ ಎಲ್ಲರೂ ತೆರಳಿದ್ದರು .

ಆ ಸಮಯದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಸಮಿತಿ ಕಾರ್ಯದರ್ಶಿ ದಾವೂದ್‌ ಹಕೀಂ ಸುರತ್ಕಲ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಮಸೀದಿ ಇತ್ತೀಚೆಗಷ್ಟೆ ನವೀಕರಣಗೊಂಡಿತ್ತು.

ಘಟನೆ ಬಗ್ಗೆ ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ ವ್ಯಕ್ತಪಡಿಸಿದ್ದು, ಸೌಹಾರ್ದತೆ ವಾತಾವರಣ ಕೆಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಯನ್ನು ಅಧ್ಯಕ್ಷ ಅಶ್ರಫ್‌ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...