Connect with us

    LATEST NEWS

    ಮಂಡ್ಯದಲ್ಲಿ ನಿಷೇದಾಜ್ಞೆ ಜಾರಿ ! ಅಷ್ಟಕ್ಕೂ ಗಣೇಶ ವಿಸರ್ಜನೆ ವೇಳೆ ಆದುದಾದರು ಏನು?

    Published

    on

    ಮಂಡ್ಯ ಜಿಲ್ಲೆಯ ನಾಗಮಂಡಲದಲ್ಲಿ ಗಣೇಶ ವಿಸರ್ಜನಾ ಮೆರವಣೆಗೆ ವೇಳೆ ಅನ್ಯಕೋಮಿನವರು ನಡುರಸ್ತೆಯಲ್ಲೇ ಕೋಮುಗಲಭೆ ಸೃಷ್ಟಿಸಿದ್ದು ನಿಷೇದಾಜ್ಞೆ ಜಾರಿಯಾಗಿದೆ.

    ಮಂಗಳೂರು/ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಂಜೆ 6.30 ರ ವೇಳೆಗೆ ಗಣೇಶ ವಿಸರ್ಜನಾ ಆರಂಭವಾಗಿದ್ದು ಪಟ್ಟಣದ ಬದಿರಿಕೊಪ್ಪದಲ್ಲಿ ಕಳೆದ 5 ದಿನಗಳ ಹಿಂದೆಯೇ ಗಣೇಶ ಮೂರ್ತಿ ಪ್ರತಿಷ್ಠನೆಯಾಗಿತ್ತು. ಬುಧವಾರ ಸಂಜೆ ಅದ್ದೂರಿಯಾಗಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಪಟಾಕಿ ಸಿಡಿಸುತ್ತಾ, ಡೊಳ್ಳು ತಮಟೆ, ಡಿ.ಜೆ ಸೌಂಡ್‌ಗಳೊಂದಿಗೆ ಗಣೇಶನ ಮೂರ್ತಿ ವಿಸರ್ಜನೆಗೆ ಮೆರವಣಿಗೆ ಹೊರಟಿದ್ದರು.

    ರಸ್ತೆಯ ನಡುವೆಯೇ ಮೆರವಣಿಗೆಗೆ ತಡೆ :

    ಗಣೇಶನ ವಿಸರ್ಜನಾ ಮೆರವಣಿಗೆ ಮಂಡ್ಯ ಸರ್ಕಲ್ ಮಾರ್ಗವಾಗಿ ತೆರಳುತ್ತಿದ್ದಾಗ ಯಾ ಅಲ್ಲಾ ಮಸೀದಿ ಮತ್ತು ದುರ್ಗಾ ಮುಂಭಾಗ ರಸ್ತೆಯಲ್ಲಿ ಅನ್ಯಕೋಮಿಯ ಯುವಕರು ಮೆರವಣಿಗೆಗೆ ತಡೆಯೊಡ್ಡಿದ್ದಾರೆ. ಮಸೀದಿ ಮುಂದೆ ಡಿಜೆ ಸೌಂಡ್ಸ್, ತಮಟೆ, ಡೊಳ್ಳು ಬಾರಿಸದಂತೆ ಕ್ಯಾತೆ ತೆಗೆದಿದ್ದಾರೆ. ಈ ವೇಳೆ ಎರಡೂ ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ.

    ಕಲ್ಲು ತೂರಾಟ ಮಾಡಿ ಪ್ರತಿಭಟನೆ :

    ಡಿಜೆ ಸೌಂಡ್ ಜತೆ ಡೊಳ್ಳು, ತಮಟೆ ಸದ್ದಿನೊಂದಿಗೆ ಪಟಾಕಿ ಸಿಡಿಸುತ್ತಾ ಸಂಭ್ರಮದಿಂದ ಹೆಜ್ಜೆ ಹಾಕುತ್ತಾ ಇನ್ನೇನು ಮಸೀದಿಯಿಂದ ಸ್ವಲ್ಪ ದೂರ ಇದೆ ಎನ್ನುವಾಗ ಅನ್ಯಕೋಮಿನ ಯುವಕರು ಏಕಾಏಕಿ ಗಣೇಶ ವಿಸರ್ಜನಾ ಮೆರವಣಿಗೆಯತ್ತ ಕಲ್ಲು ತೂರಾಟ ನಡೆಸಿದ್ದಾರೆ. ಕಟ್ಟಡದ ಮೇಲೆ ನಿಂತುಕೊಂಡು ಸಹ ಮನಬಂದಂತೆ ಕಲ್ಲು ತೂರಾಟ ಮಾಡಿದ್ದಾರೆ. ಆಗ ಗಲಾಟೆ ಶುರುವಾಗಿದೆ. ಹಿಂದೂಗಳು ಮತ್ತು ಅನ್ಯಕೋಮಿನ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿದೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ನಂತರ ಕಲ್ಲುತೂರಾಟ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಹಿಂದೂಗಳು ನಾಗಮಂಗಲ ಪೊಲೀಸ್ ಠಾಣೆ ಮುಂದೆಯೇ ಗಣೇಶನ ವಿಗ್ರಹವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.

    ಅಂಗಡಿಗಳಿಗೆ ಬೆಂಕಿ – ಬೈಕ್ ಗಳು ಧಗಧಗ :

    ನಾಗಮಂಗಲ ಪೊಲೀಸ್ ಠಾಣೆ ಮುಂದೆ ಹಿಂದೂಗಳು ಪ್ರತಿಭಟನೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆದರೆ ರಾತ್ರಿ 10 ಗಂಟೆ ಸುಮಾರಿಗೆ ದುಷ್ಕೃತ್ಯವೇ ನಡೆದು ಹೋಗಿತ್ತು. ಅನ್ಯಕೋಮಿನ ಯುವಕರ ಗುಂಪು ಸಿಕ್ಕಸಿಕ್ಕ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಗುಜುರಿ ಅಂಗಡಿಯೊಂದು ಧಗಧಗಿಸಿ ಉರಿದಿತ್ತು.

    ಅಗ್ನಿ ಶಾಮಕದಿಂದ ಬೆಂಕಿ ಶಮನ :

    ಕಿಡಿಗೆಡಿಗಳು ರಸ್ತೆಯಲ್ಲಿ ಲಾಂಗು, ರಾಡು, ತಲ್ವಾರುಗಳನ್ನು ಝಳಪಿಸುತ್ತಾ ಅಟ್ಟಹಾಸ ಪ್ರದರ್ಶಿಸಿದ್ದಾರೆ. ಬರುತ್ತಿದ್ದ ವಾಹನಗಳ ಮೇಲೆ ದಾಳಿ ಮಾಡಿದ್ದಾರೆ. ಪೊಲೀಸರು ಎಲ್ಲವನ್ನೂ ವಶಪಡಿಸಿಕೊಂಡರು. ಬೆಂಕಿ ಹಚ್ಚಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಮಂಡ್ಯ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಸೆಪ್ಟೆಂಬರ್ 14 ರವರೆಗೆ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಸಂಘಟನೆ ಇಂದು ನಾಗಮಂಗಲ ಬಂದ್‌ಗೆ ಕರೆ ಕೊಟ್ಟಿದೆ.

    ನಾಗಮಂಗಲ ಗಲಭೆ: 50 ಮಂದಿಯ ಬಂಧನ :

    ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಸಂಬಂಧ 50 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಒಟ್ಟಿನಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗದಲ್ಲಿ ಕೋಮು ಗಲಭೆ ಕಿಚ್ಚುಹೊತ್ತಿಸಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

    DAKSHINA KANNADA

    ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ

    Published

    on

    ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.

    ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

    ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.

    ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

    Continue Reading

    LATEST NEWS

    ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ

    Published

    on

    ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.

    ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.

    Continue Reading

    LATEST NEWS

    ಗೌರವಧನ ಸರಿಯಾಗಿ ನೀಡದೇ ಇದ್ದಲ್ಲಿ ಕೆಲಸ ಸ್ಥಗಿತ: ಅಂಗನವಾಡಿ ಕಾರ್ಯಕರ್ತೆಯರಿಂದ ಎಚ್ಚರಿಕೆ

    Published

    on

    ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ.

    ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

    ಪ್ರಮುಖವಾಗಿ ಗೌರವಧನವನ್ನು ಪ್ರತಿ ತಿಂಗಳ ಸರಿಯಾಗಿ ಪಾವತಿ ಮಾಡಬೇಕು ಹಾಗೂ ಮೊಟ್ಟೆ ವಿತರಣೆಗೆ ತಗಲುವ ಖರ್ಚನ್ನು ಮುಂಚಿತವಾಗಿ ನೀಡಬೇಕು ಮತ್ತು ಮಾರುಕಟ್ಟೆ ದರದಲ್ಲಿ ಏರಿಳಿತಕ್ಕೆ ತಕ್ಕಂತೆ ಮೊಟ್ಟದರವನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

    ನಮ್ಮನ್ನು ದುಡಿಸಿಕೊಳ್ಳೂತ್ತಿರುವ ಸರ್ಕಾರ ನಮಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡದೆ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸರ್ಕಾರ ಸೂಕ್ತವಾಗಿ ಸ್ಪಂಧಿಸದೇ ಇದ್ದಲ್ಲಿ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.

    Continue Reading

    LATEST NEWS

    Trending