Connect with us

LATEST NEWS

ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ- ತಲೆಗೆ ಗಾಯ..!

Published

on

ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅವರ ತಲೆಗೆ ಗಾಯವಾಗಿ ರಕ್ತ ಸೋರಿಕೆಯಾಗಿದೆ.

ಕೊರಟಗೆರೆ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಕಣ ತಾರಕಕ್ಕೇರಿದ್ದು, ಕೆಲವು ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ.

ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಅವರ ತಲೆಗೆ ಗಾಯವಾಗಿ ರಕ್ತ ಸೋರಿಕೆಯಾಗಿದೆ.

ತಾಲೂಕಿನ ಭೈರೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಚಾರದ ವೇಳೆಯಲ್ಲಿ ಡಾ. ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದಾಗ ಗುಂಪಿನಲ್ಲಿದ್ದ ದುಷ್ಕರ್ಮಿ ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.

ಕೂಡಲೇ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಡಾ. ಜಿ.ಪರಮೇಶ್ವರ್ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆಯಲ್ಲಿ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಜೆಡಿಎಸ್ ನಿಂದ ಸುಧಾಕರ್ ಲಾಲ್ ಸ್ಪರ್ಧಿಸಿದ್ದು, ಕ್ಷೇತ್ರದಲ್ಲಿ ತ್ರಿಕೋನ ಪೈಪೋಟಿ ಏರ್ಪಟ್ಟಿದೆ.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

Trending