Monday, January 24, 2022

2 ವರ್ಷದಿಂದ ಮುಡಿಪು-ಕಂಬಳಪದವು ರಸ್ತೆಯನ್ನು ಕತ್ತಲೆಯಲ್ಲಿಟ್ಟ Infosys..!

ಮಂಗಳೂರು: ನಗರದ ಹೊರವಲಯದ ಮುಡಿಪುವಿನಲ್ಲಿರುವ ಇನ್ಫೋಸಿಸ್ ಸಂಸ್ಥೆಯು ಕಂಬಳಪದವಿನಿಂದ ಮುಡಿಪು ಕ್ರಾಸ್ ವರೆಗೆ ಹಾಕಲಾದ ಲೈಟ್‌ನ್ನು ಸುಮಾರು ಎರಡು ವರ್ಷ ಕಳೆದರು ಇವರೆಗೂ ಉರಿಸಿಲ್ಲ.

ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಇನ್ಫೋಸಿಸ್ ಸಂಸ್ಥೆಯು ತನ್ನ ಸಿಆರ್‌ಎಸ್‌ (Corporate Social Responsibility)ಫಂಡ್‌ನಿಂದ ಕಂಬಳಪದವಿನಿಂದ ಮುಡಿಪು ಕ್ರಾಸ್ ವರೆಗೆ ಬೀದಿ ದೀಪ ಅಳವಡಿಸಲಾಗಿತ್ತು.

ಆದರೆ ಅದನ್ನು ಅಳವಡಿಸಿ ಎರಡು ವರ್ಷ ಕಳೆದರು ಈವರೆಗೂ ಉರಿಸಿಲ್ಲ.

ಈ ಹಿನ್ನೆಲೆಯಲ್ಲಿ ಕಳೆದ ಜೂನ್‌ ನಲ್ಲಿ ಪಜೀರು ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾಧಿಕಾರಿಗೆ ದೂರನ್ನು ಸಲ್ಲಿಸಿದ್ದರು. ಜಿಲ್ಲಾಧಿಕಾರಿಯು ದಾರಿ ದೀಪಗಳನ್ನು ಉರಿಸಲು ಜಿಲ್ಲಾಧಿಕಾರಿ ಇನ್ಫೋಸಿಸ್ ಸಂಸ್ಥೆಗೆ ಆದೇಶ ನೀಡಿದ್ದರು.

ಆದರೂ ಇನ್ಫೋಸಿಸ್ ಸಂಸ್ಥೆ ದೀಪ ಉರಿಸಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ನಿಟ್ಟಿನಲ್ಲಿ ಪಜೀರು ಗ್ರಾಮ ಪಂಚಾಯತ್ ಪ್ರತಿನಿಧಿಗಳು ಮತ್ತು ಊರವರು ಮತ್ತೆ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ.

ಅಲ್ಲದೇ ಬೇಡಿಕೆ ಈಡೇರದಿದ್ದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

Hot Topics

‘ಪುಷ್ಪ’ ಸಿನಿಮಾ ನೋಡಿ ಅಪ್ರಾಪ್ತರಿಂದ ಯುವಕನ ಬರ್ಬರ ಹತ್ಯೆ- ಕೃತ್ಯದ ವೀಡಿಯೋ ಚಿತ್ರೀಕರಣ

ನವದೆಹಲಿ: ಟಾಲಿವುಡ್‌ನ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಹಿಟ್‌ 'ಪುಷ್ಪ' ಸಿನಿಮಾ ನೋಡಿ ಅದರಿಂದ ಪ್ರಭಾವಿತರಾಗಿ ಯುವಕನನ್ನು ಮೂವರು ಆರೋಪಿಗಳು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.ಕೊಲೆಗೀಡಾದ ಯುವಕ...

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...