Connect with us

UDUPI

 ಮೀನುಗಳಿಗೆ ಫಾರ್ಮಾಲಿನ್ ರಾಸಾಯನಿಕ ಬಳಸಿದರೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ..!

Published

on

ಮೀನುಗಳಿಗೆ ಫಾರ್ಮಾಲಿನ್ ರಾಸಾಯನಿಕ ಬಳಸಿದರೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ

 ಉಡುಪಿ: ತಾಜಾ ಮೀನುಗಳಿಗೆ ಹೆಸರುವಾಸಿಯಾದ ನಮ್ಮ ಕರಾವಳಿಯ ಮೀನುಗಾರಿಕಾ ವಲಯದಲ್ಲಿ ಸದ್ಯ ಫಾರ್ಮಾಲಿನ್ ರಾಸಾಯನಿಕ ಭಾರೀ ಸುದ್ದಿಯಾಗುತ್ತಿದೆ.

ಮೀನುಗಳು ಕೆಡದಂತೆ ಫಾರ್ಮಾಲಿನ್ ಬಳಕೆ ಮಾಡಿ, ವ್ಯಾಪಾರ ಮಾಡುತ್ತಿದ್ದವರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದುಉಡುಪಿ ಜಿಲ್ಲಾಡಳಿತ ಫಾರ್ಮಾಲಿನ್ ಬೆರಕೆ ಮಾಡಿ ಅಕ್ರಮ  ವ್ಯಾಪಾರದಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ…ಈ ಕುರಿತ ಒಂದು ವರದಿ ಇಲ್ಲಿದೆ

ಕರಾವಳಿಯ  ಶುಚಿ ರುಚಿಯ ಮೀನಿನ ಖಾದ್ಯ ಅಂದ್ರೆ ದೇಶ ವಿದೇಶಗಳಲ್ಲಿ ಹೆಸರುವಾಸಿ.. ತಾಜಾ ಮೀನಿನಿಂದ ತಯಾರಿಸುವ ಮೀನಿನ ಖಾದ್ಯಗಳನ್ನು ಸವಿಯಲು ಅಂತಾನೇ ಕರಾವಳಿಗೆ ಬರುವ ಆಹಾರ ಪ್ರಿಯರಿದ್ದಾರೆ.. ಆದ್ರೀಗ ಕರಾವಳಿಯ ಮೀನುಗಳು ತಾಜಾ ಮೀನುಗಳೇ ಎನ್ನುವ ಅನುಮಾನ  ಶುರುವಾಗಿದೆ…ಕರಾವಳಿಯಲ್ಲಿ ಮಾರಾಟ ಆಗುತ್ತಿರುವ ಮೀನುಗಳು ಕೆಡದಂತೆ, ಆರೋಗ್ಯಕ್ಕೆ ಹಾನಿಕಾರಕವಾದ ಫಾರ್ಮಾಲಿನ್ ರಾಸಾಯನಿಕ ಬಳಕೆ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡುತ್ತಿದೆ.

ಇದೇ ವಿಚಾರ ಈಗ ಮೀನು ಮಾಂಸ ಪ್ರಿಯರಿಗೆ ಈಗ ಆತಂಕ ಶುರುವಾಗಿದೆ.. ಮೊದಲು ಅಂಜಲ್, ಪಾಂಫ್ರೆಟ್  ಮುಂತಾದ ದುಬಾರಿ ಮೀನುಗಳಿಗೆ ಬೆರಕೆ ಮಾಡುತ್ತಿದ್ದರು ಎನ್ನಲಾಗಿದೆ.

ಈಗ ಚಟ್ನಿ, ನಂಗು, ಬಂಗುಡೆ ಕೊಡ್ಡಾಯಿ  ಜನಸಾಮಾನ್ಯರು ನಿತ್ಯ ಬಳಕೆ ಮಾಡುವ ಮೀನುಗಳಲ್ಲೂ ಫಾರ್ಮಾಲಿನ್ ಬಳಸುವ  ಅನುಮಾನ ಶುರುವಾಗಿದೆ..

ಫಾರ್ಮಾಲಿನ್ ವಿಚಾರದಲ್ಲಿ ಬಾರೀ ಚರ್ಚೆ ಆಗುತ್ತಿರುವಂತೆ ಕೆಲವು ಮೀನು ವ್ಯಾಪಾರಸ್ಥರು, ಇದರಿಂದ ನಿಷ್ಠೆಯಿಂದ ವ್ಯಾಪಾರ ಮಾಡುವ ನಮ್ಮ ವ್ಯಾಪಾರಕ್ಕೆ ಹೊಡೆತ ಬೀಳುತ್ತಿದೆ ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ  ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ..

ಎರಡು ವರ್ಷಗಳ ಹಿಂದೆ ಕೇರಳ, ಗೋವಾ ರಾಜ್ಯದವರು ಇದೇ ಕಾರಣಕ್ಕಾಗಿ ನಮ್ಮ ಕರಾವಳಿಯ ಮೀನುಗಳನ್ನು ನಿಷೇಧಿಸಿದ್ದರು.. ಇದೀಗ ಮತ್ತೆ ಈ ದಂಧೆ ಸಕ್ರಿಯವಾಗಿದೆ ಎನ್ನುವ ಶಂಕೆಯಿದೆ .. ಈ ಬಗ್ಗೆ ಜಿಲ್ಲಾಡಳಿತಕ್ಕೂ ಸಾರ್ವಜನಿಕರು  ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದ್ದು, ಫಾರ್ಮಾಲಿನ್ ಬಳಕೆ ಮಾಡಿ ಅನೈತಿಕ ವ್ಯಾಪಾರದಲ್ಲಿ ತೊಡಗಿದವರ ವಿರುದ್ಧ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಕಾಯ್ದೆ 2006 ರ ಅನ್ವಯ ಕಠಿಣ ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಂದಹಾಗೆ ಫಾರ್ಮಾಲಿನ್ ಬಳಕೆ ಮಾಡಿ ಮಾರಾಟ ಮಾಡುತ್ತಿರುವವರ ವಿರುದ್ಧ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕಿದೆ. ಇಲ್ಲದೇ ಹೋದ್ರೆ ಮೀನೂಟಕ್ಕೆ ಬೇಡಿಕೆ ಕುಸಿದು ಮತ್ಸ್ಯೋದ್ಯಮಕ್ಕೆ ಬಾರೀ ಹೊಡೆತ ಬೀಳುವ ಸಾಧ್ಯತೆ ಇದೆ.. ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ

Click to comment

Leave a Reply

Your email address will not be published. Required fields are marked *

DAKSHINA KANNADA

ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ  ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Published

on

ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

accident

Continue Reading

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

LATEST NEWS

Trending