Connect with us

DAKSHINA KANNADA

ಕಠಿಣ ಲಾಕ್  ಡೌನ್ ಆದೇಶ ಜಾರಿ:ನಗರದ ರೇಶನ್ ಅಂಗಡಿಗಳ ಮುಂದೆ ಸರತಿ ಸಾಲು:ಮದ್ಯ ಖರೀದಿಗಾಗಿ ಮುಗಿಬಿದ್ದ ಮದಿರೆ ಪ್ರಿಯರು:

Published

on

ಮಂಗಳೂರು:ಮಹಾಮಾರಿ ಕೊರೊನಾದ 2 ನೇ ಅಲೆ ವೇಗವಾಗಿ ಹರಡುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಇಂದಿನಿಂದ ಲಾಕ್ ಡೌನನ್ನು ಇನ್ನೂ ಬಿಗಿಗೊಳಿಸಿದೆ.

ಜೊತೆಗೆ ಇಂದು ರಾತ್ರಿಯಿಂದ ಸೋಮವಾರ ಮುಂಜಾನೆ ವರೆಗೆ ವೀಕೆಂಡ್ ಕರ್ಫ್ಯೂ ಕೂಡ ಜಾರಿಗೊಳಿಸಲಾಗಿದೆ. ಬೆಳಗ್ಗಿನ ಅಗತ್ಯ ವಸ್ತುಗಳ ಖರೀದಿಗೆ ಇದ್ದ ಸಮಯವನ್ನು 9 ಗಂಟೆಗೆ ಮಿತಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖರೀದಿಗಾಗಿ ಜನ ಮುಗಿ ಬಿದ್ದಿದ್ದರು. ನಗರದ ಅನೇಕ ರೇಶನ್ ಅಂಗಡಿಗಳ ಬಳಿ ಉದ್ದುದ್ದ ಸರತಿ ಸಾಲುಗಳು ಕಂಡು ಬಂತು.

ನಗರದ ಮದಿರೆ ಪ್ರಿಯರು ಕೂಡ ಮುಂಜಾನೆಯಿಂದಲೇ ಮದ್ಯಕ್ಕಾಗಿ ಸಾರಾಯಿ ಅಂಗಡಿ- ವೈನ್ ಶಾಪ್ ಗಳ ಬಳಿ ತಡಕಾಡುತ್ತಿರುವುದು ಕಂಡು ಬಂತು.

ವೈನ್ ಶಾಪ್ ಅಂಗಡಿಗಳಲ್ಲಿ ಶಟರ್ ಹಾಕಿ ಮದ್ಯ ಮರಾಟ ಮಾಡುತ್ತಿದ್ದು, ಕೊರೊನಾ ಭೀತಿಯಿಲ್ಲದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಇದ್ದ  ಭಾರಿ ಜನ ಜಂಗುಳಿ ಕಂಡು ಬಂತು.

DAKSHINA KANNADA

ವೋಟ್ ಮಾಡಿ, ಊಟ ಮಾಡಿ: ಹೋಟೆಲ್‌ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!

Published

on

ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್‌ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.

ವೋಟ್ ಮಾಡಿ, ಊಟ ಮಾಡಿ:

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್‌ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.

ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್​​ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್‌ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.

SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.

ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್‌ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

DAKSHINA KANNADA

ಕೇರಳದ ಹಕ್ಕಿ ಜ್ವರ…ದಕ್ಷಿಣ ಕನ್ನಡದ ಗಡಿಯಲ್ಲಿ ಕಟ್ಟೆಚ್ಚರ..!

Published

on

ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಸೇಷ ನಿಗಾ ವಹಿಸಲಾಗಿದೆ.

ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್‌ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುತ್ತೇವೆ ಎಂದು ಕರ್ನಾಟಕ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ ಇದು ಕೋವಿಡ್‌ಗಿಂತ ಭೀಕರ ಸೋಂಕು…ಜಗತ್ತಿಗೆ ಹರಡುವ ಆತಂಕದಲ್ಲಿ ತಜ್ಞರು..!

ಏನಿದು ಹಕ್ಕಿ ಜ್ವರ?

ಹೆಚ್​​5ಎನ್​​1 ವೈರಸ್​​ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ.

ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

LATEST NEWS

Trending