ಉಪ್ಪಿನಂಗಡಿ: ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದ ಪ್ರಶ್ನಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ವರದಿಗಾರಿಕೆಗೆ ತೆರಳಿದ್ದ ಮಾಧ್ಯಮ ಪ್ರತಿಯೋರ್ವನನ್ನು
ಕೂಡಿಹಾಕಿ ಹಲ್ಲೆ ನಡೆಸಿ ಬಲವಂತವಾಗಿ ಪ್ರತಿಭಟನೆಯ ವೀಡಿಯೋ ಡಿಲೀಟ್ ಮಾಡಿಸಿದ ಘಟನೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕ್ಕಕ್ಕೇರಿದ್ದು, ಹಿಜಾಬ್ ಕುರಿತಾಗಿ ಮೃಧು ಧೋರಣೆ ತೋರಿಸಲಾಗುತ್ತಿದೆ ಎಂದು ಆರೋಪಿಸಿ ಒಂದು ಗುಂಪಿನ ಪರವಾದ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು,
ಅವರು ಕಾಲೇಜು ವರಾಂಡದಲ್ಲಿ ಗುಂಪಾಗಿ ನಿಂತಿದ್ದರು. ಆಗ ಹಿಜಾಬ್ ಪರವಾದ ಗುಂಪೊಂದು ಅಲ್ಲೇ ಜಮಾಯಿಸಿತ್ತು. ಈ ಬಗ್ಗೆ ಸುದ್ದಿ ತಿಳಿದ ಮಾಧ್ಯಮದವರು ಕಾಲೇಜಿಗೆ ಹೋಗಿದ್ದು,
ಹಿಜಾಬ್ ಪರ ಇರುವ ವಿದ್ಯಾರ್ಥಿಗಳ ಗುಂಪು ಏಕಾಏಕಿ ರಾಜ್ಯ ಟಿವಿಯ ಹಿರಿಯ ಪತ್ರಕರ್ತನನ್ನು ಅಮಾನುಷವಾಗಿ ಕೂಡಿಹಾಕಿ ಹಲ್ಲೆ ನಡೆಸಿ ಬಲವಂತವಾಗಿ ಪ್ರತಿಭಟನೆಯ ವೀಡಿಯೋ ಡಿಲೀಟ್ ಮಾಡಿ ಬೆದರಿಕೆ ಹಾಕಿದ್ದಾರೆ.
ಈ ಘಟನೆ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದರೂ ಅಲ್ಲೇ ಇದ್ದ ಪೊಲೀಸರು ಸ್ಥಳಕ್ಕೆ ತೆರಳದೇ ಮೌನವಾಗಿದ್ದರು.
ಪತ್ರಕರ್ತರ ಮೇಲಿನ ಹಲ್ಲೆ ಖಂಡನೀಯ :
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರಿಗೆ ದಿಗ್ಬಂಧನ ಹಾಕಿ ವಿಡಿಯೋ ತುಣುಕುಗಳನ್ನು ಡಿಲೀಟ್ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.
ಕಾಲೇಜಿಗೆ ಪತ್ರಕರ್ತರು ವಾಸ್ತವ ವರದಿ ಮಾಡಲು ತೆರಳಿದಾಗ ವಿದ್ಯಾರ್ಥಿಗಳು ದುವರ್ತನೆ ತೋರಿಸಿದ್ದಾರೆ. ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೆಗೊಳ್ಕಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರ ಪತ್ರಕರ್ತರಿಗೆ ಸೂಕ್ತ ಭದ್ರತೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.
ಘಟನಾವಳಿಗೆ ಸಂಬಂಧಿಸಿದಂತೆ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ತಪ್ಪಿತಸ್ಥತರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ನಾಳೆ ಮನವಿ: ಪತ್ರಕರ್ತರ ಹಲ್ಲೆಯನ್ನು ಖಂಡಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಜೂ. 3ರಂದು ಬೆಳಗ್ಗೆ 10.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು.
ಕಡಬ ತಾಲೂಕು ಪತ್ರಕರ್ತರ ಸಂಘದಿಂದಲ್ಲೂ ತೀವ್ರ ಖಂಡನೆ :
ಉಪ್ಪಿನಂಗಡಿಯಲ್ಲಿ ಪತ್ರಕರ್ತರಿಗೆ ಹಲ್ಲೆ ನಡೆಸಿದನ್ನು ಕಡಬ ತಾಲೂಕು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದ್ದು ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜೊತೆಗೆ ಈ ಬಗ್ಗೆ ಪುತ್ತೂರು ಡಿವೈಎಸ್ಪಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತುಗೊಳಿಸಿದ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ಗುಂಪುಗಾರಿಕೆ ಮತ್ತು ಕೆಲ ಘಟನೆಗಳು ನಡೆದಿದ್ದು ಇದರ ವರದಿಗಾಗಿ ಕಾಲೇಜಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳನ್ನು ಹಿಜಾಬ್ ಪರ ಮುಂಡ ವಿದ್ಯಾರ್ಥಿಗಳು ಕೊಣೆಯೊಳಗೆ ಕೂಡಿ ಹಾಕಿ ದಿಗ್ಧಂಧನ ವಿಧಿಸಿದ್ದಾರೆ,
ಅಲ್ಲದೆ ಕ್ಯಾಮರವನ್ನು ಬಲವಂತವಾಗಿ ಕಸಿದು ಮಾಧ್ಯಮದವರು ಮಾಡಿರುವ ವೀಡಿಯೋಗಳನ್ನು ಡಿಲಿಟ್ ಮಾಡಿದ್ದಾರೆ.
ಇದು ಪತ್ರಿಕಾ ಸ್ವಾತಂತ್ರ್ಯದ ಹರಣವಾಗಿದ್ದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಈ ರೀತಿಯ ಅನ್ಯಾಯವನ್ನು ಕಡಬ ತಾಲೂಕು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.
ಇಂತಹ ಮೂಲಭೂತವಾದಿ ಪುಂಡು ಪೋಕರಿಗಳ ವಿರುದ್ಧ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು ಅನ್ಯಾಯಕ್ಕೊಳಗಾದ ಪತ್ರಕರ್ತರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ ಎಂದು ಸಂಘ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.