Connect with us

LATEST NEWS

ಅತಿಥಿ ಶಿಕ್ಷಕರ ನಡುವಿನ ವೈಮನಸ್ಸಿಗೆ ಬಲಿಯಾದ ಶಿಕ್ಷಕಿಯ ಮುದ್ದು ಮಗ-ಹಲ್ಲೆ ನಡೆಸಿ ಬಾಲಕನನ್ನು ಮೇಷ್ಟ್ರುಕೊಂದೇ ಬಿಟ್ರು…

Published

on

ಗದಗ: ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯ ಮೇಲೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿ ಬಳಿಕ ಶಾಲೆಯ ಒಂದನೇ ಮಹಡಿಯಿಂದ ಬಾಲಕನನ್ನು ಎತ್ತಿ ಕೆಳಕ್ಕೆ ಎಸೆದು ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಹದ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಹದ್ಲಿ ಗ್ರಾಮದ ಭರತ್ ಬಾರಕೇರ್ (10) ಕೊಲೆಯಾದ ವಿದ್ಯಾರ್ಥಿ.

ಮೃತಪಟ್ಟ ಬಾಲಕ

ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಕೊಲೆ ಕೃತ್ಯ ನಡೆಸಿದ ಆರೋಪಿ. ಹದ್ಲಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಅದೇ ಗ್ರಾಮದ ಮುತ್ತಪ್ಪ ಹಡಗಲಿ ಸೋಮವಾರ ಬೆಳಿಗ್ಗೆ 11ರ ಸುಮಾರಿಗೆ ಅತಿಥಿ ಶಿಕ್ಷಕಿ ಗೀತಾ ಅವರ ಮಗ ಭರತ್‌ ಮೇಲೆ ಕಬ್ಬಿಣದ ಸಲಾಕೆಯಿಂದ ಮನಬಂದಂತೆ ಹಲ್ಲೆ ನಡೆಸಿದ್ದಾನೆ.

ಬಳಿಕ ಶಾಲೆಯ ಒಂದನೇ ಮಹಡಿಯಿಂದ ಬಾಲಕನನ್ನು ಎತ್ತಿ ಕೆಳಕ್ಕೆ ಎಸೆದಿದ್ದಾನೆ. ಈ ವೇಳೆ ಮಗನನ್ನು ಬಿಡಿಸಿಕೊಳ್ಳಲು ಬಂದ ತಾಯಿ ಗೀತಾ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಡೆಯಲು ಹೋದ ಶಾಲೆಯ ಮತ್ತೊಬ್ಬ ಶಿಕ್ಷಕ ಸಂಗನಗೌಡ ಪಾಟೀಲ ಅವರಿಗೂ ಹೊಡೆದಿದ್ದಾನೆ.

ಆರೋಪಿ ಮುತ್ತಪ್ಪ ಹಡಗಲಿ

ಗಾಯಾಳು ಗೀತಾ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸಂಗನಗೌಡ ಪಾಟೀಲ ನರಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದರು. ಶಾಲೆ ತುಂಬೆಲ್ಲಾ ರಕ್ತದ ಕಲೆಗಳಾಗಿದ್ದವು.

ಬಳಿಕ ಮುಖ್ಯ ಶಿಕ್ಷಕ ಬಿ.ಎಸ್.ಯಾವಗಲ್‌ ಅಂಬುಲೆನ್ಸ್‌ನಲ್ಲಿ ತಾಯಿ ಮಗುವನ್ನು ನರಗುಂದ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದರಿಂದ ಇಬ್ಬರನ್ನೂ ಹುಬ್ಬಳ್ಳಿ ಕಿಮ್ಸ್‌ಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಮಾರ್ಗಮಧ್ಯೆ ಬಾಲಕ ಭರತ್‌ ಮೃತ ಪಟ್ಟಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರೋಪಿ ಮುತ್ತಪ್ಪ ತನ್ನ ಮೇಲೂ ಹಲ್ಲೆಗೆ ಮುಂದಾಗಿದ್ದು, ತಾನು ಹೇಗೋ ಪಾರಾದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ಯಾವಗಲ್ ತಿಳಿಸಿದ್ದಾರೆ. ಘಟನೆ ನಡೆದಾಗ ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಓಡಿದ್ದಾರೆ.

ಬಳಿಕ ಶಾಲೆಯತ್ತ ಬಂದ ಪೋಷಕರು ಘಟನೆ ಕುರಿತು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಘಟನೆಯ ಬಳಿಕ ಆರೋಪಿ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಪೊಲೀಸೆರು ಶೋಧ ನಡೆಸುತ್ತಿದ್ದಾರೆ.

ಇದೀಗ ಪೊಲೀಸರು ಶಾಲೆಯಲ್ಲಿಯೇ ಬೀಡು ಬಿಟ್ಟಿದ್ದು, ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಎಸ್‌ಪಿ ಶಿವಪ್ರಕಾಶ್ ದೇವರಾಜು ಮತ್ತು ಇತರ ಅಧಿಕಾರಿಗಗಳು ಸ್ಥಳಕ್ಕೆ ಭೇಟಿ ನೀಡಿದ್ದರು, ಘಟನೆಗೆ ಕಾರಣ ತಿಳಿದು ಬಂದಿಲ್ಲ.

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending