Friday, July 1, 2022

ಅಪಘಾತವನ್ನು ಕಣ್ಣಾರೆ ಕಂಡ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ತೆಲಂಗಾಣ: ರಸ್ತೆ ಅಪಘಾತವೊಂದನ್ನು ಕಣ್ಣಾರೆ ಕಂಡು ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತೆಲಂಗಾಣದ ವಿಕಾರಾಬಾದ್​ನಲ್ಲಿ ನಡೆದಿದೆ.


ವಿಕಾರಾಬಾದ್​ನ ಬಶೀರಾಬಾದ್​ನ ವಲಯದ ನಿವಾಸಿಯಾದ ಸುದರ್ಶನ್ ​​ಗೌಡ್ ಎಂಬುವವರ​ ಪುತ್ರ ಯಶ್ವಂತ್​ ಗೌಡ್​​ (16) ಮೃತಪಟ್ಟ ವಿದ್ಯಾರ್ಥಿ.

ಯಶ್ವಂತ್​ ಗೌಡ್ ವಿಕಾರಾಬಾದ್​ನ ಖಾಸಗಿ ಕಾಲೇಜೊಂದರಲ್ಲಿ ಮೊದಲ ವರ್ಷದ ಇಂಟರ್​ಮೀಡಿಯೇಟ್ ಓದುತ್ತಿದ್ದ ಎಂದು ತಿಳಿದುಬಂದಿದೆ.
ನಿನ್ನೆ ಬಶೀರಾಬಾದ್​​ನಿಂದ ಜೀವಾಂಗಿ ಎಂಬ ಗ್ರಾಮದಿಂದ ಬೈಕ್​ನಲ್ಲಿ ಬರುತ್ತಿದ್ದ ವ್ಯಕ್ತಿಯೋರ್ವ ಬೈಕ್ ಸ್ಕಿಡ್ ಆಗಿ ಉರುಳಿಬಿದ್ದಿದ್ದಾನೆ.

ಇದನ್ನು ನೋಡಿದ ಯಶ್ವಂತ್​ ಗೌಡ ಆಘಾತಕ್ಕೆ ಒಳಗಾಗಿ ಸ್ಥಳದಲ್ಲಿಯೇ ಮೂರ್ಛೆ ತಪ್ಪಿ ಬಿದ್ದಿದ್ದಾನೆ.

ಸ್ಥಳೀಯರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಯಶ್ವಂತ್ ಮೃತಪಟ್ಟಿದ್ದಾನೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...