Connect with us

    LATEST NEWS

    ಕಾರ್ಕಳದಲ್ಲಿ ಬೈಕ್ -ಪಿಕ್ ಅಪ್ ಡಿಕ್ಕಿಯಲ್ಲಿ ಜೀವಕಳಕೊಂಡ ಕಾಲೇಜು ವಿದ್ಯಾರ್ಥಿ..! 

    Published

    on

    ಕಾರ್ಕಳ : ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ .

    ಮೆನನ್ (20 )ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.

    ಕಾರ್ಕಳ ದಿಂದ ಬೆಳ್ವಾಯಿ ಕಡೆಗೆ ಸಾಗುತಿದ್ದ ಪಿಕ್ ಅಪ್ ಗೆ ಎದುರಿನಿಂದ ಬರುತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ನೆಲಕ್ಕೆಸೆಯಲ್ಪಟ್ಟಿದ್ದು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

    ರೆಂಜಾಳದ ಮೆನನ್ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವ್ಯಾಸಂಗ ಮಾಡುತಿದ್ದರು ಎನ್ನಲಾಗಿದೆ
    ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    LATEST NEWS

    ಸೈಬರ್ ಕ್ರೈಂ ನಲ್ಲಿ ಭಾಗಿ ಆರೋಪ : ಶ್ರೀಲಂಕಾದಲ್ಲಿ 60 ಭಾರತೀಯರ ಬಂಧನ

    Published

    on

    ಮಂಗಳೂರು / ಕೊಲಂಬೊ : ಆನ್‌ಲೈನ್ ಹಣಕಾಸು ವಂಚನೆಯಲ್ಲಿ ಭಾಗಿಯಾಗಿರುವ ಆರೋಪದಡಿ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಬಂಧಿಸಿದೆ.

    ಕೊಲಂಬೊದ ಉಪನಗರಗಳಾದ ಮಡಿವೇಲಾ ಮತ್ತು ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಿಂದ ಗುರುವಾರ(ಜೂ.28) ಭಾರತೀಯರನ್ನು ಬಂಧಿಸಲಾಗಿದೆ.


    ಸಿಐಡಿ ಮಡಿವೇಲಾ, ಬಟ್ಟರಮುಲ್ಲಾ ಮತ್ತು ನೆಗೊಂಬೊ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, 135 ಮೊಬೈಲ್ ಫೋನ್‌ಗಳು ಮತ್ತು 57 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರ ಎಸ್‌ಎಸ್‌ಪಿ ನಿಹಾಲ್ ತಲ್ದುವಾ ಮಾಹಿತಿ ನೀಡಿದ್ದಾರೆ.

    ಸಾಮಾಜಿಕ ಮಾಧ್ಯಮದಲ್ಲಿ ಸಂವಾದ ನಡೆಸಿ ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ಗ್ರೂಪ್‌ ಮೂಲಕ ಆಮಿಷವೊಡ್ಡಿದ್ದು, ಆಮಿಷಕ್ಕೆ ತುತ್ತಾಗಿ ವಂಚನೆಗೆ ಒಳಗಾದ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಲ್ದುವಾ ತಿಳಿಸಿದ್ದಾರೆ.

    ಇದನ್ನೂ ಓದಿ: T20 ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಹಿಟ್ ಮ್ಯಾನ್

    ಬಂಧಿತ ಆರೋಪಿಗಳು ದುಬೈ ಮತ್ತು ಅಫ್ಘಾನಿಸ್ತಾನದಲ್ಲಿ ಅಂತಾರಾಷ್ಟ್ರೀಯ ಸಂಪರ್ಕಗಳನ್ನು ಹೊಂದಿದ್ದು, ಇವರೆಲ್ಲ ಹಣಕಾಸು ವಂಚನೆ, ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಗ್ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ.
    ಸ್ಥಳೀಯರು ಹಾಗೂ ವಿದೇಶಿಯರು ಸಹ ಇವರ ಮೋಸದ ಜಾಲಕ್ಕೆ ಬಿದ್ದಿರುವ ಸಾಧ್ಯತೆ ಇದೆ. ತನಿಖೆ ಪ್ರಗತಿಯಲ್ಲಿದೆ ಎಂದು ನಿಹಾಲ್ ತಲ್ದುವಾ ಅವರು ಮಾಹಿತಿ ನೀಡಿದ್ದಾರೆ.

     

    Continue Reading

    LATEST NEWS

    T20 ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಹಿಟ್ ಮ್ಯಾನ್

    Published

    on

    ಮಂಗಳೂರು/ ನವದೆಹಲಿ : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ನಾಯಕ ಹಿಟ್ ಮ್ಯಾನ್  ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ಅಮೋಘ ಅರ್ಧ ಶತಕ ಬಾರಿಸಿದ್ದಾರೆ. ಈ ಮೂಲಕ ಭಾರತ ತಂಡದ ನಾಯಕನಾಗಿ 5,000 ರನ್ ಗಳಿಸುವ ಮೂಲಕ ಸಾಧನೆ ಮೆರೆದಿದ್ದಾರೆ. ಅಲ್ಲದೇ, ಈ ಸಾಧನೆ ಮಾಡಿದ ಭಾರತದ 5ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಅಜರುದ್ದೀನ್, ಸೌರವ್ ಗಂಗೂಲಿ ಈ ದಾಖಲೆ ಮಾಡಿದ್ದರು.


    ಬಾಬರ್ ಅಜಮ್ ದಾಖಲೆ ಉಡೀಸ್ :

    ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ನಾಕೌಟ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಎಂದೆನಿಸಿಕೊಂಡಿದ್ದಾರೆ. ಟಿ20 ವಿಶ್ವಕಪ್ 2024 ರ ಭಾಗವಾಗಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್-2 ಅನ್ನು 68 ರನ್‌ಗಳ ದೊಡ್ಡ ಅಂತರದಿಂದ ಗೆದ್ದು ಫೈನಲ್​ಗೆ ಲಗ್ಗೆ ಇಟ್ಟಿದೆ.

    ಈ ಪಂದ್ಯದಲ್ಲಿ ರೋಹಿತ್ ಶರ್ಮಾ 39 ಎಸೆತಗಳಲ್ಲಿ, 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 57 ರನ್ ಸಿಡಿಸಿ ಅರ್ಧಶತಕ ಗಳಿಸಿದ್ದರು. ಆ ಮೂಲಕ ಟಿ20 ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಭಾರತದ ಮೊದಲ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

    ಅತಿ ಹೆಚ್ಚು ಗೆಲುವು ದಾಖಲಿಸಿದ ನಾಯಕ :


    ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಗೆಲುವು ದಾಖಲಿಸಿದ ನಾಯಕನಾಗಿಯೂ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಬಾಬರ್ ಅಜಮ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಇದುವರೆಗೆ 61 ಪಂದ್ಯಗಳ ನಾಯಕರಾಗಿರುವ ರೋಹಿತ್ ಶರ್ಮಾ ಭಾರತಕ್ಕೆ 49 ಪಂದ್ಯಗಳನ್ನು ಗೆದ್ದಿದ್ದಾರೆ. ಮತ್ತೊಂದೆಡೆ, ಬಾಬರ್ ಅಜಮ್ ಪಾಕಿಸ್ತಾನಕ್ಕೆ 85 ಪಂದ್ಯಗಳಲ್ಲಿ 48 ಗೆಲುವು ದಾಖಲಿಸಿದ್ದರು.


    ಭಾರತ ತಂಡದ ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 5 ಸಾವಿರ ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನೂ ಬರೆದಿದ್ದಾರೆ. ವಿರಾಟ ಕೊಹ್ಲಿ 12,883 ರನ್ ಗಳೊಂದಿಗೆ ಟಾಪ್ ನಲ್ಲಿದ್ದಾರೆ. ಧೋನಿ 11,207 ರನ್, ಮೊಹಮ್ಮದ್ ಅಜರುದ್ದೀನ್ 8,095 ರನ್, ಸೌರವ್ ಗಂಗೂಲಿ 7,643 ರನ್ ಗಳೊಂದಿಗೆ ಟಾಪ್ 5ರಲ್ಲಿ ಸ್ಥಾನ ಪಡೆದಿದ್ದಾರೆ.

    ಇದನ್ನೂ ಓದಿ : WATCH : ಟ್ರಾಫಿಕ್ ಜಾಮ್ ನಿಂದ ಬೇಸತ್ತು ‘ಬಾಹುಬಲಿ’ಯಾದ ಬೈಕ್ ಸವಾರ; ವೀಡಿಯೋ ವೈರಲ್

    ಅತ್ಯಧಿಕ ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಆಟಗಾರ :


    ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ. ಟಿ20 ವಿಶ್ವಕಪ್ ನಲ್ಲಿ ಇದುವರೆಗೂ ರೋಹಿತ್ ಶರ್ಮಾ 50 ಸಿಕ್ಸರ್ ಸಿಡಿಸಿದ್ದಾರೆ. 63 ಸಿಕ್ಸರ್ ಗಳೊಂದಿಗೆ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

    Continue Reading

    LATEST NEWS

    ವಿಮಾನ ಶೌಚಾಲಯದಲ್ಲಿ ಸ್ಮೋಕಿಂಗ್..! ಯುವಕ ಮುಂಬೈ ಪೊಲೀಸರ ವಶ

    Published

    on

    ಮುಂಬೈ/ಮಂಗಳೂರು: ದೆಹಲಿಯಿಂದ ಮುಂಬೈಗೆ ತೆರಳುವ ವಿಮಾನದಲ್ಲಿ ಪ್ರಯಾಣಿಕನೋರ್ವ ಧೂಮಪಾನ ಮಾಡಿ ಸಿಕ್ಕಿ ಬಿದ್ದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ದೆಹಲಿಯಿಂದ ಮುಂಬೈಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬ ಶೌಚಾಲಯದಲ್ಲಿ ಸಿಗರೇಟ್‌ ಸೇದಿದ್ದಾನೆ. ಆದರೆ ಸ್ಮೋಕ್ ಸೆನ್ಸಾರ್ ಮೂಲಕ ಆತ ಧೂಮಪಾನ ಮಾಡಿರುವುದು ಸಿಬಂದಿಗಳಿಗೆ ಸೂಚನೆ ಸಿಕ್ಕಿದೆ. ಆತ ಶೌಚಾಲಯದಿಂದ ಹೊರ ಬರುತ್ತಿದ್ದಂತೆ ಕೂಡಲೇ ಕ್ಯಾಬಿನ್ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬೆಂಕಿ ಕಡ್ಡಿ ಹಾಗೂ ಸಿಗರೇಟ್ ತುಂಡು ಪತ್ತೆಯಾಗಿದೆ.

    ಕೂಡಲೇ ಕ್ಯಾಬಿನ್ ಸಿಬಂದಿಗಳು ಮೇಲಾಧಿಕಾರಿಗಳಿಗೆ ದೂರು ನೀಡಿದ್ಧಾರೆ. ಇದಾದ ಬಳಿಕ ಮುಂಬೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಅಗುತ್ತಿದ್ದಂತೆಯೇ ಮೇಲಾಧಿಕಾರಿಗಳು ಆತನನ್ನು ವಿಚಾರಣೆ ನಡೆಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

    Read More..; ದೆಹಲಿ ವಿಮಾನ ನಿಲ್ದಾಣದಲ್ಲಿ ದುರಂ*ತ : ಟರ್ಮಿನಲ್ 1 ರ ಮೇಲ್ಛಾವಣಿ ಕುಸಿದು ಓರ್ವ ಸಾ*ವು; ಹಲವರಿಗೆ ಗಾ*ಯ

    ಪ್ರಕರಣಕ್ಕೆ ಸಂಬಂಧಿಸಿದಂತೆ  ಉತ್ತರ ಪ್ರದೇಶದ ಖಲೀಲ್ ಕಾಜಮ್ಮುಲ್ ಖಾನ್ ನನ್ನು ಮುಂಬೈನ ಸಹಾರ ಪೊಲೀಸ್ ಠಾಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    Continue Reading

    LATEST NEWS

    Trending