ತೆಂಗಿನ ಕಾಯಿ ತೆಗೆಯಲು ಹೋಗಿ ಹೊಳೆಗೆ ಬಿದ್ದು ವಿದ್ಯಾರ್ಥಿ ದಾರುಣ ಸಾವು..
ತೆಂಗಿನ ಕಾಯಿ ತೆಗೆಯಲು ಹೋಗಿ ಹೊಳೆಗೆ ಬಿದ್ದು ವಿದ್ಯಾರ್ಥಿ ದಾರುಣ ಸಾವು..
ಭಟ್ಕಳ: ತೆಂಗಿನ ಕಾಯಿಯನ್ನು ತೆಗೆಯಲು ಹೋಗಿ ಹೊಳೆಗೆ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉತ್ರರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಅಹಮದ್ ರುವೇಝ್ ಎಂದು ಗುರುತಿಸಲಾಗಿದ್ದು, ಇಲ್ಲಿನ ಅನಂದಾಶ್ರಮ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿದ್ದ.
ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಬೈಹೊಳೆ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮಗ್ದೂಮ್ ಕಾಲೋನಿಯ ನಿವಾಸಿ ರಿಯಾಝ್ ಕರೀಮಿಯವರ ಪುತ್ರನಾಗಿರುವ ಅಹಮದ್ ಮುಗ್ಲಿಹೊಂಡದಲ್ಲಿರುವ ತನ್ನ ಅಜ್ಜಿಯ ಮನೆಗೆ ಹೋಗಿದ್ದ ಎನ್ನಲಾಗಿದ್ದು, ಹೊಳೆಯಲ್ಲಿ ಬಿದ್ದಿರುವ ತೆಂಗಿನ ಕಾಯಿಯನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದಾಗ ಆಯ ತಪ್ಪಿ ಈತ ಹೊಳೆಗೆ ಬಿದ್ದಿದ್ದ.
ಕೂಡಲೇ ಸ್ಥಳೀಯರ ನೆರವಿನಿಂದ ಹೊಳೆಯಿಂದ ಹೊರತೆಗೆದು ಆಸ್ಪತ್ರೆ ಸೇರಿಸಿದರೂ ಅದಾಗಲೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು ಎನ್ನಲಾಗಿದೆ.
LATEST NEWS
ರೈಲ್ವೇ ನಿಲ್ದಾಣದಲ್ಲಿ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್ಪಿಎಫ್ ಮಹಿಳಾ ಸಿಬ್ಬಂದಿ
ಉಡುಪಿ: ಮಂಗಳೂರು-ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತಲು ಯತ್ನಿಸಿ ಬಿದ್ದ ಮಹಿಳೆಯೊಬ್ಬರನ್ನು ಶುಕ್ರವಾರ ಬೆಳಗ್ಗೆ ಉಡುಪಿ ರೈಲು ನಿಲ್ದಾಣದಲ್ಲಿ ರೈಲ್ವೇ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಕ್ಷಿಪ್ರ ಹಾಗೂ ತಕ್ಷಣ ರಕ್ಷಿಸಿದ್ದಾರೆ.
ರೈಲು ಚಲಿಸಲು ಪ್ರಾರಂಭಿಸುತ್ತಿದ್ದಂತೆ ಮಹಿಳೆ ತನ್ನ ಸಮತೋಲನವನ್ನು ಕಳೆದುಕೊಂಡರು, ಆದರೆ ಅಧಿಕಾರಿ ಅಪರ್ಣಾ ನೇತೃತ್ವದ ಆರ್ಪಿಎಫ್ ತಂಡದ ಸಮಯೋಚಿತ ಮಧ್ಯಪ್ರವೇಶವು ಸಂಭಾವ್ಯ ದುರಂತವನ್ನು ತಡೆಯಿತು.
ಸಿಬ್ಬಂದಿಯ ತ್ವರಿತ ಸ್ಪಂದನೆಯನ್ನು ನಿಲ್ದಾಣದಲ್ಲಿ ನೋಡುಗರು ಮತ್ತು ಪ್ರಯಾಣಿಕರು ಶ್ಲಾಘಿಸಿದರು, ಅವರು ಅವರ ಜಾಗರೂಕತೆ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದರು.
LATEST NEWS
ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನೆಲ್ ಹ್ಯಾಕ್
ನವದೆಹಲಿ: ಸುಪ್ರೀಂ ಕೋರ್ಟ್ನ ಯೂಟ್ಯೂಬ್ ಚಾನೆಲ್ ಹ್ಯಾಕ್ ಆಗಿದೆ. ಯುಎಸ್ ಮೂಲದ ಕಂಪನಿ ರಿಪ್ಪಲ್ ಲ್ಯಾಬ್ಸ್ ಅಭಿವೃದ್ಧಿಪಡಿಸಿದ ಕ್ರಿಪ್ಟೋಕರೆನ್ಸಿಯನ್ನು ಪ್ರಚಾರ ಮಾಡುವ ವೀಡಿಯೋಗಳು ಚಾನೆಲ್ ನಲ್ಲಿ ಬರುತ್ತಿವೆ.
‘ಬ್ರ್ಯಾಡ್ ಗಾರ್ಲಿಂಗ್ ಹೌಸ್: ರಿಪ್ಲೆ ರೆಸ್ಪೋಂಡ್ ಟು ದಿ SEC’s 2 ಮಿಲಿಯನ್ ಡಾಲರ್ ಫೈನ್! XRP PRICE PREDICTION ಶೀರ್ಷಿಕೆಯೊಂದಿಗೆ ಖಾಲಿ ವೀಡಿಯೋ ಪ್ರಸ್ತುತ ಹ್ಯಾಕ್ ಮಾಡಿದ ಚಾನಲ್ನಲ್ಲಿ ಲೈವ್ ಆಗಿದೆ.
ಸಾಂವಿಧಾನಿಕ ಪೀಠಗಳ ಮುಂದೆ ಪಟ್ಟಿ ಮಾಡಲಾದ ಪ್ರಕರಣಗಳು ಮತ್ತು ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿರುವ ವಿಷಯಗಳ ನೇರ ವಿಚಾರಣೆಗಳನ್ನು ಸ್ಟ್ರೀಮ್ ಮಾಡಲು ಸುಪ್ರೀಂ ಕೋರ್ಟ್ YouTube ಅನ್ನು ಬಳಸುತ್ತಿದೆ.
FILM
ಸುಚಿತ್ರ ಥಿಯೇಟರ್ ನಲ್ಲಿ“ ಕಲ್ಜಿಗ“ ಸಿನಿಮಾ ಬಿಡುಗಡೆ
ಮಂಗಳೂರು: ಮಲ್ಟಿಫ್ಲೆಕ್ಸ್ ನಲ್ಲಿ ಬಿಡುಗಡೆಗೊಂಡು ಜನಮೆಚ್ಚುಗೆ ಪಡೆಯುತ್ತಿರುವ ”ಕಲ್ಜಿಗ“ ಸಿನಿಮಾ ನಗರದ ಸುಚಿತ್ರ ಥಿಯೇಟರ್ ನಲ್ಲಿ ಶುಕ್ರವಾರ ಮುಂಜಾನೆ ಬಿಡುಗಡೆಗೊಂಡಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಬಹಳ ಸಮಯದ ಬಳಿಕ ಸುಚಿತ್ರ ಥಿಯೇಟರ್ ನಲ್ಲಿ ತುಳುನಾಡ ಕಲಾವಿದರ ಸಿನಿಮಾ ಬಿಡುಗಡೆಯಾಗುತ್ತಿದೆ. ಇನ್ನು ಮುಂದೆಯೂ ಇಲ್ಲಿ ತುಳು ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ಮಾಲಕರು ಹೇಳಿದ್ದಾರೆ. ಅವರಿಗೆ ಅಭಿನಂದನೆಗಳು” ಎಂದರು.
ಡಾ.ದೇವದಾಸ್ ಕಾಪಿಕಾಡ್ ಮಾತಾಡಿ, “ತುಳು ಸಿನಿಮಾಗಳಿಗೆ ಸುಚಿತ್ರ ಥಿಯೇಟರ್ ನಲ್ಲಿ ಅವಕಾಶ ನೀಡುತ್ತಿಲ್ಲ ಎಂಬ ಬೇಸರ ಇತ್ತು. ಅದು ನಿವಾರಣೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಇಲ್ಲಿಗೆ ಬಂದು ಸಿನಿಮಾ ವೀಕ್ಷಿಸಿ ಕಲ್ಜಿಗ ಸಿನಿಮಾವನ್ನು ಗೆಲ್ಲಿಸಿ” ಎಂದರು.
ಪ್ರಕಾಶ್ ಪಾಂಡೇಶ್ವರ್ ಮಾತಾಡಿ, “ಕಲ್ಜಿಗ ಸಿನಿಮಾ ನಾನು ನೋಡಿದ್ದೇನೆ. ಸಿನಿಮಾದಲ್ಲಿ ನಟಿಸಿರುವ ಎಲ್ಲರೂ ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು.
ವೇದಿಕೆಯಲ್ಲಿ ನಟ ಅರ್ಜುನ್ ಕಾಪಿಕಾಡ್, ಥಿಯೇಟರ್ ಮಾಲಕ ಪ್ರಶಾಂತ್, ನಿರ್ಮಾಪಕ ಶರತ್ ಕುಮಾರ್ ಎ.ಕೆ. ,ಶರ್ಮಿಳಾ ಕಾಪಿಕಾಡ್, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ಜ್ಯೋತಿಷ್ ಶೆಟ್ಟಿ, ಭೋಜರಾಜ್ ವಾಮಂಜೂರ್, ಅನೂಪ್ ಸಾಗರ್, ಕಾವ್ಯ ಅರ್ಜುನ್ ಕಾಪಿಕಾಡ್, ಸದಾಶಿವ ಅಮೀನ್, ರಂಜನ್ ಬೋಳೂರು, ನಿರ್ದೇಶಕ ಸುಮನ್ ಸುವರ್ಣ, ಮಾಧವ ಶೆಟ್ಟಿ ಬಾಳ ಉದಯ ಆಚಾರ್ಯ, ಆನಂದ ಬಂಗೇರ, ಶನಿಲ್ ಗುರು, ಶಾಂತಾರಾಮ್ ಮತ್ತಿತರರು ಉಪಸ್ಥಿತರಿದ್ದರು