Connect with us

  LATEST NEWS

  ಹಾಸ್ಟೆಲ್‌ನಲ್ಲಿ ಹೊಡೆದಾಟ: 2 ಪೊಲೀಸರಿಗೆ ಗಾಯ-7 ದಿನದೊಳಗೆ ತೆರವುಗೊಳಿಸುವಂತೆ ಶಾಸಕರ ಸೂಚನೆ

  Published

  on

  ಮಂಗಳೂರು: ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟಕ್ಕೆ ಕಾರಣವಾಗಿರುವ ಹಾಸ್ಟೆಲ್‌ ಸ್ಥಳಾಂತರಕ್ಕೆ ಸ್ಥಳೀಯರು ಇದೀಗ ಪಟ್ಟು ಹಿಡಿದಿದ್ದು, 7 ದಿನದೊಳಗೆ ಹಾಸ್ಟೆಲ್‌ ಸ್ಥಳಾಂತರಿಸುವಂತೆ ಶಾಸಕರು ಸೂಚನೆ ನೀಡಿದ್ದು, ಇಲ್ಲದಿದ್ದರೆ ನಾನೇ ಮುಂದೆ ನಿಂತು ಕ್ರಮ ಕೈಗೊಳ್ಳುವುದಾಗಿ ಸಂಸ್ಥೆಯ ಮುಖ್ಯಸ್ಥರಿಗೆ ಎಚ್ಚರಿಸಿದ್ದಾರೆ.


  ನಿನ್ನೆ ರಾತ್ರಿ ಮಂಗಳೂರಿನ ಗುಜ್ಜರಕೆರೆಯ ಮಾರ್ಗನ್ಸ್‌ಗೇಟ್ ಬಳಿ ಇರುವ ನಗರದ ಖಾಸಗಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ವಾಸ ಮಾಡುತ್ತಿರುವ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಹೊಡೆದಾಟ ನಡೆದಿತ್ತು. ಈ ವೇಳೆ ಇಲ್ಲಿಗೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಮತ್ತು ಪೊಲೀಸರು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಒಟ್ಟು ಐದು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡರೆ, ಗಾಯಗೊಂಡ ಇಬ್ಬರು ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ.
  ಹಾಸ್ಟೆಲ್‌ನಲ್ಲಿ ನಿರಂತರವಾಗಿ ವಿದ್ಯಾರ್ಥಿಗಳ ಹೊಡೆದಾಟ ನಡೆಯುತ್ತಿರುವುದು ಹಾಗೂ ಸ್ಥಳೀಯರಿಗೆ ಇದರಿಂದ ಕಿರಿಕಿರಿ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಹಾಸ್ಟೆಲನ್ನು ಕೂಡಲೇ ಮುಚ್ಚುವಂತೆ ಆಗ್ರಹಿಸಿ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

  ಘಟನಾ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗು ಬಂದೋಬಸ್ತ್‌ ಏರ್ಪಡಿಸಿದ್ದರು. ಇಲ್ಲಿನ ಹಾಸ್ಟೆಲ್‌ನಲ್ಲಿ ನಿರಂತರವಾಗಿ ಹೊಡೆದಾಟ ನಡೆಯುತ್ತಿದ್ದು, ವಸತಿ ಪರಿಸರದಲ್ಲಿನ ಮಕ್ಕಳಿಗೆ, ಹೆಂಗಸರಿಗೆ ಭಾರೀ ಸಮಸ್ಯೆ ಆಗುತ್ತಿದೆ ಎಂದು ಕಮಿಷನರ್ ಅವರಿಗೆ ಸ್ಥಳೀಯರು ಮನವರಿಕೆ ಮಾಡಿದರು. ಇಲ್ಲಿನ ಹುಡುಗರು ಸ್ಥಳೀಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದು, ದೀಪಾವಳಿ ಸಮಯದಲ್ಲಿ ಮಧ್ಯರಾತ್ರಿಯವರೆಗೂ ಪಟಾಕಿ ಸಿಡಿಸಿ ಸ್ಥಳೀಯರಿಗೆ ಕಿರಿಕಿರಿ ಮಾಡಿದ್ದಾರೆ.

  ಘಟನಾ ಸ್ಥಳಕ್ಕೆ ಹಿಂದು ಮುಖಂಡರಾದ ಶರಣ್ ಪಂಪ್ವೆಲ್, ಕಾರ್ಪೋರೇಟರ್ ಭಾನುಮತಿ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೆ ಮಂಗಳೂರು ನಗರ ಪೊಲೀಸ್ ಕಮೀಷನರ್‌ ಆಗಮಿಸಿ ಸ್ಥಳೀಯರ ಅಹವಾಲು ಸ್ವೀಕಾರ ಮಾಡಿದರು.

  ಸ್ಥಳೀಯರೇ ಹೊಡೆದಿದ್ದಾರೆ: ವಿದ್ಯಾರ್ಥಿಗಳ ಆರೋಪ
  ನಿನ್ನೆ ಹಾಸ್ಟೆಲ್‌ ಹುಡುಗರ ಮಧ್ಯೆ ಹೊಡೆದಾಟ ನಡೆದಿತ್ತು. ಸ್ವಲ್ಪ ಹೊತ್ತಾದ ಮೇಲೆ ಪೊಲೀಸರು ಏಕಾಏಕಿ ಹಾಸ್ಟೆಲ್‌ಗೆ ನುಗ್ಗಿ ಲಾಠಿ ಬೀಸಿದ್ದಾರೆ. ಸಿಕ್ಕಸಿಕ್ಕವರನ್ನು ಎಳೆದುಕೊಂಡು ಹೋಗಿದ್ದಾರೆ. ಪೊಲೀಸರ ಜೊತೆಗೆ ಸ್ಥಳೀಯ ಯುವಕರು ಸಹ ಹಾಸ್ಟೆಲ್‌ಗೆ ನುಗ್ಗಿ ಸಿಕ್ಕ ಸಿಕ್ಕವರಿಗೆ ಹೊಡೆದಿದ್ದಾರೆ. ಇದರಿಂದ ಕೆಲವರ ಕೈಕಾಲು ಮುರಿದಿದ್ದು, ನಮಗೆ ಹೊಡೆದ ಸ್ಥಳೀಯರ ಮೇಲೂ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಯೊಬ್ಬ ಮಾಧ್ಯಮಗಳಿಗೆ ಹೇಳಿದ್ದಾನೆ.

  ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಎಂದ ಪೊಲೀಸ್‌ ಕಮೀಷನರ್‌
  ಘಟನೆ ಬಗ್ಗೆ ಮಾಹಿತಿ ಪಡೆಯಲು ಸ್ಥಳಕ್ಕೆ ಬಂದ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಮಾತನಾಡಿ, ನಿನ್ನೆ ನಡೆದ ಗಲಾಟೆ ಪ್ರಕರಣದಲ್ಲಿ 5 ಮಂದಿಯನ್ನು ವಶಕ್ಕೆ ಪಡೆದಿದ್ದು, ಇಬ್ಬರ ಪೊಲೀಸರಿಗೆ ಗಾಯವಾಗಿದೆ. ಘಟನೆ ಬಗ್ಗೆ ಸ್ಥಳೀಯರು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಲಾಗುವುದು. ಘಟನೆ ಬಗ್ಗೆ ಸಿಸಿಟಿವಿ ಹಾಗೂ ಇತರ ಸಾಕ್ಷ್ಯ ಸಂಗ್ರಹಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

  ಓರ್ವ ವಿದ್ಯಾರ್ಥಿ ಸಸ್ಪೆಂಡ್‌ 
  ಕಾಲೇಜಿನ ಪ್ರಾಂಶುಪಾಲೆ ಡಾ.ಪರ್ವದಾವರ್ಧಿನಿ ಮಾತನಾಡಿ, ಈಗಾಗಲೇ ಆದರ್ಶ್‌ ಎಂಬ ವಿದ್ಯಾರ್ಥಿಯನ್ನು ಸಸ್ಪೆಂಡ್‌ ಮಾಡಲಾಗಿದ್ದು, ಘಟನೆ ಬಗ್ಗೆ ಕಾಲೇಜು ಮುಖ್ಯಸ್ಥರು ಸೇರಿ ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕಯಗೊಳ್ಳುತ್ತೇವೆ. ನಮ್ಮ ಮಕ್ಕಳಿಂದಾದ ತಪ್ಪಿಗೆ ಸ್ಥಳೀಯರಿಂದ ಕ್ಷಮೆ ಕೋರುತ್ತೇವೆ ಎಂದರು.

  ಕರ್ನಾಟಕ ಮುರ್ದಾಬಾದ್‌ ಎಂದಿದ್ದ ಕೇರಳ ವಿದ್ಯಾರ್ಥಿಗಳು

  ಕೆಲದಿನಗಳ ಹಿಂದೆ ಇಲ್ಲಿನ ಕೇರಳ ಮೂಲದ ವಿದ್ಯಾರ್ಥಿಗಳು ಕರ್ನಾಟಕ ಮುರ್ದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ದೂರದೂರಿನಿಂದ ಇಲ್ಲಿ ಕಲಿಯಲು ಬಂದು ಇಲ್ಲಿನ ಅನ್ನ ನೀರು ಕುಡಿದು ಕರ್ನಾಟಕ ಮುರ್ದಾಬಾದ್‌ ಎಂದರೆ ಅರ್ಥವಿದೆಯೇ ಎಂದು ಪ್ರಶ್ನಿಸಿದರು.

  ಸ್ಥಳಕ್ಕೆ ಶಾಸಕ ವೇದವ್ಯಾಸ್‌ ಭೇಟಿ
  ಸ್ಥಳೀಯರು ಶಾಸಕರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಶಾಸಕರು ಸಂಸ್ಥೆಯ ಮುಖ್ಯರೊಂದಿಗೆ ಮಾತನಾಡಿ, ಇನ್ನು ಏಳು ದಿನದೊಳಗೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಸ್ಥಳಾಂತರಿಸುವಂತೆ ಸೂಚನೆ ನೀಡಿದರು. ನಿಮ್ಮ ಸಂಸ್ಥೆಯ ಬಗ್ಗೆ ಅಪಾರ ಅಭಿಮಾನವಿದೆ. ಮಂಗಳೂರಿನ ಸರ್ವತೋಮುಖ ಬೆಳವಣಿಗೆಗೆ ನಿಮ್ಮದೂ ಪಾಲಿದೆ ಎಂದರು.
  ನನಗೆ ನನ್ನ ಕ್ಷೇತ್ರದ ಶಾಂತಿ, ಸಾಮರಸ್ಯ ಮುಖ್ಯ ಆದ್ದರಿಂದ ಈ ಘಟನೆಯ ಬಗ್ಗೆ ಪೊಲೀಸ್‌ ಆಯುಕ್ತ, ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದರು.

  ಸೂಕ್ತ ಭದ್ರತೆ ಒದಗಿಸಲು ಸರ್ಕಲ್‌ ಇನ್ಸ್‌ಪೆಕ್ಟರ್‌ಗೆ ಸೂಚನೆ

  ಶಾಸಕ ವೇದವ್ಯಾಸ್‌ ಕಾಮತ್‌ ಸ್ಥಳೀಯ ಸರ್ಕಲ್‌ ಇನ್ಸ್‌ಪೆಕ್ಟರ್‌ ಲೋಕೆಷ್‌ ಎಂಸಿ ಅವರನ್ನು ಸ್ಥಳಕ್ಕೆ ಕರೆಸಿ ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ತೆರಳುವವರೆಗೂ ಸ್ಥಳೀಯರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದರು.

  Click to comment

  Leave a Reply

  Your email address will not be published. Required fields are marked *

  LATEST NEWS

  ಅಂತೂ ಟೇಕಾಫ್ ಆದ ಪ್ರಜ್ವಲ್‌ ಫ್ಲೈಟ್‌..! ಲ್ಯಾಂಡ್ ಆಗ್ತಾ ಇದ್ದಂತೆ SIT ಲಾಕ್‌..!

  Published

  on

  ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಪ್ರಜ್ವಲ್‌ ರೇವಣ್ಣ ಅಂತೂ ಇಂತು ಸ್ವದೇಶಕ್ಕೆ ರಿಟರ್ನ್‌ ಆಗ್ತಾ ಇದ್ದಾನೆ. ಪೆನ್‌ಡ್ರೈವ್ ಲೀಕ್‌ ಆಗ್ತಾ ಇದ್ದಂತೆ ದೇಶ ಬಿಟ್ಟು ಎಸ್ಕೇಪ್ ಆಗಿದ್ದ ಪ್ರಜ್ವಲ್‌ ರೇವಣ್ಣಗೆ ಎಸ್‌ಐಟಿ ಹಲವು ನೊಟೀಸ್ ನೀಡಿದ್ರೂ ಕ್ಯಾರೆ ಅಂದಿರಲಿಲ್ಲ. ಇದೀಗ ವಿದೇಶದಿಂದ ವಾಪಾಸಾಗಲು ಮನಸ್ಸು ಮಾಡಿರೋ ಪ್ರಜ್ವಲ್‌ನನ್ನು ಲಾಕ್‌ ಮಾಡಲು ಎಸ್‌ಐಟಿ ಅಧಿಕಾರಿಗಳು ಕೂಡಾ ಸಿದ್ಧತೆ ನಡೆಸಿಕೊಂಡಿದ್ದಾರೆ.


  ದೇಶಕ್ಕೆ ಬರುವುದಾಗಿ ಹಲವು ಬಾರಿ ಸುದ್ದಿಯಾಗಿದ್ರೂ ಪ್ರಜ್ವಲ್‌ ರೇವಣ್ಣ ಬಾರದೆ ಜಾರಿಕೊಂಡಿದ್ದ. ಪ್ರಜ್ವಲ್‌ ಬರ್ತಾನೆ ಅನ್ನೋ ಸುದ್ದಿಯಾದಾಗ ಎಸ್‌ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಕಾದು ಕೂತು ಸುಸ್ತಾಗಿ ಹೋಗಿದ್ದರು. ಇಷ್ಟೆಲ್ಲಾ ಬೆಳವಣಿಗೆಯ ಬಳಿಕ ಜನರೂ ಕೂಡಾ ರೊಚ್ಚಿಗೆದ್ದು ಆತನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ಕೊನೆಗೂ ಹಲವು ಒತ್ತಡಗಳ ಬಳಿಕ ತಾನು ಬರುತ್ತಿರುವುದಾಗಿ ವಿಡಿಯೋ ಮಾಡಿ ಸಂದೇಶ ನೀಡಿ ಫ್ಲೈಟ್ ಹತ್ತಿದ್ದಾನೆ.

  ವಿದೇಶದಲ್ಲಿ ಕುಳಿತು  ಮೇ.31 ರಂದು ಅಂದ್ರೆ ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ವೀಡಿಯೋ ಮೂಲಕ ಹೇಳಿದ್ದ. ಇದೀಗ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿಗೆ ಹೊರಟಿರುವ ವಿಮಾನವನ್ನು ಹತ್ತಿದ್ದಾನೆ. ಇಂದು ತಡರಾತ್ರಿ ಪ್ರಜ್ವಲ್ ರೇವಣ್ಣ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

  ಪ್ರಜ್ವಲ್​ ರೇವಣ್ಣಗೆ ಬಂಧನ ಭೀತಿ ಕಾಡುತ್ತಿರುವ ಮಧ್ಯೆ ವಿದೇಶದಲ್ಲಿದ್ದುಕೊಂಡೇ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ಸಲ್ಲಿಸಿದ್ದ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದ್ದು, ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದ. ಆದರೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿ ಆದೇಶ ಹೊರಡಿಸಿತ್ತು. ಆ ಮೂಲಕ ಪ್ರಜ್ವಲ್ ಬಂಧನ ಫಿಕ್ಸ್​ ಆಗಿದೆ. ಇದೀಗ ಪ್ರಜ್ವಲ್ ಬರುವಿಕೆಯನ್ನು ಕಾದು ಕುಳಿತಿರುವ SIT ತಂಡ ಈಗಾಗಲೇ ಏರ್​ಪೋರ್ಟ್​ನಲ್ಲೇ ಬೀಡುಬಿಟ್ಟಿದೆ.

  Continue Reading

  LATEST NEWS

  ಅನಂತ್ ಅಂಬಾನಿ-ರಾಧಿಕಾ ಮರ್ಚಂಟ್‌ ಮದುವೆ ಡೇಟ್‌ ಫಿಕ್ಸ್‌..! ವೈರಲ್ ಆಯ್ತು ವೆಡ್ಡಿಂಗ್ ಕಾರ್ಡ್‌..!

  Published

  on

  ಮುಂಬೈ/ಮಂಗಳೂರು: ಅನಂತ್ ಅಂಬಾನಿ ಹಾಗೂ ರಾದಿಕಾ ಮರ್ಚಂಟ್‌ ರವರ ವಿವಾಹವು ಇಟಲಿಯಲ್ಲಿ ನಡೆಯಲಿದ್ದು, ಇದೀಗ ಮದುವೆಯ ಆಮಂತ್ರಣ ಪತ್ರ ಬಹಿರಂಗವಾಗಿದೆ.

  ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಪುತ್ರ ಅನಂತ್ ಅಂಬಾನಿ ಮದುವೆಗೆ ತೆರೆ ಬಿದ್ದಿದೆ. ಇನ್ನು ಇವರಿಬ್ಬರ ಪ್ರಿ ವೆಡ್ಡಿಂಗ್‌ ಬಹಳ ಅದ್ಧೂರಿಯಾಗಿ ಜರಗಿದ್ದು  ಸ್ಟಾರ್ ನಟ-ನಟಿಯರು ಸಾಕ್ಷಿಯಾಗಿದ್ದರು. ಅತೀ ಶೀಘ್ರದಲ್ಲೇ ರಾಧಿಕಾ ಮರ್ಚಂಟ್‌ ಹಾಗೂ ಅನಂತ್ ಅಂಬಾನಿ ವಿವಾಹವಾಗಲಿದ್ದಾರೆ. ಇನ್ನು ಮದುವೆಗೂ ಮುನ್ನ ಮೊದಲನೇ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದಿದ್ದು, ಎರಡನೇ ಪ್ರಿ ವೆಡ್ಡಿಂಗ್ ಕಾರ್ಯಕ್ರಮ ಇಟಲಿಯ ಕ್ರೂಸ್‌ನಲ್ಲಿ ಆಯೋಜಿಸಲಾಗಿದೆ.


  ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜು.12ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ನಡೆಯಲಿದೆ.  ಅತಿಥಿಗಳು  ಆಮಂತ್ರಣ ಕಾರ್ಡ್‌ಗಳನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ಅನಂತ್-ರಾಧಿಕಾ ಮದುವೆ ಕಾರ್ಡ್ ಸಾಂಪ್ರದಾಯಿಕ ಕೆಂಪು ಮತ್ತು ಗೋಲ್ಡನ್ ಬಣ್ಣದಿಂದ ಕೂಡಿದ್ದು ಇವರಿಬ್ಬರ ವಿವಾಹ ಕಾರ್ಯಕ್ರಮದ ವಿವರಗಳನ್ನೂ ಕಾರ್ಡ್‌ನಲ್ಲಿ ನೀಡಲಾಗಿದೆ.

  ಇದನ್ನೂ ಓದಿ.. ಅಂಬಾನಿ ಪುತ್ರನ ಮದುವೆ ಎಲ್ಲಿ ನಡೆಯುತ್ತೆ ಗೊತ್ತಾ…!! ಹೇಗಿದೆ ಅದ್ಧೂರಿ ತಯಾರಿ?

  ಕಾರ್ಡ್‌ನಲ್ಲಿ ಜು.12ರಂದು ವಿವಾಹವಿದ್ದು ಇದಕ್ಕೆ ಎಲ್ಲರೂ ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು, ಜು.13ರಂದು ಆಶೀರ್ವಾದ ಕಾರ್ಯಕ್ರಮವಿದ್ದು ಇದಕ್ಕೆ ಭಾರತೀಯ ಫಾರ್ಮಲ್ ಹಾಗೂ ಜು. 14ರಂದು  ಆರತಕ್ಷತೆ ಸಮಾರಂಭವಿದ್ದು, ಇದಕ್ಕೆ ಇಂಡಿಯನ್ ಚಿಕ್ ಥೀಮ್ ಬಟ್ಟೆಗಳನ್ನು ಧರಿಸಿ ಬರಲು ಕೇಳಲಾಗಿದೆ. ಈ ಆಮಂತ್ರಣದ ಬೆನ್ನಲ್ಲೇ ಅಧಿಕೃತ ಆಮಂತ್ರಣ ಬರಲಿದೆ ಎಂದೂ ಹೇಳಲಾಗಿದೆ.

  Continue Reading

  DAKSHINA KANNADA

  ಹಾವು ಮನೆಯೊಳಗೆ ಬಂದರೆ ಶುಭ ಸೂಚಕವೇ..?

  Published

  on

  ಮಂಗಳೂರು: ಹಾವು.. ಆ ಶಬ್ಧ ಕೇಳಿದೊಡನೆ ಒಮ್ಮೆ ಭಯ ಹುಟ್ಟಿಸುತ್ತದೆ. ಇನ್ನು ಎದುರಿಗೆ ಹಾವು ನೋಡಿದರೆ ಹೃದಯದ ಬಡಿತವೇ ನಿಂತು ಹೋದಂತೆ ಆಗುತ್ತದೆ. ಹಾಗೆಯೇ ಒಂದು ವೇಳೆ ನಿಮ್ಮ ಮನೆಯೊಳಗೆ ಹಾವು ಬಂದರೆ ನಿಮಗೆ ಹೇಗಾಗಬಹುದು. ಕೆಲವೊಮ್ಮೆ ಎಷ್ಟೋ ಜನರ ಮನೆಯೊಳಗೆ ಹಾವು ಬಂದಿರುತ್ತದೆ. ಹಾಗೋ ಹೀಗೋ ಹಾವು ಹಿಡಿಯುವರನ್ನು ಕರೆದು ಹಾವನ್ನು ಹೊರಗೆ ಕಳಿಸುವ ಸಾಹಸ ಮಾಡಿದ ನಂತರವೂ ಕೆಲವು ದಿನಗಳವರೆಗೂ ಆ ಭಯ ಇದ್ದೇ ಇರುತ್ತದೆ.

  ಆದರೆ ಹಾವು ಮನೆಯೊಳಗೆ ಬಂದರೆ ಅದನ್ನು ಕೆಲವರು ಶುಭವೆಂದೂ ಇನ್ನೂ ಕೆಲವರು ಸಮಸ್ಯೆ ಎಂದು ಹೇಳುವುದನ್ನು ನಾವು ಕೇಳಿದ್ದೇವೆಹಾವು ಮನೆಗೆ ಬಂದರೆ ಏನು ಅರ್ಥ? ಅದರಿಂದ ಏನಾದರೂ ಸಮಸ್ಯೆ ಇದೆಯೇ ತಿಳಿಯೋಣ.

  ಮನೆಯೊಳಗೆ ಹಾವು ಬರುವುದು ಶುಭ ಸೂಚಕ ಎಂದು ಹೇಳುತ್ತಾರೆ. ಹಿಂದೂ ಸಂಪ್ರದಾಯದಲ್ಲಿ ಹಾವನ್ನು ದೇವರ ರೂಪದಲ್ಲಿ ಪೂಜಿಸಲಾಗುತ್ತದೆ. ಆದಿಶೇಷ ಸರ್ಪಗಳ ರಾಜ, ಶಿವನು ಕೂಡಾ ಹಾವನ್ನು ತನ್ನ ಕತ್ತಿನಲ್ಲಿ ಸುತ್ತಿಕೊಂಡಿದ್ದಾನೆ. ಆದ್ದರಿಂದ ದೇವರ ಸ್ವರೂಪವಾಗಿರುವುದರಿಂದ ಮನೆಯೊಳಗೆ ಹಾವು ಬಂದರೆ ಅದು ಖಂಡಿತ ಏನೋ ಶುಭ ಮುನ್ಸೂಚನೆ ಎಂದು ನಂಬಲಾಗಿದೆ.

  ಮನೆಯೊಳಗೆ ಒಂದು ವೇಳೆ ಕಪ್ಪು ಹಾವು ಬಂದರೆ ಅದನ್ನು ಶುಭ ಎಂದು ಪರಿಗಣಿಸಲಾಗುತ್ತದೆ. ಇದರಿಂದ ನಿಮಗೆ ಶಿವನ ಕೃಪೆ ದೊರೆಯಲಿದ್ದು ಕೆಲವೇ ದಿನಗಳಲ್ಲಿ ನಿಮ್ಮ ಜೀವನ ಬದಲಾಗಲಿದೆ, ನೀವು ಸಂತೋಷ ಜೀವನವನ್ನು ಗಳಿಸಲಿದ್ದೀರಿ ಎಂಬ ಅರ್ಥವನ್ನು ನೀಡುತ್ತದೆ.

  ಹಾವಿನ ಮರಿ ಮನೆಯೊಳಗೆ ಬಂದರೆ ನೀವು ಕೆಲವು ದಿನಗಳಿಂದ ಅರ್ಧಕ್ಕೆ ನಿಲ್ಲಿಸಿದ್ದ ಕೆಲಸಗಳು ಆದಷ್ಟು ಬೇಗ ಪೂರ್ಣಗೊಳ್ಳುತ್ತವೆ ಎಂದು ಅರ್ಥ. ಹಾವು ಮನೆಯನ್ನು ಪ್ರವೇಶಿಸಿದರೆ ಲಕ್ಷ್ಮೀ ಆಶೀರ್ವಾದ ಕೂಡಾ ನಿಮ್ಮ ಮೇಲಿದೆ ಎಂದು ಅರ್ಥ. ಇದುವರೆಗೂ ನೀವು ಎದುರಿಸುತ್ತಿದ್ದ ನಿಮ್ಮ ಆರ್ಥಿಕ ಸಮಸ್ಯೆ ಕೊನೆಗೊಳ್ಳುವುದು. ನಿಮ್ಮ ಆರ್ಥಿಕ ಪರಿಸ್ಥಿತಿ ಸದೃಢಗೊಳ್ಳುವುದು ಖಚಿತ.

  ಒಂದು ವೇಳೆ ನಿಮ್ಮ ಮನೆಗೆ ಬಿಳಿ ಬಣ್ಣದ ಹಾವು ಪ್ರವೇಶಿಸಿದರೆ ಇದು ಇನ್ನಷ್ಟು ಮಂಗಳಕರ ಎನ್ನಲಾಗಿದೆ. ಇದು ಮನೆಯಲ್ಲಿ ಶಾಂತಿ, ಸುಖ, ಸಮೃದ್ಧಿ ನೆಲೆಸುವಂತೆ ಮಾಡುತ್ತದೆ. ಇದ್ದಕ್ಕಿದ್ದಂತೆ ನಿಮ್ಮ ಮನೆಗೆ ಹಸಿರು ಹಾವು ಬಂದರೆ ಅದೂ ಕೂಡಾ ಶುಭವೇ. ಶೀಘ್ರದಲ್ಲೇ ನೀವು ಶುಭ ಸುದ್ದಿ ಕೇಳಲಿದ್ದೀರಿ, ನಿಮ್ಮ ಕಷ್ಟನಷ್ಟಗಳು ಕೊನೆಗೊಳ್ಳುತ್ತವೆ.

  ಹಳದಿ ಬಣ್ಣದ ಹಾವು ಮನೆಗೆ ಬಂದರೆ ನೀವು ಅತಿ ಶೀಘ್ರದಲ್ಲೇ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿ ಜೀವನದಲ್ಲಿ ಪ್ರಗತಿ ಹೊಂದಲಿದ್ದೀರಿ ಎಂದು ಅರ್ಥ. ಅಷ್ಟೇ ಅಲ್ಲ, ಮನೆಗೆ ಹಾವು ಬಂದರೆ ಪತಿ ಪತ್ನಿ ನಡುವೆ ಬಾಂಧವ್ಯ ಹೆಚ್ಚಾಗುತ್ತದೆ. ಪರಸ್ಪರ ಪ್ರೀತಿ ವಿಶ್ವಾಸ ಬೆಳೆಯುತ್ತದೆ. ಜೀವನ ಸುಂದರವಾಗಿರುತ್ತದೆ.

  Continue Reading

  LATEST NEWS

  Trending