Connect with us

DAKSHINA KANNADA

ಮುಲ್ಕಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ: ಓರ್ವನಿಗೆ ಗಾಯ-ಮೂವರು ವಶಕ್ಕೆ

Published

on

ಮುಲ್ಕಿ: ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಸಂಭವಿಸಿದ್ದು ಓರ್ವ ಗಾಯಗೊಂಡು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಗಾಯಗೊಂಡವನನ್ನು ಮುಲ್ಕಿ ಸಮೀಪದ ಕರ್ನಿರೆ ನಿವಾಸಿ ಸುಜನ್ ಶೆಟ್ಟಿ (20) ಎಂದು ಗುರುತಿಸಲಾಗಿದೆ.


ಇಂದು ಕಾಲೇಜಿನಲ್ಲಿ ಕಾಲೇಜು ಡೇ ಫಂಕ್ಷನ್ ನಡೆಯುತ್ತಿದ್ದು, ಈ ಸಂದರ್ಭ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹಳೆ ವೈಷಮ್ಯದಿಂದ ಮಾತಿನ ಚಕಮಕಿ ನಡೆದು ನೂಕಾಟ ತಳ್ಳಾಟ ನಡೆದಿದೆ.

ಈ ಸಂದರ್ಭ ಒಂದು ಗುಂಪಿನ ಸುಮಾರು 10ಮಂದಿ ವಿದ್ಯಾರ್ಥಿಗಳು ಹಾಗೂ ಹೊರಗಿನವರು ಸೇರಿ ಕರ್ನಿರೆ ನಿವಾಸಿ ಸುಜನ್ ಶೆಟ್ಟಿ ಎಂಬವರ ಮೇಲೆ ಹಿಗ್ಗಾ ಮುಗ್ಗ ಕೈಯಿಂದ ಹಾಗೂ ಕಾಲಿನಿನಿಂದ ಹಲ್ಲೆ ನಡೆಸಿದ್ದು ಗಾಯಗೊಂಡ ಸುಜನ್ ಮುಲ್ಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು,

ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕಾಲೇಜಿನಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending