Connect with us

    DAKSHINA KANNADA

    ಟೋಲ್‌-ರೋಡ್‌ ಟ್ಯಾಕ್ಸ್‌ ಕಟ್ಟಿ ಗುಂಡಿಗೆ ಬಿದ್ದು ಆಸ್ಪತ್ರೆ ಬಿಲ್‌ ಕಟ್ಟಿ: ಶೈಕ್ಷಣಿಕ ವರ್ಷ ಕಳಕೊಂಡ ವಿವಿ ವಿದ್ಯಾರ್ಥಿನಿ

    Published

    on

    ಉಳ್ಳಾಲ: ಟೋಲ್‌, ರೋಡ್‌ ಟ್ಯಾಕ್ಸ್‌ ಸೇರಿ ಎಲ್ಲವನ್ನೂ ಕಟ್ಟಿಯೂ ಹೊಂಡ ಬಿದ್ದ ಗುಂಡಿಗಳಲ್ಲೇ ರಸ್ತೆಯಲ್ಲಿ ತೆರಳಿ ಬಿದ್ದು ಕೆಲವ್ರು ಜೀವ ಕಳೆದುಕೊಂಡರೆ ಮತ್ತೆ ಕೆಲವರು ಅಂಗವೈಕಲ್ಯ ಅದೂ ಸಾಲದೆಂಬಂತೆ ಲಕ್ಷಗಟ್ಟಲೆ ಆಸ್ಪತ್ರೆ ಬಿಲ್ಲು ಕಟ್ಟುವುದು ದಕ್ಷಿಣ ಕನ್ನಡ ಜಿಲ್ಲೆಯ ಜನರ ಗೋಳು.

    ಇಂತಹ ಹೊಂಡ ಗುಂಡಿಯ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗೆ ಬಿದ್ದು ವಿದ್ಯಾರ್ಥಿನಿಯೊಬ್ಬಳು ಗಂಭೀರ ಗಾಯಗೊಂಡು ಪರೀಕ್ಷೆ ಬರೆಯಲಾರದೆ ಒಂದು ಶೈಕ್ಷಣಿಕ ವರ್ಷವನ್ನು ಕಳೆದುಕೊಂಡ ಘಟನೆ ಇತ್ತೀಚೆಗೆ ನೇತ್ರಾವತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


    ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಪರಿಸರ ವಿಜ್ಞಾನ ವಿಭಾಗದ ದ್ವಿತೀಯ ವರ್ಷದ ಎಂ.ಎಸ್ಸಿ ವಿದ್ಯಾರ್ಥಿನಿ, ಕೊಟ್ಟಾರ ನಿವಾಸಿ ನಿಶ್ಮಿತಾ (19) ಗಾಯಾಳು.
    ಘಟನೆ ವಿವರ
    ಜು.22 ರಂದು ಸಂಜೆ ಕೊಣಾಜೆ ಕಡೆಯಿಂದ ಮಂಗಳೂರಿಗೆ ತನ್ನ ಸ್ಕೂಟಿ ವಾಹನದಲ್ಲಿ ತೆರಳುವ ಸಂದರ್ಭ ಜೋರಾಗಿ ಮಳೆಯಾಗುತಿತ್ತು.

    ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆಯಲ್ಲಿ ಪ್ರಯಾಣಿಸುವ ಸಂದರ್ಭ ಸೇತುವೆ ಮಧ್ಯಭಾಗದಲ್ಲಿ ಬೃಹತ್‌ ಗಾತ್ರದ ಹೊಂಡಕ್ಕೆ ಸ್ಕೂಟಿ ಸಿಲುಕಿ ರಸ್ತೆಗೆ ಉರುಳಿದೆ.  ಮಳೆ ನೀರು ತುಂಬಿದ್ದರಿಂದ ಹೊಂಡದ ಅರಿವು ಆಕೆಗೆ ಬಂದಿರಲಿಲ್ಲ.

    ರಸ್ತೆಯಲ್ಲಿ ಗಂಭೀರ ಗಾಯಗೊಂಡು ಬಿದ್ದ ವಿದ್ಯಾರ್ಥಿನಿಯನ್ನು ಕಂಡ ರಿಕ್ಷಾ ಚಾಲಕರೊಬ್ಬರು ತಕ್ಷಣ ಆಕೆಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಬಲಗೈ ಮೂಳೆ ಮುರಿತಕ್ಕೊಳಗಾಗಿರುವುದು ಎಕ್ಸ್‌ ರೇ ಮೂಲ ಗೊತ್ತಾಗಿದೆ. ಅಲ್ಲದೆ ಕೈ ಹಾಗೂ ಮೈ ಪೂರ್ತಿ ಅಲ್ಲಲ್ಲಿ ಗಾಯಗಳೂ ಆಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.

    ಬಲಗೈ ಮೂಳೆ ಜೋಡಿಸಲು ಶಸ್ರ್ತಚಿಕಿತ್ಸೆ ನಡೆಸಿ ರಾಡನ್ನು ಅಳವಡಿಸಲಾಗಿದೆ.  ಮುಂದಿನ ಆರು ತಿಂಗಳುಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಈ ಮಧ್ಯೆ ವಾರ್ಷಿಕ ಪರೀಕ್ಷೆ ಬರುವುದರಿಂದ ಅದನ್ನು ಬರೆಯಲು ಅಸಾಧ್ಯವಾಗಿದೆ.

    ಈ ಮೂಲಕ ಒಂದು ಶೈಕ್ಷಣಿಕ ವರ್ಷವನ್ನು ಕಳೆದುಕೊಂಡಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
    ʻಅಂದು ಪ್ರಾಜೆಕ್ಟ್‌ ಕೆಲಸಗಳಿದ್ದುದರಿಂದ ಸ್ಕೂಟರನ್ನು ಕಾಲೇಜಿಗೆ ತಂದಿದ್ದೆನು.

    ಮನೆಗೆ ವಾಪಸ್ಸು ಮರಳುವ ವೇಳೆ ನೇತ್ರಾವತಿ ಸೇತುವೆಯಲ್ಲಿನ ಹೊಂಡ ಅರಿವಿಗೆ ಬಾರದೆ ಬಿದ್ದು  ಕೈ ಮುರಿತಕ್ಕೊಳಗಾಗಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದೇನೆ. ಎಂ.ಎಸ್ಸಿ ಅಂತಿಮ ವರ್ಷವಾಗಿರುವುದರಿಂದ ಆಗಸ್ತ್‌ ತಿಂಗಳಿನಲ್ಲಿ ಆಂತರಿಕ ಪರೀಕ್ಷೆಗಳಿವೆ. ಅದನ್ನು ಎದುರಿಸಲು ಸಾಧ್ಯವಿಲ್ಲ. ಜೊತೆಗೆ ಆ.12 ರಂದು ಯುಜಿಸಿ ಪರೀಕ್ಷೆಯೂ ಇರುವುದರಿಂದ ಭವಿಷ್ಯವೇ ಅತಂತ್ರವಾಗಿದೆ.

    ಶಸ್ತ್ರಚಿಕಿತ್ಸೆಗೆ ಈವರೆಗೆ ರೂ.65,000 ಖರ್ಚನ್ನು ಹೆತ್ತವರು ಭರಿಸಿದ್ದಾರೆ.  ಆಸ್ಪತ್ರೆ ಬಿಲ್‌ ಇನ್ನು ಬರಬೇಕಿದೆ. ಹೆದ್ದಾರಿ ಅವ್ಯವಸ್ಥೆಯೇ ಅಪಘಾತಕ್ಕೆ ಕಾರಣ. ಪ್ರಕರಣ ಯಾರ ಮೇಲೆ ದಾಖಲಿಸುವುದೇ ಗೊಂದಲದಲ್ಲಿರುವುದರಿಂದ ಅದನ್ನು ಕೈಬಿಟ್ಟಿದ್ದೇವೆ ಎನ್ನುತ್ತಾರೆ ಗಾಯಾಳು ವಿದ್ಯಾರ್ಥಿನಿ ನಿಶ್ಮಿತಾ

    ಇದೊಂದೇ ಘಟನೆ ಅಲ್ಲ ಬದಲಾಗಿ ಇಂತಹ ಹಲವು ಘಟನೆಗಳು ದಿನಂಪ್ರತಿ ಜಿಲ್ಲೆಯಲ್ಲಿ ನಡೆಯುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಗುಂಡಿಗಳು ಇದ್ದರೂ ಟೋಲ್‌ ವಸೂಲಿಗೆ ತೆಗೆದುಕೊಂಡ ಆಸಕ್ತಿ ರಸ್ತೆ ರಿಪೇರಿಗೆ ತೆಗೆದುಕೊಂಡಂತಿಲ್ಲ.

    ಈ ಬಗ್ಗೆ ಮಾತನಾಡಬೇಕಾದ ಜನಪ್ರತಿನಿಧಿ ಜೊತೆಗೆ ಜಿಲ್ಲಾಡಳಿತ ತಮಗೂ ಅದಕ್ಕೂ ಸಂಬಂಧವೆ ಇಲ್ಲವೆಂಬಂತೆ ಕಣ್ಣಿದ್ದೂ ಕುರುಡಾಗಿದೆ. ಇನ್ನಾದರೂ ಹೆದ್ದಾರಿ ಗುಂಡಿ ಮುಚ್ಚಿ ಹಲವರ ಜೀವ ಉಳಿಸುವ ಕಾರ್ಯ ಮಾಡಬೇಕೆಂದು ವಾಹನ ಸವಾರರ ಬೇಡಿಕೆಯಾಗಿದೆ.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending