Monday, October 18, 2021

ಪರೀಕ್ಷೆ ದಿನವೇ ತಂದೆಯ ಪಿಸ್ತೂಲಿನಿಂದ ತಲೆಗೆ ಗುಂಡಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಪರೀಕ್ಷೆಗೆ ಹಾಜರಾಗಬೇಕಿದ್ದ ದಿನವೇ ಬೆಳಿಗ್ಗೆ ವಾಕಿಂಗ್‌ ತೆರಳಿದ್ದ ವಿದ್ಯಾರ್ಥಿಯೊಬ್ಬ ತಂದೆಯ ಪಿಸ್ತೂಲಿನಿಂದ ತನ್ನ ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ಸಂಜಯನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಉತ್ತರಾಖಂಡ್ ಮೂಲದ ಭಗತ್​ ಸಿಂಗ್​ ಮತ್ತು ಬಾಬ್ನಾ ದಂಪತಿಯ ಪುತ್ರ ರಾಹುಲ್​ ಭಂಡಾರಿ(17) ಮೃತ ದುರ್ದೈವಿ.


ರಾಹುಲ್​ ತಂದೆ ಸೇನೆಯ ನಿವೃತ್ತ ಹವಾಲ್ದಾರ್​. 20 ವರ್ಷದಿಂದ ಬೆಂಗಳೂರಿನಲ್ಲೇ ನೆಲೆಸಿರುವ ಕುಟುಂಬ, ಆರ್​.ಟಿ. ನಗರದಲ್ಲಿ ಮನೆ ಮಾಡಿಕೊಂಡು ವಾಸವಿದೆ. ಓದಿನಲ್ಲಿ ಮುಂದಿದ್ದ ರಾಹುಲ್​ ಎಸ್ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದಿದ್ದ.

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ರಾಹುಲ್​, ಮಾನಸಿಕ ಒತ್ತಡ ನಿವಾರಣೆಗಾಗಿ ಬೆಳಗಿನ ಜಾವ ವಾಕಿಂಗ್​ ಮಾಡುವ ಹವ್ಯಾಸ ಇಟ್ಟುಕೊಂಡಿದ್ದ.
ಬೆಳಗಿನ ಜಾವ 4ರ ಸಮಯದಲ್ಲಿ ಎಂದಿನಂತೆ ಮನೆಯಿಂದ ಹೊರ ಬಂದಿದ್ದ. ಸಮಯ 6 ಆದರೂ ಮಗ ವಾಪಸ್​ ಮನೆಗೆ ಬಂದಿರಲಿಲ್ಲ.

ಅವನ ಮೊಬೈಲ್​ಗೆ ಪಾಲಕರು ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಅಷ್ಟೊತ್ತಿಗೆ ಸಂಜಯನಗರ ಮುಖ್ಯರಸ್ತೆಯ ಬಸ್ ನಿಲ್ದಾಣ ಬಳಿ ತಲೆಗೆ ಗುಂಡೇಟು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಇರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರು.
ರಾಹುಲ್​ ಜೇಬಿನಲ್ಲಿದ್ದ ಮೊಬೈಲ್​ ರಿಂಗಣಿಸುತ್ತಲೇ ಇತ್ತು.

ಪೊಲೀಸರು ಕರೆ ಸ್ವೀಕರಿಸುತ್ತಿದ್ದಂತೆ, ಎಲ್ಲಿದ್ದೀಯ ಮಗನೇ? ಇಷ್ಟೊತ್ತಾದರೂ ಏಕೆ ಮನೆಗೆ ಬಂದಿಲ್ಲ? ಎಂದು ಪಾಲಕರು ಕೇಳಿದ್ದು, ಅದಕ್ಕುತ್ತರಿಸಿದ ಪೊಲೀಸರು ಮಗನ ಸಾವಿನ ಬಗ್ಗೆ ಹೇಳಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತ್ತು.

ರಾಹುಲ್​ನ ಅಕ್ಕ, ನನ್ನ ತಮ್ಮನಿಗೆ ಏನೂ ಆಗಿಲ್ಲ. ಎದ್ದೇಳು ರಾಹುಲ್​ ಎಂದು ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ತಂದೆಯ ಪಿಸ್ತೂಲ್​ನಿಂದಲೇ ಗುಂಡು ಹಾರಿಸಿಕೊಂಡು ರಾಹುಲ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಹುಲ್‍ಗೆ ಪಿಸ್ತೂಲ್ ಬಳಸಲು ತರಬೇತಿಯನ್ನು ನೀಡಲಾಗಿತ್ತು: ಡಿಸಿಪಿ ಅನುಚೇತ್

ರಾಹುಲ್‍ಗೆ ಪಿಸ್ತೂಲ್ ಬಳಸಲು ತರಬೇತಿಯನ್ನು ನೀಡಲಾಗಿತ್ತು ಎಂದು ಸದಾಶಿವನಗರ ಡಿಸಿಪಿ ಅನುಚೇತ್ ಹೇಳಿದ್ದಾರೆ. ಆರ್ಮಿ ಸ್ಕೂಲ್ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಆತ್ಮಹತ್ಯೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಪಿ ಅನುಚೇತ್, ಬೆಳಗ್ಗೆ ಸದಾಶಿವನಗರ ವ್ಯಾಪ್ತಿಯಲ್ಲಿ 17 ವರ್ಷದ ಯುವಕ ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಇಂಡಿಯನ್ ಏರ್ ಫೋರ್ಸ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಆದರೆ ನಾವು ಈ ಕುರಿತು ಪ್ರಾಥಮಿಕ ತನಿಖೆ ನಂತರವೇ ಮಾಡದೇ ಏನನ್ನು ಹೇಳಲಾಗುತ್ತಿಲ್ಲ. ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದಾಗ ಒಂದು ಸಿಂಗಲ್ ಬುಲೆಟ್ ತಲೆಯ ಬಲಭಾಗದಿಂದ ನುಗಿ ಎಡಭಾಗದಿಂದ ಬಿದ್ದಿದೆ ಎಂದು ತಿಳಿಸಿದ್ದಾರೆ. ಪರಿಶೀಲಿಸಿದಾಗ ನಮಗೆ ಇಂಡಿಯನ್ ಫ್ಯಾಕ್ಟರಿ ಮೇಡ್ ಪಿಸ್ತೂಲ್ ಸಿಕ್ಕಿದೆ. ಆ ಪಿಸ್ತೂಲ್‍ಗೆ ರಾಹುಲ್ ತಂದೆಯ ಪರವಾನಗಿ ಇದೆ ಎಂದು ತಿಳಿದುಬಂದಿದೆ. ರಾಹುಲ್ ಸುಮಾರು ಬೆಳಗ್ಗೆ 3.30ಗೆ ಅವನ ಮನೆಯಿಂದ ಹೊರಟು ಈ ಕಡೆ ಬಂದಿದ್ದಾನೆ. ಗಂಗೆನಹಳ್ಳಿಯಲ್ಲಿ ಈತನ ಮನೆ ಇರುವುದು ತಿಳಿದುಬಂದಿದ್ದು, ತಂದೆ, ತಾಯಿ ಮತ್ತು ಅಕ್ಕನ ಜೊತೆ ಇದ್ದ ಎಂದು ತಿಳಿದುಬಂದಿದೆ. ಅವನು ಸ್ವಯಂ ಪ್ರೇರಣೆಯಿಂದ ಈ ಕೃತ್ಯ ಮಾಡಿಕೊಂಡಿದ್ದಾನೆ ಎಂದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ ಎಂದಿದ್ದಾರೆ..

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...