Sunday, August 14, 2022

ಪಿಯುಸಿ ಪರೀಕ್ಷೆಯಲ್ಲಿ ಫೇಲ್-ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಜೀವಾಂತ್ಯ

ಬೆಂಗಳೂರು: ಪಿಯುಸಿಯಲ್ಲಿ ಒಂದೆಡೆ ಪಾಸಾದವರ ಸಂಭ್ರಮವಾದರೆ, ಮತ್ತೊಂದೆಡೆ ನಿರೀಕ್ಷಿತ ಅಂಕ ಬರದೆ, ಫೇಲಾದ ಕಾರಣಕ್ಕೆ ವಿವಿಧೆಡೆ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಬೀದರ್‌ನ ಚಿಟಗುಪ್ಪ ತಾಲೂಕಿನ ಮದ್ದರಗಿ ಗ್ರಾಮದಲ್ಲಿ ಪರೀಕ್ಷೆಯಲ್ಲಿ ಫೇಲ್ ಆದ ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಸುಹಾಸಿನಿ ದಿಲೀಪ ಮರ್ಜಾಪುರೆ (18) ನೇಣಿಗೆ ಶರಣಾಗಿದ್ದಾಳೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸಮೀಪದಲ್ಲೂ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.

ಮಹದೇವಪುರದ ಗ್ರಾ. ಪಂ ಸದಸ್ಯೆ ಸಾವಿತ್ರಿ ಹಾಗೂ ಎಂ.ಎಸ್ ಜಗದೀಶ್ ದಂಪತಿ ಪುತ್ರಿ ಎಂ.ಜೆ ಸ್ಪಂದನ (17) ಆತ್ಮಹತ್ಯೆಗೆ ತುತ್ತಾಗಿದ್ದಾಳೆ.

ಈಕೆ ಮೂರು ವಿಷಯದಲ್ಲಿ ಅನುತ್ತೀರ್ಣವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಜಿಗುಪ್ಸೆಗೊಂಡು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ಬಾವಿಗೆ ಹಾರಿ ಮೃತ: ಬಾಗಲಕೋಟೆಯ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅಜ್ಜನ ಮನೆಯಲ್ಲಿ ವಾಸವಿದ್ದ ಪಿಯು ದ್ವಿತೀಯ ವರ್ಷದ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಫೇಲ್ ಆಗಿದಕ್ಕೆ ಮನನೊಂದು ನಿನ್ನೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೂಜಾ ರಾಚಪ್ಪ ಚಳಗೇರಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಗಲಗಲಿ ನ್ಯೂ ಇಂಗ್ಲೀಷ್ ಪದವಿ ಪೂರ್ವ ಕಾಳೇಜ್‌ನಲ್ಲಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪೂಜಾಳ ಸ್ವಗ್ರಾಮ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇಳಿಯಾಳ.

ಗದಗ ತಾಲ್ಲೂಕಿನ ಹರ್ತಿ ಗ್ರಾಮದ ಪವಿತ್ರಾ ಪ್ರಭುಗೌಡ ಲಿಂಗದಾಳ ಎಂಬ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸನ್ಮಾರ್ಗ ಪಿಯು ಕಾಲೇಜಿನ ವಿದ್ಯಾರ್ಥಿನಿ ಈಕೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಣಿತದಲ್ಲಿ ಫೇಲಾದವ ಆತ್ಮಹತ್ಯೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಗರಗ ಗ್ರಾಮದ ವಿದ್ಯಾರ್ಥಿ ಶ್ಯಾಮರಾಜ್ (18) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಗಣಿತದಲ್ಲಿ ಫೇಲಾಗಿದ್ದ. ಪ್ರಕರಣ ದಾಖಲಾಗಿದೆ.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ: ಬಳ್ಳಾರಿಯಲ್ಲಿ ನಪಾಸಾದ ವಿದ್ಯಾರ್ಥಿ ಪವನ್ ಸಾಯಿ (18) ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

LEAVE A REPLY

Please enter your comment!
Please enter your name here

Hot Topics

ಕೋಟ್ಯಧಿಪತಿ ಉದ್ಯಮಿ ರಾಕೇಶ್ ಝುಂಝುನ್‌ವಾಲಾ ನಿಧನ

ಹೊಸದಿಲ್ಲಿ: ದೇಶದ ಖ್ಯಾತ ಹೂಡಿಕೆದಾರ, ಕೋಟ್ಯಧಿಪತಿ ಉದ್ಯಮಿ ರಾಕೇಶ್ ಝುಂಝುನ್‌ವಾಲಾ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮುಂಬಯಿಯ ಆಸ್ಪತ್ರೆಯೊಂದರಲ್ಲಿ ಅವರು ನಿಧನರಾಗಿದ್ದಾರೆ. ಅವರು ಈ ಹಿಂದೆ ತಮ್ಮ ಸಿಂಪಲ್‌...

ಮಾಲ್‌ನಲ್ಲಿ ಸಾವರ್ಕರ್​ ಫೋಟೋ ಹಾಕಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಆರೋಪಿ ಬಂಧನ

ಶಿವಮೊಗ್ಗ: ಸಿಟಿ ಸೆಂಟರ್ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್​ ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಆಸೀಫ್​ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸದ್ಯ ನ್ಯಾಯಾಲಯ ಆ. 26ರವರೆಗೆ ಆಸೀಫ್​ನನ್ನು ನ್ಯಾಯಾಂಗ ಬಂಧನದಲ್ಲಿ...

ಶಿರಾಡಿ ಘಾಟ್ ಹೆದ್ದಾರಿಗೆ ಶಾಶ್ವತ ಯೋಜನೆ ರೂಪಿಸುವಂತೆ ಗಡ್ಕರಿಗೆ ಮನವಿ ಮಾಡಿದ ಸಂಸದ ಡಾ. ಹೆಗ್ಗಡೆ

ಮಂಗಳೂರು: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯನ್ನು ಬೆಸೆಯುವ ಶಿರಾಡಿ ಘಾಟ್ ಹಾದುಹೋಗುವ ಹೆದ್ದಾರಿ ಬಗ್ಗೆ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕಳೆದ ಶನಿವಾರ ದೆಹಲಿಯಲ್ಲಿ...