LATEST NEWS
ಬೆಂಗಳೂರು: ಚಾರ್ಜ್ಶೀಟ್ ಸಲ್ಲಿಕೆ; ಪಾಕಿಸ್ತಾನ ಪ್ರಜೆಗಳ ಬಂಧನ
Published
3 weeks agoon
ಮಂಗಳೂರು/ಬೆಂಗಳೂರು: ಪಾಕಿಸ್ತಾನ ಪ್ರಜೆಗಳ ಬಂಧನಕ್ಕೆ ಸಂಬಂಧಿಸಿದಂತೆ ಜಿಗಣಿಯಲ್ಲಿ ಒಂದು ಪ್ರಕರಣವನ್ನು ಪೊಲೀಸರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 22 ಮಂದಿ ಬಂಧಿತ ಆರೋಪಿಗಳ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 12 ಜನ ಆರೋಪಿಗಳ ಒಂದು ಪ್ರಕರಣದ ತನಿಖೆ ಪೂರ್ಣಗೊಳಿಸಿ 1000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿಕೆ ಮಾಡಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಹಲವು ವಿಚಾರಗಳು ಉಲ್ಲೇಖವಾಗಿವೆ.
ಪ್ರಕರಣದ ಪ್ರಮುಖ ಆರೋಪಿ ರಶೀದ್ ಅಲಿ ಸಿದ್ದಿಕ್ಕಿ ಪಾಕಿಸ್ತಾನ ಮೂಲದವನೆಂದು ಎಂದು ಸಾಬೀತು ಆಗಿದೆ. ಆರೋಪಿ ರಶೀದ್ ಅಲಿ ಸಿದ್ದಿಕ್ಕಿ ಬಳಿ ಪಾಕಿಸ್ತಾನದ ಶಾಶ್ವತ ನಿವಾಸ ಪ್ರಮಾಣಪತ್ರ ಪತ್ತೆಯಾಗಿದೆ. 12 ಜನ ಆರೋಪಿಗಳಲ್ಲಿ ಎಂಟು ಮಂದಿ ಪುರುಷರು, ಮೂವರು ಮಹಿಳೆಯರು ಮತ್ತು ಓರ್ವ ಬಾಲಕಿ ಇದ್ದಾಳೆ. ಈ ಎಲ್ಲರೂ ಅಕ್ರಮವಾಗಿ ಭಾರತಕ್ಕೆ ಬಂದಿಸಿದ್ದಾರೆ.
ಪಾಕಿಸ್ತಾನ ನಿವಾಸಿಗಳು 22 ಮಂದಿಯನ್ನ ಬಹಿಷ್ಕರಿಸಿದ್ದರು. ಬಳಿಕ ಆರೋಪಿಗಳು ಪಾಕಿಸ್ತಾನ ತೊರೆದು ಭಾರತದ ಕಡೆ ಮುಖ ಮಾಡಿದ್ದರು. ವೀಸಾ, ಪಾಸ್ ಪೋರ್ಟ್ ಇಲ್ಲದಂತೆ ಅಕ್ರಮವಾಗಿ ಭಾರತದೊಳಗೆ ನುಸುಳಿದರು. ದೆಹಲಿಯಲ್ಲಿ ನಕಲಿ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮಾಡಿಕೊಂಡಿದ್ದಾರೆ. ಅಲ್ಲದೇ ಭಾರತದ ಪಾಸ್ ಪೋರ್ಟ್ ಸಹ ಮಾಡಿಕೊಂಡಿದ್ದಾರೆ.
‘ಮುಸ್ಲಿಂ ಹೆಸರುಗಳನ್ನ ಹಿಂದೂಗಳ ಹೆಸರುಗಳನ್ನಾಗಿ ಬದಲಿಸಿಕೊಂಡು, ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿ ಹಲವೆಡೆ ವಾಸವಾಗಿದ್ದರು. ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ರಾಜ್ಯಕ್ಕೆ ಬಂದಿದ್ದ ಪಾಕಿಸ್ತಾನ ಪ್ರಜೆಗಳು ದಾವಣಗೆರೆ ನಂತರ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಬೆಂಗಳೂರಿನ ಆನೇಕಲ್ ಸಮೀಪದ ಜಿಗಣಿ ಹಾಗೂ ಪೀಣ್ಯದಲ್ಲಿ ನೆಲೆಸಿದ್ದ ಆರೋಪಿಗಳು, ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮ ಬೋಧನೆ ಮಾಡುತ್ತಿದ್ದರು. ತಮ್ಮದೇ ಯೂಟ್ಯೂಬ್ ತೆರೆದು ಅದರಲ್ಲಿ ಧರ್ಮ ಪ್ರಚೋದನೆಯಲ್ಲಿ ತೊಡಗಿದ್ದರು. ಆರೋಪಿಗಳೆಲ್ಲರೂ ಮೆಹದಿ ಫೌಂಡೇಶನ್ನ ಸದಸ್ಯರಾಗಿದ್ದಾರೆ’ ಎಂದು ದೋಷಾರೋ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಸದ್ಯ ಇವೆಲ್ಲ ಅಂಶಗಳ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಸೂಕ್ತ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಪಾಕಿಸ್ತಾನ ಪ್ರಜೆಗಳು ಸೇರಿದಂತೆ ಹಲವು ಮಂದಿಯ ಹೇಳಿಕೆ ದಾಖಲು ಮಾಡಿದ್ದಾರೆ. ತಾಂತ್ರಿಕ ಸಾಕ್ಷ್ಯಗಳು, ಸಿಡಿಆರ್ ರಿಪೋರ್ಟ್ ಟವರ್ ಡಂಟ್ ಮತ್ತು ಯೂಟ್ಯೂಬ್ ಚಾನೆಲ್ ವಿವರನ್ನು ಕಲೆ ಹಾಕಿದ್ದಾರೆ. ಹಾಗೇ, ಬಂಧಿತ ಆರೋಪಿಗಳ ಬಳಿ ಇದ್ದ ಮೊಬೈಲ್ನಲ್ಲಿನ ಆಡಿಯೋ ಮತ್ತು ವಿಡಿಯೋವನ್ನು ಸಂಗ್ರಹಿಸಿದ್ದಾರೆ.
BELTHANGADY
ಅರಣ್ಯ ವಾಸಿಗಳ ಸಮಸ್ಯೆ ಬಗೆಹರಿಸಲು ಅರಣ್ಯ ಸಚಿವರಿಗೆ ಮನವಿ..!
Published
11 hours agoon
23/12/2024By
NEWS DESKಮಂಗಳೂರು : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು.
ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು . ಜಂಟಿ ಸರ್ವೇ ನಡೆಸಿ , ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಆದಿವಾಸಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಇತರರಿಗೆ ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಅವಕಾಶ ನಿರಾಕರಣೆ ಮಾಡಬೇಕು. ಕಸ್ತೂರಿ ರಂಗನ್ ವರದಿ ಸೇರಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ , ಆನೆ ಕಾರಿಡಾರ್ , ಅರಣ್ಯ ಸೂಕ್ಷ್ಮ ವಲಯ , ಹುಲಿ ಸಂರಕ್ಷಿತ ವಲಯ ಸೇರಿದಂತೆ ವಿವಿಧ ಯೋಜನೆಗಳ ಹೆಸರಿನಲ್ಲಿ ಅರಣ್ಯವಾಸಿಗಳಿಗೆ ತೊಂದರೆ ಉಂಟುಮಾಡುವ ಯಾವುದೇ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬಾರದು . ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳಲ್ಲಿ ಅರಣ್ಯವಾಸಿಗಳಿಗೆ ಪ್ರಾಶಸ್ತ್ಯ ನೀಡುವ ವಿಚಾರ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು. ಸಮಸ್ಯೆಗಳನ್ನು ಕಾನೂನಿನ ಪರಿಮಿತಿಯಲ್ಲಿ ಬಗೆಹರಿಸಲು ಸಹಾಯ ಮಾಡುವಂತೆ ಸಚಿವರು ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇತರ ರಾಜ್ಯ ಮಟ್ಟದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು. ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ನೆರಿಯ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.
LATEST NEWS
ಪೂಜಾ ಖೇಡ್ಕರ್ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್ !
Published
11 hours agoon
23/12/2024By
NEWS DESK3ಮಂಗಳೂರು/ನವದೆಹಲಿ: ನೇಮಕಾತಿ ರದ್ದಾಗಿರುವ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಇಂದು (ಸೋಮವಾರ) ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ ಸಿ) ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಅಂಗವೈಕಲ್ಯತೆ ಸಮಸ್ಯೆಯಿಂದ ಬಳಲುತ್ತಿರುವಂತೆ ನಕಲಿ ದಾಖಲೆಗಳನ್ನು ನೀಡಿ ಮೀಸಲಾತಿಯ ದುರುಪಯೋಗಪಡಿಸಿಕೊಂಡಿರುವ ಆರೋಪ ಪೂಜಾ ಮೇಲಿದೆ.
ಪೂಜಾ ಖೇಡ್ಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರಧಾರಿ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ: ಇವರು 50 ವರ್ಷಗಳಿಂದ ಅಂಗಿ ಹಾಕಿಲ್ಲ; ಕಾರಣ ಏನು ಗೊತ್ತಾ ?
ಪೂಜಾ ಖೇಡ್ಕರ್ ಅವರ ವಿರುದ್ದ ಪ್ರಬಲವಾದ ಪ್ರಕರಣ ದಾಖಲಾಗಿದ್ದು, ಪ್ರಕರಣದ ಸತ್ಯಾಸತ್ಯತೆ ತಿಳಿಯಬೇಕಾದರೆ ಸೂಕ್ತ ತನಿಖೆಯ ಅಗತ್ಯವಿದೆ. ಹಾಗಾಗಿ ಪೂಜಾ ಅವರು ತನಿಖೆಗೆ ಸಹಕರಿಸಬೇಕು’ ಎಂದೂ ನ್ಯಾಯಮೂರ್ತಿ ಸಿಂಗ್ ತಿಳಿಸಿದ್ದಾರೆ.
ಯುಪಿಎಸ್ ಸಿ ಪರ ಹಿರಿಯ ವಕೀಲ ನರೇಶ್ ಕೌಶಿಕ್ ಮತ್ತು ವಕೀಲ ವರ್ಧಮಾನ್ ಕೌಶಿಕ್ ವಾದ ಮಂಡಿಸಿದ್ದರು.
ಪ್ರಕರಣ ಸಂಬಂಧ ಕೆಲವು ದಿನಗಳ ಹಿಂದೆ ಪೂಜಾ ಖೇಡ್ಕರ್ ವಿರುದ್ದ ದೆಹಲಿ ಪೊಲೀಸರು ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ವಿಕಲಚೇತನರ ಹಕ್ಕು ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಿದ್ದರು.
BELTHANGADY
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ
Published
12 hours agoon
23/12/2024By
NEWS DESK2ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪತ್ನಿ ಗೀತಾ ಖಂಡ್ರೆ ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ್ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ ಬೆಲ್ಲ ಮತ್ತು ಕಡ್ಲೆ ಬೇಳೆಯಿಂದ ಧರ್ಮಾಧಿಕಾರಿಗಳ ಮುಂದೆ ತುಲಭಾರ ಸೇವೆ ಮಾಡಿಸಿದರು. ಬಳಿಕ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಸಚಿವರ ಭೇಟಿ ವೇಳೆ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು DCF ಶ್ರೀಕಾಂತ್ ಖಣದಾಳಿ ಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.
LATEST NEWS
ಎಲಿಮಿನೇಷನ್ ಹೈಡ್ರಾಮಾ: ಬಿಗ್ ಬಾಸ್ನಿಂದ ಹೊರಬಂದ ತ್ರಿವಿಕ್ರಮ್!
ಕುಂದಾಪುರ: ಗಾಳಿ ತುಂಬಿಸುತ್ತಿದ್ದ ವೇಳೆ ಟೈರ್ ಸ್ಫೋಟ: ಯುವಕನಿಗೆ ಗಂಭೀರ ಗಾಯ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು
ಎನ್ಕೌಂಟರ್ನಲ್ಲಿ ಮೂವರು ಖಲಿಸ್ತಾನಿ ಭ*ಯೋತ್ಪಾದಕರ ಹ*ತ್ಯೆ
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು
ಖಾಸಗಿ ವಿಮಾನ ಪತನ; 10 ಜನ ಸಾವು, ಹಲವರಿಗೆ ಗಾಯ !
Trending
- LATEST NEWS5 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್
- BIG BOSS4 days ago
ಚೈತ್ರಾ ಕುಂದಾಪುರಗೆ ಮತ್ತೆ ಜೈಲು.. ಮುಂದಿನ ವಾರಕ್ಕೆ ಕ್ಯಾಪ್ಟನ್ ಯಾರೆಂದು ರಿವೀಲ್..!
- DAKSHINA KANNADA6 days ago
ಸಾವಿರ ಕಂಬದ ಬಸದಿಗೆ ಜಪಾನ್ನಿಂದ ಬಂದ ಅತಿಥಿಗಳು
- BIG BOSS4 days ago
ಬಿಗ್ಬಾಸ್ನಲ್ಲಿ ಶಾಕಿಂಗ್ ಟ್ವಿಸ್ಟ್; ಮನೆಯಿಂದ ಆಚೆ ಹೋಗಲು ಸ್ಟ್ರಾಂಗ್ ಸ್ಪರ್ಧಿಗಳು ನಾಮಿನೇಟ್