Connect with us

    BELTHANGADY

    Kukke Subramanya : ಚಲಿಸುತ್ತಿದ್ದ ವಾಹನ ಮತ್ತು ಅಂಗಡಿ ಮೇಲೆ ಬಿದ್ದ ಬೃಹತ್ ಗಾತ್ರದ ಮರ

    Published

    on

    ಕುಕ್ಕೆ ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿರುವ ಟಾಟಾ ಸುಮೋ ಮತ್ತು ಸ್ಥಳೀಯ ಅಂಗಡಿಯೊಂದರ ಮೇಲೆ ಬಿದ್ದ ಪರಿಣಾಮ ಹಲವರು ಗಾಯಗೊಂಡಿದ್ದು, ಬಾರೀ ದೊಡ್ಡ ದುರಂತವೊಂದು ಅದೃಷ್ಟವಶಾತ್ ತಪ್ಪಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಪ್ರವಾಸಿಗರನ್ನು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಿಟ್ಟು ವಾಪಸಾಗುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಈ ಮರ ಬಿದ್ದಿದೆ. ವಾಹನದಲ್ಲಿದ್ದ ಮೂಜೂರು ನಿವಾಸಿ ಶೇಖರ ಎಂಬವರು ಗಂಭೀರ ಗಾಯಗೊಂಡಿದ್ದಾರೆ.

    ಮಾತ್ರವಲ್ಲದೆ ಅಲ್ಲೇ ಸ್ಥಳೀಯ ಅಂಗಡಿಯೊಂದರ ಮೇಲೂ ಈ ಮರ ಬಿದ್ದಿದ್ದು ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಅಂಗಡಿಯಲ್ಲಿದ್ದ ಕೆಲವರಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ. ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅನುಮತಿ ನೀಡದಿರುವುದೇ ಇಂತಹ ದುರಂತಗಳು ಮರುಕಳಿಸಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಘಟನೆ ಎಲ್ಲಾದರೂ ಬೆಳಗ್ಗೆ ನಡೆಯುತ್ತಿದ್ದರೆ ಇದೇ ಜಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಹಲವಾರು ಮಂದಿ ವಿದ್ಯಾರ್ಥಿಗಳು,ಸಾರ್ವಜನಿಕರ ಪ್ರಾಣಕ್ಕೆ ತೊಂದರೆ ಎದುರಾಗುತ್ತಿತ್ತು.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಬ್ರಹ್ಮಣ್ಯ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಪ್ರಮೋದ್ ಅವರು, ‘ನಾವು ಇಂತಹ ಅಪಾಯಕಾರಿ ಮರಗಳನ್ನು ತೆರವು ಮಾಡುವ ಬಗ್ಗೆ ಅರಣ್ಯ ಇಲಾಖೆಗೆ ಹಲವು ಬಾರಿ ಮನವಿಗಳನ್ನು ನೀಡಿದ್ದೇವೆ. ಆದರೆ ಮರ ತೆರವು ಮಾಡಲು ನಮಗೆ ಅನುಮತಿ ದೊರೆತಿಲ್ಲ ಎಂದು ತಿಳಿಸಿದ್ದಾರೆ. ಆದರೆ ಆರಣ್ಯ ಇಲಾಖೆಯವರು ಬೇರೆಯೇ ಪ್ರತಿಕ್ರಿಯೆ ಕೊಡುತ್ತಿದ್ದಾರೆ. ಸುಬ್ರಹ್ಮಣ್ಯ ವಲಯ ಅರಣ್ಯ ಅಧಿಕಾರಿ ವಿಮಲ್ ಅವರು ಮಾಹಿತಿ ನೀಡಿ, ಲೋಕೋಪಯೋಗಿ ಇಲಾಖೆಯು ಅಪಾಯಕಾರಿ ಎಂದು ಸೂಚಿಸಿದ ಬಹುತೇಕ ಮರಗಳನ್ನು ತೆರವು ಮಾಡಲಾಗಿದೆ. ರಸ್ತೆ ಅಗಲೀಕರಣ ವೇಳೆಗೆ ಮತ್ತೆ ಹಲವು ಮರಗಳು ರಸ್ತೆ ಬದಿಗೆ ಬಂದಿವೆ.ಇದನ್ನು ಅಪಾಯಕಾರಿ ಮರ ಎಂದು ಪರಿಗಣಿಸುವಂತಿಲ್ಲ. ಅವು ‘ಅಡಚಣೆ ಮರಗಳ’ ಪಟ್ಟಿಯಲ್ಲಿ ಬರುತ್ತವೆ. ಆದರೂ ಹಲವು ಕಡೆ ಅಪಾಯಕಾರಿ ಮರಗಳು ಗಮನಕ್ಕೆ ಬಂದಿವೆ. ಸ್ಥಳೀಯ ಪಂಚಾಯತ್‌ನವರು ಇಂತಹ ಮರಗಳ ತೆರವಿಗೆ ಮನವಿ ಮಾಡಿದರೆ ಈ ಬಗ್ಗೆ ಇಲಾಖೆಯ ಉನ್ನತ ಅಧಿಕಾರಿಗಳ ಅನುಮತಿಗೆ ಬರೆದು ಕೂಡಲೇ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    Baindooru

    ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

    Published

    on

    ಬೆಳ್ತಂಗಡಿ: ಯುವಕನೊಬ್ಬತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೋಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.22ರ ಶುಕ್ರವಾರ ನಡೆದಿದೆ.

    ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್(21) ಆತ್ಮಹತ್ಯೆಗೆ ಯತ್ನಿಸಿದ ಯುವಕ.

    ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದ ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ ಎಂದು ತಿಳಿದು ಬಂದಿದೆ.

    ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಹರಿದ ರೀತಿಯಲ್ಲಿತ್ತು. ಅದನ್ನು ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಮಾರುಕಟ್ಟೆಯಲ್ಲಿದ್ದ ಪಡ್ಡೆ ಹುಡುಗರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು.

    ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬಿರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರದ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.

    ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು, ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಈ ಘಟಣೆ ಬಗ್ಗೆ ಸಾರ್ವಜನಿಕರು ಈ ಮೂವರನ್ನು ಪುಂಡರ ವಿರುದ್ಧ ಕಠಿನ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

    Continue Reading

    Baindooru

    ಧರ್ಮಸ್ಥಳದಲ್ಲಿ ಪೊಣ್ಣಂ ಪ್ರಭಾಕರ್ ವಿಶೇಷ ಪೂಜೆ

    Published

    on

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಮತ್ತು ಕುಟುಂಬದವರು ನ.21ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

    ಸಚಿವರ ಜತೆಯಲ್ಲಿ ಪತ್ನಿ ಪ್ರಮೀಳಾ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮೈಸೂರಿನ ಉದ್ಯಮಿ ಎಂ.ಕೆ.ಪೋತ್‌ರಾಜ್, ಉದ್ಯಮಿ ಕಲಬುರಗಿಯ ಸಂತೋಷ್ ಗುತ್ತೆದಾರ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಉಜಿರೆ, ಬೆಳ್ತಂಗಡಿ ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ನವೀನ್ ಗೌಡ ಸವಣಾಲು, ಕಾಂಗ್ರೆಸ್ ಮುಖಂಡ ರಾಘವೇಂದ್ರ ಪೂಜಾರಿ ಮತ್ತಿತರಿದ್ದರು.

    Continue Reading

    BELTHANGADY

    ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ

    Published

    on

    ಬೆಳ್ತಂಗಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಾಳೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

    ಮೊದಲಿಗೆ ಶ್ರೀ ಮಂಜುನಾಥನ ದರ್ಶನ ಪಡೆದು, ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ 600 ಕೋಟಿ ರೂ. ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್‌ ಕುಮಾರ್‌ತಿಳಿಸಿದ್ದಾರೆ.

    ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ನಬಾರ್ಡ್‌ ಅಧ್ಯಕ್ಷ ಶಾಜಿ, ಕೆ.ವಿ. ಸಂಸದ ಬ್ರಿಜೇಶ್‌ ಚೌಟ, ಶಾಸಕ ಹರೀಶ್‌ ಪೂಂಜ ಶುಭಾಶಂಸನೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

    Continue Reading

    LATEST NEWS

    Trending