DAKSHINA KANNADA
ಸಕ್ಸೆಸ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆ ,ನಿರ್ದೇಶನದ ತುಳು ಚಿತ್ರ “ಸರ್ಕಸ್” ತೆರೆಗೆ..!
ಸಕ್ಸೆಸ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಶುಕ್ರವಾರ ಬೆಳಗ್ಗೆ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.
ಮಂಗಳೂರು: ಸಕ್ಸೆಸ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಶುಕ್ರವಾರ ಬೆಳಗ್ಗೆ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.
ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪ್ರೋತ್ಸಾಹ ನೀಡುತ್ತಿರುವುದು ಖುಷಿಯ ವಿಚಾರ ಎಂದರು.
ತುಳು ಚಿತ್ರರಂಗಕ್ಕೆ ಕೆ.ಎನ್. ಟೇಲರ್ ಅವರಂತಹ ಹಿರಿಯರಿಂದ ಇಂದಿನ ಯುವ ಕಲಾವಿದರ ತನಕ ನೂರಾರು ಮಂದಿ ದುಡಿದಿದ್ದಾರೆ.
ಅವರೆಲ್ಲರ ಶ್ರಮದಿಂದ ತುಳು ಸಿನಿಮಾಗಳು ತುಳುವರ ಪ್ರೀತಿಯನ್ನು ಗಳಿಸಿದೆ. ಸಿನಿಮಾವನ್ನು ನೋಡಿ ಬೆನ್ನುತಟ್ಟಿ ಪ್ರೋತ್ಸಾಹಿಸಿ” ಎಂದರು.
ಬಳಿಕ ಮಾತಾಡಿದ ಭೋಜರಾಜ್ ವಾಮಂಜೂರು, “ಸರ್ಕಸ್ ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ಗಿರಿಗಿಟ್ ಬಳಿಕ ಮತ್ತೊಮ್ಮೆ ಅದೇ ತಂಡದ ಮೂಲಕ ನಾವೆಲ್ಲರೂ ಜೊತೆಯಾಗಿ ನಟಿಸಿದ್ದೇವೆ ಎಂದರು.
ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಮಾತಾಡಿ, “ಸರ್ಕಸ್ ಚಿತ್ರ ತುಳುನಾಡಿನಲ್ಲಿ ಸಕ್ಸಸ್ ಆಗಲಿ. ಇನ್ನಷ್ಟು ತುಳು ಚಿತ್ರಗಳು ಬಿಡುಗಡೆಗೊಂಡು ತುಳುವರ ಮನಗೆಲ್ಲಲಿ” ಎಂದು ಶುಭ ಹಾರೈಸಿದರು.
ಅರ್ಜುನ್ ಕಾಪಿಕಾಡ್ ಮಾತಾಡಿ, “ತುಳು ಚಿತ್ರರಂಗದಲ್ಲಿ ಸರ್ಕಸ್ ಸಿನಿಮಾ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲಿ ಸಿನಿಮಾ ಯಶಸ್ಸು ಕಾಣಲಿ” ಎಂದರು.
ಸಮಾರಂಭದಲ್ಲಿ ಪ್ರಕಾಶ್ ಪಾಂಡೇಶ್ವರ್, ವಾಲ್ಟರ್ ನಂದಳಿಕೆ, ವಿ.ಜಿ.ಪಾಲ್, ತಮ್ಮ ಲಕ್ಷ್ಮಣ, ರೂಪೇಶ್ ಶೆಟ್ಟಿ, ರಚನಾ ರೈ, ಸುಧಾಕರ ಶೆಟ್ಟಿ ಮುಗ್ರೋಡಿ, ಅನಿಲ್ ಶೆಟ್ಟಿ, ಮಂಜುನಾಥ್ ಅತ್ತಾವರ, ಸಂಪತ್ ಶೆಟ್ಟಿ, ಭೋಜರಾಜ್ ವಾಮಂಜೂರ್, ಸಚಿನ್ ಎ ಎಸ್ ಉಪ್ಪಿನಂಗಡಿ, ಅನಿಲ್ ದಾಸ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಪ್ರಕಾಶ್ ತೂಮಿನಾಡ್, ಪ್ರದೀಪ್ ಆಳ್ವ ಕದ್ರಿ, ಸಾಯಿಕೃಷ್ಣ ಕುಡ್ಲ, ರಾಜಗೋಪಾಲ್ ರೈ, ದಿವಾಕರ್ ಪಾಂಡೇಶ್ವರ, ನಾರಾಯಣ ಪೂಜಾರಿ, ತಾರಾನಾಥ ಶೆಟ್ಟಿ ಬೋಳಾರ, ಮುಖೇಶ್ ಹೆಗ್ಡೆ, ಇಸ್ಮಾಯಿಲ್ ಮೂಡುಶೆಡ್ಡೆ, ಲಾಯ್ ವೇಲೆಂಟೈನ್ ಸಲ್ದಾನ, ಚಂದ್ರಹಾಸ್ ಉಳ್ಳಾಲ್, , ನವೀನ್ ಶೆಟ್ಟಿ ಎಡ್ಮೆಮಾರ್, ನವೀನ್ ಶೆಟ್ಟಿ, ಅಥರ್ವ ಪ್ರಕಾಶ್, ಆನಂದ ಕುಂಪಲ ಮತ್ತಿತರರು ಉಪಸ್ಥಿತರಿದ್ದರು.
ಸರ್ಕಸ್ ಚಿತ್ರಕ್ಕೆ ಶೂಲಿನ್ ಫಿಲಂಸ್, ಮುಗ್ರೋಡಿ ಫಿಲಂಸ್, ಮಂಜುನಾಥ ಅತ್ತಾವರ ಬಂಡವಾಳ ಹೂಡಿದ್ದಾರೆ.
ರೂಪೇಶ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ ಕುಡ್ಲ, ನಟಿ ರಚನಾ ರೈ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಚಂದ್ರಹಾಸ ಉಳ್ಳಾಲ, ಪಂಚಮಿ ಭೋಜರಾಜ್, ರೂಪ ವರ್ಕಾಡಿ, ಪ್ರದೀಪ್ ಆಳ್ವ ಕದ್ರಿ, ನಿತೇಶ್ ಶೆಟ್ಟಿ ಎಕ್ಕಾರ್ ಅಭಿನಯಿಸಿದ್ದಾರೆ.
ಕನ್ನಡದ ಖ್ಯಾತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಟೈಟಲ್ ಹಾಡಿಗೆ ಲೋಯ್ ವಾಲೆಂಟೈನ್ ಸಲ್ದಾನ ಇವರ ಸಂಗೀತವಿದೆ.
ನವೀನ್ ಶೆಟ್ಟಿ ನೃತ್ಯ ಸಂಯೋಜನೆ ಮಾಡಿದ್ದಾರೆ. ರೂಪೇಶ್ ಶೆಟ್ಟಿ ಸಾಹಿತ್ಯ ಬರೆದಿದ್ದಾರೆ. “ಗಿರಿಗಿಟ್” ಖ್ಯಾತಿಯ ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಬರೆದಿದ್ದಾರೆ. ನವೀನ್ ಶೆಟ್ಟಿ ನೃತ್ಯ ಸಂಯೋಜನೆ, ನಿರಂಜನ್ ದಾಸ್ ಕ್ಯಾಮರಾ, ರಾಹುಲ್ ವಸಿಸ್ಠ ಸಂಕಲನದ ಜವಾಬ್ದಾರಿ ವಹಿಸಿದ್ದಾರೆ.
ವಿಶ್ವದಾದ್ಯಂತ ‘ಸರ್ಕಸ್ ‘ಬಿಡುಗಡೆ
ಸರ್ಕಸ್ ತುಳು ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್, ಮೂಡಬಿದ್ರೆಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಕೊಪ್ಪದಲ್ಲಿ ಜೆಎಂಜೆ ಟಾಕೀಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಸುಳ್ಯದಲ್ಲಿ ಸಂತೋಷ್, ಕಾಸರಗೋಡಿನಲ್ಲಿ ಕೃಷ್ಣ, ಮುಳ್ಳೇರಿಯದಲ್ಲಿ ಕಾವೇರಿ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆ ಕಾಣಲಿದೆ.
ಅದೇ ರೀತಿ ದುಬಾಯಿ, ಅಬುದಾಬಿ, ಅಜ್ಮಾನ್, ಶಾರ್ಜಾ, ಓಮಾನ್, ಮಸ್ಕತ್, ಕತಾರ್, ಮೊದಲಾದ ದೇಶಗಳಲ್ಲಿ ಸರ್ಕಸ್ ಸಿನಿಮಾ ತೆರೆಕಂಡಿದೆ.
ಸರ್ಕಸ್ ನ ಅದ್ದೂರಿ ಮೆರವಣಿಗೆ..!
ಬೆಳಿಗ್ಗೆ ನೆಹರೂ ಮೈದಾನದಿಂದ ಭಾರತ್ ಮಾಲ್ ವರೆಗೆ ಸರ್ಕಸ್ ತಂಡದಿಂದ ಅದ್ದೂರಿ ಮೆರವಣಿಗೆ ನಡೆಯಿತು. ಸರ್ಕಸ್ ಸಿನಿಮಾದ ಕಲಾವಿದರೊಂದಿಗೆ ತುಳು ಚಿತ್ರರಂಗದ ಕಲಾವಿದರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಕೊಂಬು ಕಹಳೆ, ವಾದ್ಯ, ಕಲ್ಲಡ್ಕದ ಗೊಂಬೆಯನ್ನು ಬಳಸಲಾಗಿತ್ತು. ದಾರಿಯುದ್ದಕ್ಕೂ ಸರ್ಕಸ್ ಸಿನಿಮಾಕ್ಕೆ ಜೈಕಾರಗಳನ್ನು ಕೂಗಲಾಯಿತು. ಭಾರೀ ಸಂಖ್ಯೆಯಲ್ಲಿ ಚಿತ್ರಪ್ರೇಮಿಗಳು ಭಾಗಿಯಾಗಿದ್ದರು.
DAKSHINA KANNADA
Ullala: ಡ್ರಗ್ಸ್ ಮಾರಾಟ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!!
ಮಂಗಳೂರು: ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರ ಎಂಬಲ್ಲಿ ಡಿ. 4 ರಂದು ನಿಷೇದಿತ ಮಾದಕ ವಸ್ತು ಮೆಥಂಫೆಟಮೈನ್ ಮತ್ತು ಎಲ್.ಎಸ್.ಡಿ. ಸ್ಟಾಂಪ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಡ್ರಗ್ ಪೆಡ್ಲರ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಶಿತ್ ಯಾನೆ ಅಶ್ವಿತ್ ಯಾನೆ ಆಶು ಬಂಧಿತ ಆರೋಪಿ. ಆರೋಪಿಯನ್ನು ಕೋಟೆಕಾರು ಗ್ರಾಮದ ಮಾಡೂರು ಸಾಯಿ ಮಂದಿರದ ಸಮೀಪದ ಗ್ರೌಂಡ್ ಬಳಿ ಪತ್ತೆ ಮಾಡಿದ್ದು, ಆತನಿಂದ 6 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ತೂಕದ ಎಂ.ಡಿ.ಎಂ.ಎ., 30,000 ರೂಪಾಯಿ ಮೌಲ್ಯದ 600 ಗ್ರಾಂ ಗಾಂಜಾ, 1 ಲಕ್ಷ ರೂಪಾಯಿ ಮೌಲ್ಯದ ಕೆಟಿಎಂ ಡ್ಯೂಕ್ ಮೋಟಾರು ಸೈಕಲ್ ಸೇರಿದಂತೆ ಒಟ್ಟು 7 ಲಕ್ಷದ 77 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕ ಬಾಲಕೃಷ್ಣ. ಎಚ್.ಎನ್., ಪಿ.ಎಸ್.ಐ.ಗಳಾದ ಶೀತಲ್ ಅಲಗೂರ ಮತ್ತು ಸಂತೋಷ ಕುಮಾರ್.ಡಿ. ಹಾಗೂ ಮಂಗಳೂರು ದಕ್ಷಿಣ ಉಪ-ವಿಭಾಗದ ಎ.ಸಿ.ಪಿ. ನೇತೃತ್ವದ ಡ್ರಗ್ಸ್ ನಿಗ್ರಹ ದಳದ ಪಿ.ಎಸ್.ಐ. ಪುನಿತ್ ಗಾಂವ್ಕರ್ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಡಿ. 4 ರಂದು ಆರೋಪಿಗಳಾದ ಶಿಶಿರ್ ದೇವಾಡಿಗ ಮತ್ತು ಶುಶಾನ್.ಎಲ್. ಅವರನ್ನು ಪೊಲೀಸರು ಬಂಧಿಸಿ ಅವರಿಂದ 132 ಗ್ರಾಂ ತೂಕದ ಮೆಥಂಫೆಟಮೈನ್ ಮತ್ತು 250 ಎಲ್.ಎಸ್.ಡಿ. ಸ್ಟ್ಯಾಂಪ್ ಡ್ರಗ್, ನಗದು 3,70,050 ರೂಪಾಯಿ ಹಾಗೂ ಒಂದು ಸ್ವಿಪ್ಟ್ ಕಾರು ಸೇರಿದಂತೆ ಒಟ್ಟು 14 ಲಕ್ಷದ ಒಂದು ಸಾವಿರದ ಐವತ್ತು ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಇದೀಗ ಅದರ ಮುಂದುವರಿದ ಭಾಗವಾಗಿ 3ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
DAKSHINA KANNADA
Puttur : ವಿವಾದಕ್ಕೆ ಕಾರಣವಾದ ‘ಬುರ್ಖಾ ತೆಗೆದು ಒಳಗೆ ಬನ್ನಿ’ ಸೂಚನಾ ಫಲಕ
ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆ ಒಂದಲ್ಲಾ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿ ಇರುತ್ತದೆ. ಇದೀಗ ಆಸ್ಪತ್ರೆಯಲ್ಲಿ ಹಾಕಲಾಗಿರುವ ಸೂಚನಾ ಫಲಕವೊಂದು ವಿವಾದಕ್ಕೆ ಕಾರಣವಾಗಿದೆ. ‘ಬುರ್ಖಾ ತೆಗೆದು ಒಳಗೆ ಬನ್ನಿ’ ಎಂದು ಬರೆದ ಸೂಚನಾ ಫಲಕವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಈ ಸೂಚನಾ ಫಲಕವನ್ನು ಹಾಕಲಾಗಿದೆ. ರೋಗಿಗಳ ಇಸಿಜಿ ತೆಗೆಯುವ ರೂಮ್ ಬಾಗಿಲಿನಲ್ಲಿದ್ದ ಫಲಕವನ್ನು ಕಳೆದ ಒಂದು ವರ್ಷದ ಹಿಂದೆಯೇ ಹಾಕಲಾಗಿತ್ತು. ಸೂಚನಾ ಫಲಕ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದು ಹರಿಯ ಬಿಡಲಾಗಿತ್ತು. ಪುತ್ತೂರು ಶಾಸಕರು ಇರುವ ವಾಟ್ಸ್ ಅಪ್ ಗ್ರೂಪ್ ನಲ್ಲೂ ಈ ಪೋಸ್ಟ್ ಕಾಣಿಸಿಕೊಂಡಿತ್ತು. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಫಲಕ ತೆಗೆಯುವಂತೆ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಒತ್ತಡ ಹಾಕಲಾಗುತ್ತಿದೆ.
ಒತ್ತಡ ಹಿನ್ನಲೆಯಲ್ಲಿ ಸೂಚನಾ ಫಲಕ ತೆರವುಗೊಳಿಸಲಾಗಿದೆ. ಬುರ್ಖಾ ತೆಗೆಯದೆ ಇಸಿಜಿ ಮಾಡೋದು ಹೇಗೆಂದು ಗೊಂದಲದಲ್ಲಿರುವ ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳು, ಚಿಕಿತ್ಸೆಯಲ್ಲೂ ಧರ್ಮ ಎಳೆತಂದಿರುವ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಈ ಸೂಚನಾ ಫಲಕದ ಬಗ್ಗೆ ತನ್ನ ಸಮುದಾಯಕ್ಕೆ ಸ್ಪಷ್ಟೀಕರಣ ನೀಡಿದ ಪುತ್ತೂರು ನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋನು ಬಪ್ಪಳಿಗೆ ಅವರು, ಇಸಿಜಿ ಮಾಡಲು ಹೋಗುವ ಬಳಿ ಇರೋ ರೂಂನಲ್ಲಿ ಈ ಸೂಚನಾ ಫಲಕ ಹಾಕಲಾಗಿದೆ. ಹೆಚ್ಚಾಗಿ ನಮ್ಮ ಮುಸ್ಲಿಂ ಸಮುದಾಯಕ್ಕೆ ಸೇರಿದ ಡಾಕ್ಟರ್ ಗಳೇ ಇಲ್ಲಿ ಹೆಚ್ಚಿದ್ದಾರೆ. ಅದಲ್ಲದೇ ಅವರೆಲ್ಲರೂ ಹಿಜಾಬ್ ಧರಿಸಿಯೇ ಡ್ಯೂಟಿ ಮಾಡ್ತಾರೆ. ಹಾಗಿರುವಾಗ ಇಸಿಜಿಗೆ ತೆರಳುವ ಸಂದರ್ಭ ಬುರ್ಖಾ ತೆಗೆದು ಹೋಗ ಬೇಕಾಗುತ್ತದೆ. ಯಾಕೆಂದರೆ ದೊಡ್ಡ ದೊಡ್ಡ ಅಪಘಾತದ ಅಥವಾ ಇಸಿಜಿ ಸಂದರ್ಭದಲ್ಲಿ ಮಾತ್ರ ಬುರ್ಖಾ ತೆಗೆಯ ಬೇಕಾಗುತ್ತದೆ’ ಬುರ್ಖಾ ತೆಗೆಯದೆ ಇದ್ದಲ್ಲಿ ಚಿಕಿತ್ಸೆ ನೀಡುವುದು ಹೇಗೆ.. ಇಸಿಜಿ ಮಾಡುವುದು ಹೇಗೆ…? ಎಂದು ಅವರು ಪ್ರಶ್ನಿಸಿದ್ದಾರೆ. ಇದ್ಯಾವುದೋ ಕೋಮು ಭಾವನೆಯಲ್ಲಿ ಹಾಕಿದಂತಹ ಸೂಚನಾ ಫಲಕವಲ್ಲ’. ‘ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿ ಎಂಬಂತೆ ಕೆಲವರು ಪೋಸ್ಟ್ ವೈರಲ್ ಮಾಡಿದ್ದಾರೆ. ಆಸ್ಪತ್ರೆಯ ಒಳಗಡೆ ಬುರ್ಖಾ ಧರಿಸಿ ಹೋಗಬಹುದು, ಆದರೆ ಇಸಿಜಿಗೆ ಹೋಗುವ ಸಂದರ್ಭ ಬುರ್ಖಾ ತೆಗೆದು ಹೋಗ ಬೇಕು’ ಎಂದು ಸ್ಪಷ್ಟಣೆ ನೀಡಿದ್ದಾರೆ.
BELTHANGADY
ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!
ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಡಿ.10ಕ್ಕೆ ಬೆಳಿಗ್ಗೆ ಪತ್ತೆಯಾಗಿದೆ.
ನೇತ್ರಾವತಿ ನದಿಯಲ್ಲಿ ಭಕ್ತರು ಸ್ನಾನ ಮಾಡುತ್ತಿದ್ದಾಗ ಶವವೊಂದು ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು ಪೊಲೀಸರು ಉಜಿರೆ ಘಟಕ ಪ್ರತಿನಿಧಿ ರವೀಂದ್ರ ಇವರಿಗೆ ಫೋನ್ ಕರೆ ಮಾಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಇವರು ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಾದ ಶಿಶಿಲ- ಅರಿಸಿನಮಕ್ಕಿ ಘಟಕದ ಅವಿನಾಶ್ ಬಿಡೆ, ಉಜಿರೆ ಘಟಕದ ರಾಘವೇಂದ್ರ, ಶಶಿಕುಮಾರ್ ಇವರೊಂದಿಗೆ ಕಾರ್ಯಾಚರಣೆ ನಡೆಸಿ ಶವವನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.
ಪೊಲೀಸ್ ಠಾಣಾಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಶವವನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್
- bangalore3 days ago
ದೈವದ ರೀಲ್ಸ್ ಮಾಡಬೇಡಿ ಎಂದು ರಿಕ್ವೆಸ್ಟ್ ಮಾಡಿದ ಕಾಂತಾರ ರಿಷಬ್ ಶೆಟ್ಟಿ..!!