Connect with us

  BANTWAL

  ಸಾಧಕ ವಿದ್ಯಾರ್ಥಿಗಳು ನಮ್ಮೂರ ಹೆಮ್ಮೆ: ರಮಾನಾಥ ರೈ

  Published

  on

  ಬಂಟ್ವಾಳ: ಕೆಲವು ವರ್ಷಗಳ ಹಿಂದೆ ಅನಕ್ಷರತೆ ತುಂಬಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂದು ನಗರ ಭಾಗದ ವಿದ್ಯಾರ್ಥಿಗಳನ್ನು ಮೀರಿಸಿ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆ ಮೂಲಕ ಗ್ರಾಮೀಣ ಭಾಗದ ಜ್ಞಾನಿಗಳ ಊರಾಗಿ ಮಾರ್ಪಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.


  ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ದಕ್ಷಿಣ ಕನ್ನಡ ಇದರ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶನಿವಾರ ಬಿ.ಸಿ.ರೋಡಿನಲ್ಲಿ ಹಮ್ಮಿಕೊಂಡ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

  ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳು ನಮ್ಮೂರ ಹೆಮ್ಮೆಯಾಗಿದ್ದಾರೆ. ಅವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಅದರಿಂದ ಎನ್.ಎಸ್.ಯು.ಐ.ನಿಂದ ಗೌರವಿಸಲಾಗುತ್ತಿದೆ. ಇಂದಿನ ಸಾಧಕ ಸಾಧಕಿಯರು ಮುಂದೆ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಮೂಲಕ ನಿಮ್ಮ ಹೆತ್ತವರ ಋಣ ತೀರಿಸಬೇಕು ಎಂದರು.


  ಶಿಕ್ಷಣ ಕೊಡದ ತಂದೆ ತಾಯಿ ಮಕ್ಕಳ ಮೊದಲ ವೈರಿ. ಇಂದಿನ ಕಾಲದಲ್ಲಿ ಎಷ್ಟೇ ಕಷ್ಟ ಇದ್ದರೂ ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಶಾಲೆಗೆ ಕಳುಹಿಸುತ್ತಾರೆ. ಹೆಚ್ಚಿನ ಅಂಕ ಗಳಿಸಲು ಹೆತ್ತವರು, ಅಧ್ಯಾಪಕರು ಸಹಕಾರ, ಪರಿಶ್ರಮ ಪಡುತ್ತಿದ್ದಾರೆ. ಅಂತಹ ಪೋಷಕರು, ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳು ಹೆಮ್ಮೆ ಪಡಬೇಕು ಎಂದು ಹೇಳಿದರು.

  ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ನಾಯ್ಕ್ ಮಾತನಾಡಿ, ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಸಮಸ್ಯೆ ಬಂದರೂ ವಿದ್ಯಾರ್ಥಿಗಳು ಆತ್ಮಸ್ಥೈರ್ಯ, ಮಾನಸಿಕ ಸ್ಥೈರ್ಯ ಕಳೆದುಕೊಳ್ಳಬಾರದು. ಕೆಟ್ಟ ನಿರ್ಧಾರಗಳನ್ನು ಮಾಡಿ ಅತ್ಯಮೂಲ್ಯವಾದ ಜೀವನವನ್ನು ಕಳೆದುಕೊಳ್ಳಬೇಡಿ ಎಂದು ಕಿವಿ ಮಾತು ಹೇಳಿದರು.

  ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಅಲಿ, ಸುದರ್ಶನ್ ಜೈನ್, ಪದ್ಮಶೇಖರ್ ಜೈನ್, ಜಿಲ್ಲಾ ಉಪಾಧ್ಯಕ್ಷ ಪವನ್ ಸಾಲಿಯಾನ್, ಅಂಕುಶ್, ಅನ್ವಿತ್ ಕಟೀಲಿ, ನಜೀಬ್, ಮಲ್ಲಿಕಾ ವಿ. ಶೆಟ್ಟಿ, ಇಬ್ರಾಹೀಂ ನವಾಝ್, ಜಯಂತಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.


  ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾಝ್ ಸುಳ್ಯ ಪ್ರಸ್ತಾವಿಕವಿಕವಾಗಿ ಸ್ವಾಗತಿಸಿದರು. ಎನ್.ಎಸ್.ಯು.ಐ. ಜಿಲ್ಲಾ ಉಪಾಧ್ಯಕ್ಷ ಅಂಕುಶ್ ಧನ್ಯವಾದಗೈದರು.

  ಸುಹಾನ್ ಆಳ್ವ ಹಾಗೂ ಬಾತಿಶ್ ಅಲ್ಕೆಮಜಲು ಕಾರ್ಯಕ್ರಮ ನಿರೂಪಿಸಿದರು.

  BANTWAL

  ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

  Published

  on

  ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

  ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

  ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

  Continue Reading

  BANTWAL

  ಬಂಟ್ವಾಳ: ವಿದ್ಯುತ್ ಶಾ*ಕ್‌ ಹೊಡೆದು ಶಾಮಿಯಾನದ ಕೆಲಸಗಾರ ಬ*ಲಿ

  Published

  on

  ಬಂಟ್ವಾಳ: ಪುಂಜಾಲಕಟ್ಟೆಯಲ್ಲಿ ನಿನ್ನೆಯ ದಿನ ಶಾಮಿಯಾನದ ಲಾರಿ ಪಲ್ಟಿಯಾಗಿ ಓರ್ವ ಮೃ*ತಪಟ್ಟ ಘಟನೆಯ ಬೆನ್ನಲ್ಲೇ ಶಾಮಿಯಾನದ ಕೆಲಸಗಾರನೋರ್ವ ವಿದ್ಯುತ್ ಶಾ*ಕ್‌ ಗೆ ಬ*ಲಿಯಾದ ದುರಂ*ತ ಘಟನೆ ನಡೆದಿದೆ.

  ಲಾರಿಯಿಂದ ಶಾಮಿಯಾನದ ಸಾಮಾಗ್ರಿಗಳನ್ನು ಇಳಿಸುವ ವೇಳೆ ವಿದ್ಯುತ್ ವಯರ್ ತಾಗಿ ನಾಲ್ವರು ಕೆಲಸಗಾರರಿಗೆ ಗಾಯವಾಗಿದ್ದು, ಅದರಲ್ಲಿ ಓರ್ವ ಗಂಭೀರವಾಗಿ ಗಾ*ಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಇದ್ದರು. ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃ*ತಪಟ್ಟ ಘಟನೆ ಕಡೇಶಿವಾಲಯ ಸಮೀಪ ಕಾಡಬೆಟ್ಟು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

  ಈತ ಕಲ್ಲಡ್ಕ ಸಾಲಿಯಾನ್ ಶಾಮಿಯಾನದ ಕೆಲಸಗಾರರು ಎಂದು ಸ್ಥಳೀಯರು ತಿಳಿಸಿದ್ದು, ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ನಾಲ್ವರು ಕೆಲಸಗಾರರು ಉತ್ತರಪ್ರದೇಶ ಮೂಲದವರು ಎಂದು ಹೇಳಲಾಗುತ್ತಿದೆ.

  ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  BANTWAL

  ವಿಟ್ಲದಲ್ಲಿ ಕುಸಿದು ಬಿದ್ದ ಕೋಳಿ ಶೆಡ್; 1500ಕ್ಕೂ ಅಧಿಕ ಕೋಳಿ ಸಾ*ವು

  Published

  on

  ವಿಟ್ಲ: ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ.

  ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2200 ಕೋಳಿಗಳನ್ನು ಅವರು ಸಾಕಾಣೆ ಮಾಡುತ್ತಿದ್ದರು.

  ಶೆಡ್ಡಿನ ಮೇಲ್ಚಾವಣಿ ಒಮ್ಮೆಲೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಮಾರು 1500 ಕೋಳಿಗಳು ಅದರಡಿಗೆ ಬಿದ್ದು ಸತ್ತುಹೋಗಿವೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾ*ಶವಾಗಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.

  Continue Reading

  LATEST NEWS

  Trending