Thursday, September 29, 2022

ಎ. ಜೆ. ಆಸ್ಪತ್ರೆಯಲ್ಲಿ ಯಶಸ್ವೀ ದೊಡ್ಡ ಕರುಳಿನ ರೊಬೊಟಿಕ್ಸ್ ಶಸ್ತ್ರಚಿಕಿತ್ಸೆ..!

ಎ. ಜೆ. ಆಸ್ಪತ್ರೆಯಲ್ಲಿ ಯಶಸ್ವೀ ದೊಡ್ಡ ಕರುಳಿನ ರೊಬೊಟಿಕ್ಸ್ ಶಸ್ತ್ರಚಿಕಿತ್ಸೆ..!

ಮಂಗಳೂರು: ಮಂಗಳೂರಿನ  ಎ. ಜೆ. ಆಸ್ಪತ್ರೆಯಲ್ಲಿ ರೊಬೊಟಿಕ್ಸ್ ಶಸ್ತ್ರಚಿಕಿತ್ಸೆ ಮೂಲಕ ದೊಡ್ಡ ಕರುಳಿನ ಕ್ಯಾನ್ಸರ್ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಕುರಿತು ಆಸ್ಪತ್ರೆಯ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ದೀರ್ಘಕಾಲದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ  ಮಹಿಳೆಯಲ್ಲಿ 118 ಕೆಜಿ ತೂಕದ ದೊಡ್ಡ ಕರುಳಿನ ಕ್ಯಾನ್ಸರ್ ಪತ್ತೆ ಹಚ್ಚಲಾಗಿತ್ತು.

ಸ್ಥೂಲಕಾಯತೆ ಮತ್ತು ಕಿಡ್ನಿ ಸಮಸ್ಯೆಗಳಿದ್ದ ಕಾರಣ ಶಸ್ತ್ರಕ್ರಿಯೆಯಿಂದ ಹೆಚ್ಚಿನ ಪ್ರಾಣಪಾಯವಾಗುವ ಸಾಧ್ಯತೆಗಳಿದ್ದವು.

ಎ.ಜೆ. ಆಸ್ಪತ್ರೆಯ ಗ್ಯಾಸ್ಟ್ರೋ ಸರ್ಜನ್ ಡಾ. ರೊಹನ್ ಶೆಟ್ಟಿ ಮತ್ತು ಡಾ. ಅಶ್ವಿನ್ ಆಳ್ವ, ಅರಿವಳಿಕೆ ತಜ್ಞ ಡಾ. ಹರೀಶ್, ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಡಾ. ಶಿವಪ್ರಸಾದ್ ಬಿ, ನೆಫ್ರಾಲಜಿಸ್ಟ್ ಡಾ. ರಾಘವೇಂದ್ರ ನಾಯಕ್ ಹಾಗೂ ಕಾರ್ಡಿಯೊಲಜಿಸ್ಟ್ ಡಾ. ಪುರುಷೋತ್ತಮ್ ರನ್ನೊಳಗೊಂಡ ವೈದ್ಯರ ತಂಡವು ಈ ಶಸ್ತ್ರಕ್ರಿಯೆಯನ್ನು ನಿರ್ವಹಿಸಿದೆ.

ರೊಬೊಟಿಕ್ ಶಸ್ತ್ರಚಿಕಿತ್ಸೆಗಳು ವೈದ್ಯಕೀಯ ವಿಜ್ಞಾನದ ಇತ್ತೀಚಿನ ಆವಿಷ್ಕಾರವಾಗಿದ್ದು,  ನಿಖರ ಶಸ್ತ್ರಚಿಕಿತ್ಸೆ ಮಾಡುವಲ್ಲಿ ಸಹಾಯಕವಾಗಿದೆ.

ಈ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಲಭ್ಯವಿದೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಎ. ಜೆ. ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

 

LEAVE A REPLY

Please enter your comment!
Please enter your name here

Hot Topics

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.ದಕ್ಷಿಣ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...