Saturday, November 27, 2021

ಬಂಟ್ವಾಳದಲ್ಲಿ ರಾಷ್ಟ್ರಧ್ವಜಕ್ಕೆ ಇದೆಂಥ ಅವಮಾನ..!?

ಬಂಟ್ವಾಳದಲ್ಲಿ ರಾಷ್ಟ್ರಧ್ವಜಕ್ಕೆ ಇದೆಂಥ ಅವಮಾನ..!?

ಬಂಟ್ವಾಳ : ರಾಷ್ಟ್ರಧ್ವಜ ರಾಷ್ಟ್ರೀಯತೆಯ ಸಂಕೇತ. ದೇಶದ ಏಕತೆಯ ಸಂಕೇತವಾಗಿದ್ದು ಅದರದ್ದೇ ಪಾವಿತ್ರ್ಯತೆ ಇದೆ. ಪ್ರತಿಯೊಬ್ಬ ನಾಗರಿಕ ರಾಷ್ಟ್ರ ಧ್ವಜಕ್ಕೆ ಗೌರವ ಕೊಡಲೇ ಬೇಕು.

ಆದರೆ ತ್ರಿವರ್ಣ ಧ್ವಜಕ್ಕೆ ಗ್ರಾಮ ಪಂಚಾಯತ್‌ನಿಂದಲೇ ಅವಮಾನ‌ ವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾ.ಪಂ ನಲ್ಲಿ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.

ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಿ ಅಗೌರವ ತೋರಿಸಿದೆ ಗ್ರಾಮ ಪಂಚಾಯತ್. ಅಷ್ಟೇ ಅಲ್ಲ ರಾತ್ರಿ ಪೂರ್ತಿ ಕತ್ತಲಲ್ಲೇ ಉಲ್ಟಾ ಹಾರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನ ಕೂಡ ಮಾಡಲಾಗಿದೆ.

ಆಗಸ್ಟ್ 15 ರ ಸ್ವಾತಂತ್ರ್ಯದ ದಿನ ಮುಂಜಾನೆ ಹಾರಿಸಿದ ಧ್ವಜ ನಿನ್ನೆ ರಾತ್ರಿ ತನಕ ಪಂಚಾಯತ್ ಎದುರಿ ಧ್ವಜ ಸ್ತಂಭದಲ್ಲಿ ಹಾರಾಡುತ್ತಿತ್ತು ಎಂದು ಸ್ಥಳೀಯ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿ ಗ್ರಾ.ಪಂ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು ಮಾತ್ರವಲ್ಲ ಕ್ರಮಕ್ಕೂ ಆಗ್ರಹಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...